ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ: ಬಿಗಿ ಪೊಲೀಸ್ ಭದ್ರತೆಯಲ್ಲಿ ಕೊಳಚೆ ಸಂಸ್ಕರಣ ಘಟಕ ಕಾಮಗಾರಿ ಆರಂಭ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಜೂನ್ 22: ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರಿಗಳು, ಬಿಗಿ ಪೊಲೀಸ್ ಭದ್ರತೆಯಲ್ಲಿ ಕೊಳಚೆ ಸಂಸ್ಕರಣ ಘಟಕ ಕಾಮಗಾರಿಯನ್ನು ಆರಂಭಿಸಿದ್ದಾರೆ.

Recommended Video

Renukacharya was stopped by a volleyball team in Masadi , but why? | Oneindia Kannada

ಬೆಳಗಾವಿ ಜಿಲ್ಲೆಯ ಹಲಗಾ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಕಾಮಗಾರಿ ಆರಂಭವಾಗುತ್ತಿದ್ದಂತೆಯೇ, ರೈತರು ಅದಕ್ಕೆ ತೀವ್ರ ಪ್ರತಿರೋಧ ವ್ಯಕ್ತಪಡಿಸಿದ ಘಟನೆ ನಡೆಯಿತು.

ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ 4 ಕಡೆ ಎಸಿಬಿ ಅಧಿಕಾರಿಗಳ ದಾಳಿಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ 4 ಕಡೆ ಎಸಿಬಿ ಅಧಿಕಾರಿಗಳ ದಾಳಿ

ಸುಮಾರು 50 ಕ್ಕೂ ಹೆಚ್ಚು ರೈತರು ಸಂಸ್ಕರಣ ಘಟಕ ಕಾಮಗಾರಿಗೆ ವಿರೋಧ ವ್ಯಕ್ತಪಡಿಸಿದಾಗ, ರೈತ ಮುಖಂಡರು ಹಾಗೂ ಪಾಲಿಕೆ ಅಧಿಕಾರಿಗಳ ನಡುವೆ ಮಾತಿನ ಚಕಮಕಿಯೂ ನಡೆಯಿತು‌.

Belagavi: Sewage Processing Unit Works Started In Police Security

ನಾವು ನಮ್ಮ ಜಮೀನಿನಲ್ಲಿ ಮುಂಗಾರು ಬಿತ್ತನೆ ಮಾಡಿದ್ದೇವೆ. ಇಂತಹ ಸಂದರ್ಭದಲ್ಲಿ ಕಾಮಗಾರಿ ಆರಂಭಿಸುವುದು ಬೇಡ ಎಂದು ರೈತರು ಒತ್ತಾಯಿಸಿ ತಮ್ಮ ಆಕ್ರೋಶವನ್ನು ಹೊರಹಾಕಿದರು.

2016 ರಲ್ಲಿ ಬೆಳಗಾವಿ ಮಹಾನಗರ ಪಾಲಿಕೆ, ಕೇಂದ್ರ ಸರ್ಕಾರದ ಅಮೃತ ಸಿಟಿ ಯೋಜನೆಯ 160 ಕೋಟಿ ರೂ. ವೆಚ್ಚದಲ್ಲಿ ಹಲಗಾ ಬಳಿ ಕೊಳಚೆ ಸಂಸ್ಕರಣ ಘಟಕ ಮತ್ತು ಒಳಚರಂಡಿ ನಿರ್ಮಿಸಲು ನಿರ್ಧರಿಸಿ ಟೆಂಡರ್ ಪ್ರಕ್ರಿಯೆ ಮುಗಿಸಿದ್ದರು.

 ಬೆಳಗಾವಿಯಲ್ಲಿ ವಿನೂತನ Water public transportಗೆ ಶಾಸಕ ಅಭಯ ಪಾಟೀಲ ಪ್ಲಾನ್ ಬೆಳಗಾವಿಯಲ್ಲಿ ವಿನೂತನ Water public transportಗೆ ಶಾಸಕ ಅಭಯ ಪಾಟೀಲ ಪ್ಲಾನ್

ಆದರೆ 2016 ರಲ್ಲಿ ರೈತರು ಕೊಳಚೆ ಸಂಸ್ಕರಣಾ ಘಟಕ ನಿರ್ಮಾಣಕ್ಕೆ ವಿರೋಧ ವ್ಯೆಕ್ತಪಡಿಸಿದ ಹಿನ್ನಲೆಯಲ್ಲಿ ಈ ಕಾಮಗಾರಿ ನೆನೆಗುದಿಗೆ ಬಿದ್ದಿತ್ತು. ಈಗ ಟೆಂಡರ್ ಪ್ರಕ್ರಿಯೆ ಮುಗಿದು, ಬಿಗಿ ಪೊಲೀಸ್ ಭದ್ರತೆಯಲ್ಲಿ ಒಂದು ಕಡೆ ಕಾಮಗಾರಿ ಆರಂಭವಾದರೆ, ಇನ್ನೊಂದು ಕಡೆ ರೈತರ ಪ್ರತಿಭಟನೆ ಮುಂದುವರೆದಿದೆ.

English summary
Belagavi Mahanagara Palike Officers have begun work on sewage Proccesing Unit in tight police security.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X