• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ; 7 ಕಾರ್ಮಿಕರ ಸಾವು

|

ಬೆಳಗಾವಿ, ಅಕ್ಟೋಬರ್ 3: ಬೆಳಗಾವಿಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಏಳು ಜನ ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.

ಬೊಲೆರೋ ಹಾಗೂ ಟಾಟಾ ಏಸ್ ಮಧ್ಯೆ ನಡೆದ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 10ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಬ್ಬ ಮಹಿಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 7 ಆಗಿದೆ. ಮೃತರೆಲ್ಲರೂ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚಿಂಚನೂರು ಗ್ರಾಮದವರು ಎಂದು ತಿಳಿದುಬಂದಿದೆ. ಆರು ಜನ ಮಹಿಳೆಯರು ಹಾಗೂ ಓರ್ವ ಪುರುಷ ಕಾರ್ಮಿಕರು ಘಟನೆಯಲ್ಲಿ ಸಾವನ್ನಪ್ಪಿದ್ದಾರೆ.

ಕಾರವಾರ ಕಡಲಿನಲ್ಲಿ ದುರಂತ, ನೌಕಾದಳ ಅಧಿಕಾರಿ ಸಾವು

ಧಾರವಾಡ ತಾಲೂಕಿನ ‌ಮೊರಬ್ ಗ್ರಾಮದಲ್ಲಿ ಇವರೆಲ್ಲ ಕೂಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮರಳಿ ಮನೆಗೆ ಹೋಗುವಾಗ, ಕಾರ್ಮಿಕರಿದ್ದ ಟಾಟಾ ಏಸ್ ವಾಹನ ಹಾಗೂ ಬೊಲೆರೋ ವಾಹನದ ಮಧ್ಯೆ ಸವದತ್ತಿ ಪಟ್ಟಣದ ಹೊರವಲಯದಲ್ಲಿ ಮುಖಾಮುಖಿ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ 10ಕ್ಕೂ ಅಧಿಕ ಜನ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯ ಆಸ್ಪತ್ರೆಯಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತರ ಹೆಸರು ಇನ್ನೂ ತಿಳಿದುಬಂದಿಲ್ಲ. ಸವದತ್ತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Seven people dies and 10 more people injured in an accident between tata ace and bolero at savadatti outskirts in belagavi district,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X