ಸಿಡಿ ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಸ್ವಾಗತಿಸಿದ ಸತೀಶ್ ಜಾರಕಿಹೊಳಿ

ಬೆಳಗಾವಿ, ಮಾರ್ಚ್ 12: ಸಿಡಿ ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಸ್ವಾಗತಾರ್ಹ. ಆದರೆ, ಯಾವುದೇ ಪ್ರಕರಣದಲ್ಲಾಗಲಿ ಎಸ್ಐಟಿ ವರದಿಯನ್ನಷ್ಟೇ ನೀಡುತ್ತದೆ. ಎಫ್ಐಆರ್ ದಾಖಲಾದರೆ ಮಾತ್ರ ಅಪರಾಧಿಗಳಿಗೆ ಶಿಕ್ಷೆ ನೀಡಲು ಸಾಧ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದರು.

ಬೆಳಗಾವಿ ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಐಟಿ ರಚನೆ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸೇರಿದಂತೆ ಕೆಲವು ಮುಖಂಡರು ವ್ಯಕ್ತಪಡಿಸಿರುವ ಅಭಿಪ್ರಾಯ ಸರಿ ಇದೆ ಎಂದರು.

ಸಿಡಿ ಪ್ರಕರಣದಿಂದ ಜಾರಕಿಹೊಳಿ ಕುಟುಂಬದ ಗೌರವಕ್ಕೆ ಸ್ಪಲ್ಪ ಮಟ್ಟಿಗೆ ಧಕ್ಕೆಯಾಗಿರಬಹುದು. ಆದರೆ, ನಮ್ಮೊಡನೆ ಅಪಾರ ಬೆಂಬಲಿಗರು ಇದ್ದಾರೆ. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಲಿ. ಸತ್ಯಾಸತ್ಯತೆ ಹೊರಬರಲಿ ಆಗ ಎಲ್ಲವೂ ಸ್ಪಷ್ಟವಾಗಲಿದೆ ಎಂದು ಹೇಳಿದರು.

Belagavi: Satish Jarkiholi Welcomes SIT Formation To Probe Ramesh Jarkiholi CD Case

ನಾನು ಬಾಗಲಕೋಟೆಯ ನಿಡಗುಂದಿಗೆ ಭೇಟಿ ನೀಡಿದ್ದೆ ಎಂಬುದು ಕೇವಲ ಊಹಾಪೋಹ ಎಂದು ಪತ್ರಕರ್ತರ ಪ್ರಶ್ನೆಗೆ ಅವರು ಸ್ಪಷ್ಟನೆ ನೀಡಿದರು.

ಉಪ ಚುನಾವಣೆ ವಿಳಂಬಕ್ಕೆ ಕೆಲವು ಮುಖಂಡರು ಆಕ್ಷೇಪ ವ್ಯಕ್ತಪಡಿಸುತ್ತಿರುವುದು ಸರಿ ಇದೆ. ಆದರೆ, ಏಪ್ರಿಲ್ ಕೊನೆಯ ವಾರದವರೆಗೆ ಚುನಾವಣಾ ನಡೆಸಲು ಅವಕಾಶವಿದೆ. ಹೀಗಾಗಿ, ಕಾದು ನೋಡೋಣ. ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ದಿನಾಂಕ ಪ್ರಕಟವಾದ ನಂತರವೇ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಲಾಗುವುದು ಎಂದು ತಿಳಿಸಿದರು.

ಮಾಜಿ ಶಾಸಕ ಮಧು ಬಂಗಾರಪ್ಪ ಸೇರಿ ಅನೇಕರು ಕಾಂಗ್ರೆಸ್ ಪಕ್ಷಕ್ಕೆ ಬರುತ್ತಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲೂ ಮುಂದಿನ ದಿನಗಳಲ್ಲಿ ಅನೇಕ ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ. ಪಕ್ಷಕ್ಕೆ ಬರುವವರನ್ನು ಸೇರಿಸಿಕೊಳ್ಳಲು ಎಲ್ಲ ಜಿಲ್ಲಾಧ್ಯಕ್ಷರಿಗೆ ಪತ್ರ ಬರೆಯಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+