• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೊಟ್ಟೆ ಖರೀದಿಗೆ ಲಂಚ; ಶಶಿಕಲಾ ಜೊಲ್ಲೆ ವಿರುದ್ಧ ದೂರು

|
Google Oneindia Kannada News

ಬೆಂಗಳೂರು, ಜುಲೈ 27; ಮೊಟ್ಟೆ ಖರೀದಿಯ ಟೆಂಡರ್‌ಗೆ ಸಂಬಂಧಿಸಿದಂತೆ 1 ಕೋಟಿಗೂ ಹೆಚ್ಚು ಹಣಕ್ಕಾಗಿ ಬೇಡಿಕೆ ಇಟ್ಟ ಆರೋಪ ಶಶಿಕಲಾ ಜೊಲ್ಲೆ ವಿರುದ್ಧ ಕೇಳಿ ಬಂದಿದೆ. ಈ ಕುರಿತು ಬೆಳಗಾವಿಯಲ್ಲಿ ಲೋಕಾಯುಕ್ತರಿಗೆ ದೂರನ್ನು ಸಹ ನೀಡಲಾಗಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿದ್ದ ಶಶಿಕಲಾ ಜೊಲ್ಲೆ ವಿರುದ್ಧ ಬೆಳಗಾವಿ ಲೋಕಾಯುಕ್ತ ಕಚೇರಿಗೆ ವಕೀಲರಾದ ಸುರೇಂದ್ರ ಉಗಾರೆ ದೂರು ನೀಡಿದ್ದಾರೆ. ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ, ಚಿಕ್ಕೋಡಿಯ ಸಂಜಯ ಅರಗೆ, ಸಚಿವರ ಆಪ್ತ ಕಾರ್ಯದರ್ಶಿ ಪ್ರಶಾಂತ ಘಾಟಗೆ ವಿರುದ್ಧವೂ ದೂರು ನೀಡಲಾಗಿದೆ.

ಮಕ್ಕಳಿಗೆ ಮೊಟ್ಟೆ ಖರೀದಿಯಲ್ಲಿ ಲಂಚ: ಆರೋಪ ನಿರಾಕರಿಸಿದ ಸಚಿವೆ ಶಶಿಕಲಾ ಜೊಲ್ಲೆಮಕ್ಕಳಿಗೆ ಮೊಟ್ಟೆ ಖರೀದಿಯಲ್ಲಿ ಲಂಚ: ಆರೋಪ ನಿರಾಕರಿಸಿದ ಸಚಿವೆ ಶಶಿಕಲಾ ಜೊಲ್ಲೆ

ಸಚಿವರ ವಿರುದ್ಧ ಸುದ್ದಿ ವಾಹಿನಿ 'ನ್ಯೂಸ್‌ ಫಸ್ಟ್‌'ನಲ್ಲಿ ರಹಸ್ಯ ಕಾರ್ಯಾಚರಣೆ ಪ್ರಸಾರವಾಗಿತ್ತು. ಈ ವರದಿಯನ್ನು ಆಧಾರವಾಗಿಟ್ಟುಕೊಂಡು ದೂರು ನೀಡಲಾಗಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದು, ಸಚಿವ ಸಂಪುಟ ವಿಸರ್ಜನೆಗೊಂಡಿದೆ.

ರಾಜೀನಾಮೆ ನೀಡುವವರೆಗೂ ಸಚಿವೆ ಶಶಿಕಲಾ ಜೊಲ್ಲೆಗೆ ಕಾಂಗ್ರೆಸ್‌ನಿಂದ ಮೊಟ್ಟೆ ಕೊಡುವ ಅಭಿಯಾನ!ರಾಜೀನಾಮೆ ನೀಡುವವರೆಗೂ ಸಚಿವೆ ಶಶಿಕಲಾ ಜೊಲ್ಲೆಗೆ ಕಾಂಗ್ರೆಸ್‌ನಿಂದ ಮೊಟ್ಟೆ ಕೊಡುವ ಅಭಿಯಾನ!

ಶಶಿಕಲಾ ಜೊಲ್ಲೆ ಆಪ್ತ ಕಾರ್ಯದರ್ಶಿ ಪ್ರಶಾಂತ ಘಾಟಗೆ ಸಚಿವೆಯನ್ನು ಭೇಟಿ ಮಾಡಿಸಿದ್ದು ಗಂಗಾವತಿ ಶಾಸಕ ಪರಣ್ಣ ಜೊಲ್ಲೆಗೆ 1 ಕೋಟಿ ರೂ. ನೀಡಬೇಕು ಹಾಗೂ ತಮಗೆ ರೂ 30 ಲಕ್ಷ ತಿಂಗಳಿಗೆ ಕೊಡಬೇಕು ಎಂದು ಮಾತನಾಡಿರುವುದು ವಿಡಿಯೋದಲ್ಲಿದೆ.

 ಬಿಎಸ್‌ವೈ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣ ರದ್ದು: ರಾಜ್ಯಪಾಲರ ನಡೆ ಬಗ್ಗೆ ಸಂಶಯ ಬಿಎಸ್‌ವೈ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣ ರದ್ದು: ರಾಜ್ಯಪಾಲರ ನಡೆ ಬಗ್ಗೆ ಸಂಶಯ

ಗಂಗಾವತಿ ಶಾಸಕರು ಮುಂಗಡವಾಗಿ 1 ಉಂಗರವನ್ನು ಪಡೆದುಕೊಂಡಿದ್ದು ರಹಸ್ಯ ಕಾರ್ಯಾಚರಣೆಯಲ್ಲಿ ಬಯಲಾಗಿದೆ. ನಾಲ್ವರೂ ಭ್ರಷ್ಟಾಚಾರ ಎಸಗಿದ್ದು ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ.

ಸ್ಪಷ್ಟನೆ ನೀಡಿದ್ದ ಸಚಿವರು; ಮೊಟ್ಟೆ ಖರೀದಿಯಲ್ಲಿ ಟೆಂಡರ್‌ನಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿದೆ ಎಂದು ಶಶಿಕಲಾ ಜೊಲ್ಲೆ ಹೇಳಿದ್ದರು. ಇಲಾಖೆಯಿಂದ ಮೊಟ್ಟೆ ಖರೀದಿಗಾಗಿ ಯಾವುದೇ ಟೆಂಡರ್ ಕರೆದಿಲ್ಲ ಮೊಟ್ಟೆ ಪೂರೈಕೆ ಗುತ್ತಿಗೆ ನೀಡುವುದಕ್ಕೆ ನಾನು ಯಾವುದೇ ವ್ಯಕ್ತ ಅಥವ ಸಂಸ್ಥೆಯಿಂದ ಹಣ ಪಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

English summary
Complaint to lokayukta against Shashikala Jolle after a Kannada news channel sting operation alleging bribery in the tender process for the supply of eggs to come to light.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X