• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜ.1ರಿಂದ ಶಾಲಾ-ಕಾಲೇಜು ಆರಂಭ: ರಂಗೋಲಿ ಹಾಕಿ ವಿದ್ಯಾರ್ಥಿಗಳಿಗೆ ಸ್ವಾಗತ

By ಬೆಳಗಾವಿ ಪ್ರತಿನಿಧಿ
|

ಬೆಳಗಾವಿ, ಜನೆವರಿ 1: ರಾಜ್ಯಾದ್ಯಂತ ಇಂದು ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ತರಗತಿ ಆರಂಭವಾಗಿರುವ ಹಿನ್ನೆಲೆ, ಶಾಲಾ ಸಿಬ್ಬಂದಿಯು ರಂಗೋಲಿ ಹಾಕಿ ವಿದ್ಯಾರ್ಥಿಗಳಿಗೆ ಸ್ವಾಗತ ಕೋರಿದ್ದಾರೆ.

ಬೆಳಗಾವಿಯ ಸರ್ದಾರ ಸರ್ಕಾರಿ ಶಾಲೆಯಲ್ಲಿ ಸಕಲ ವ್ಯವಸ್ಥೆ ಮಾಡಲಾಗಿದ್ದು, ಸರ್ಕಾರದ ಕೊರೊನಾ ಮಾರ್ಗಸೂಚಿಯಂತೆ ಎಲ್ಲಾ ರೀತಿಯ ಸುರಕ್ಷಾ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ತರಗತಿಗಳಲ್ಲಿಯೂ ಶಾಲಾ ಸಿಬ್ಬಂದಿ ಸ್ಯಾನಿಟೈಸೇಷನ್ ಮಾಡಿದರು.

ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಕೈ ಕೊಟ್ಟು ಗ್ರಾ.ಪಂ ಚುನಾವಣೆಗೆ ಸ್ಪರ್ಧಿಸಿದ್ದ ಹಾಲಿ ಜಿ.ಪಂ ಸದಸ್ಯೆಗೆ ಸೋಲು

ಸಿಬ್ಬಂದಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರನ್ನು ತರಗತಿಗೆ ಕಳಿಸುತ್ತಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಒಂದು ತರಗತಿಯಲ್ಲಿ 15 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 2381, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 3166 ಶಾಲೆಗಳು ಪುನರ್ ಆರಂಭವಾಗಿವೆ. ಎರಡೂ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟು 8 ಲಕ್ಷ 93 ಸಾವಿರ 653 ವಿದ್ಯಾರ್ಥಿಗಳಿದ್ದಾರೆ.

ಶಾಲೆಗೆ ಆಗಮಿಸುವ ಶಿಕ್ಷಕರಿಗೂ ಕಡ್ಡಾಯ ಕೋವಿಡ್ ಟೆಸ್ಟ್ ಮಾಡಲಾಗುತ್ತಿದ್ದು, ಬೆಳಗಾವಿ ಜಿಲ್ಲೆಯಾದ್ಯಂತ ಮಕ್ಕಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಹೊಸ ವರ್ಷದ ಮೊದಲ ದಿನವೇ ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳು ಆಗಮಿಸುತ್ತಿದ್ದು, ವಿದ್ಯಾರ್ಥಿಗಳ ಪ್ರತಿಕ್ರಿಯೆ ಕಂಡು ಶಿಕ್ಷಣ ಇಲಾಖೆ ಸಿಬ್ಬಂದಿ ಖಷಿಪಟ್ಟಿದ್ದಾರೆ. ಮಕ್ಕಳ ಆರೋಗ್ಯದ ಕಡೆಗೆ ಬೆಳಗಾವಿ ಜಿಲ್ಲೆಯಾದ್ಯಂತ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

English summary
SSLC and Secondary PUC Classes has commenced today and school staff are welcoming students.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X