ಬೆಳಗಾವಿ: 7 ಕಾರುಗಳಿಗೆ ಬೆಂಕಿ ಇಟ್ಟು ಪರಾರಿಯಾದ ದುಷ್ಕರ್ಮಿಗಳು
ಬೆಳಗಾವಿ, ಜನವರಿ 17: ಬೆಳಗಾವಿಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ ತಾರಕಕ್ಕೇರಿದೆ, ಮನೆಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ ಹಚ್ಚಿರುವ ಘಟನೆ ಬೆಳಗಾವಿಯ ಜಾಧವ್ ನಗರದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಹೆಲ್ಮೇಟ್ ಧರಿಸಿ ಬಂದ ದುಷ್ಕರ್ಮಿಗಳು, ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ ಹಚ್ಚಿದ್ದಾರೆ ಸಂದರ್ಭದಲ್ಲಿ 7 ಕಾರುಗಳು ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಅಗನಿಶಾಮಕ ಸಿಬ್ಬಂದಿಗಳು ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಎಲ್ಲರೂ ನಿದ್ದೆಯಲ್ಲಿರುವ ಸಂದರ್ಭ ನೋಡಿ ಕೃತ್ಯ ಎಸಗಿದ್ದಾರೆ.

ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಡರಾತ್ರಿ ನಡೆದ ಘಟನೆಗೆ ಸಂಬಂಧಿಸಿದಂತೆ ದುಷ್ಕರ್ಮಿಗಳನ್ನು ಹಿಡಿಯಲು ತಂಡ ರಚನೆ ಮಾಡಲಾಗಿದೆ ಎಂದು ಬೆಳಗಾವಿ ಪೊಲೀಸ್ ಕಮಿಷನರ್ ಡಿ.ಸಿ. ರಾಜಪ್ಪ ಮಾಹಿತಿ ನೀಡಿದ್ದಾರೆ.

ಕಲಬುರಗಿಯಲ್ಲಿ ಮೂರು ದಿನಗಳ ಹಿಂದೆ ಇಂತಹದ್ದೇ ಘಟನೆಯೊಂದು ನಡೆದಿದ್ದು ವಿವಿಧೆಡೆ ದುಷ್ಕರ್ಮಿಗಳು ಮನೆಯ ಎದುರು ನಿಲ್ಲಿಸಿದ್ದ ಮೂರು ಕಾರುಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದರು. ಅದಾದ ನಂತರ ಮರುದಿನವೇ ಕಲಬುರಗಿಯಲ್ಲಿ ನಿಲ್ಲಿಸಿದ್ದ ಮತ್ತೊಂದು ಕಾರಿಗೆ ಬೆಂಕಿ ಹಚ್ಚಲಾಗಿತ್ತು.












Click it and Unblock the Notifications