ಶಾರ್ಟ್ ಸರ್ಕ್ಯೂಟ್ ನಿಂದ ಬೇಕರಿ ಸುಟ್ಟು ಭಸ್ಮ
ಗೋಕಾಕ, ಜನವರಿ 1 : ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಬೇಕರಿಯೊಂದು ಬೆಂಕಿಗೆ ಆಹುತಿಯಾಗಿರುವ ಘಟನೆ ಗೋಕಾಕ ತಾಲೂಕಿನ ಲೋಳಸೂರ ಗ್ರಾಮದಲ್ಲಿ ಭಾನುವಾರ ತಡ ರಾತ್ರಿ ನಡೆದಿದೆ.
ಲೋಳಸೂರ ಗ್ರಾಮದ ಎಸ್.ಎಂ ಮಕಾನದಾರ ಅವರ ಜಿ.ಎಂ ಬೇಕರಿಗೆ ಭಾನುವಾರ ತಡ ರಾತ್ರಿ 12.30 ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ಬೇಕರಿಯಲ್ಲಿದ್ದ ಫ್ರಿಡ್ಜ್ ಸೇರಿದಂತೆ ಇನನ್ಇತರೆ ಬೆಲೆ ಬಾಳುವ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿದೆ.

ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಅಗ್ನಿ ನಂದಿಸಿ ಹೆಚ್ಚಿನ ಅವಘಡ ಆಗುವುದನ್ನು ತಪ್ಪಿಸಿದ್ದಾರೆ. ಅಂದಾಜು 4 ಲಕ್ಷಕ್ಕೂ ಹೆಚ್ಚಿನ ಹಾನಿಯಾಗಿದೆ ಎಂದು ಶಂಕಿಸಲಾಗುತ್ತಿದೆ. ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.













Click it and Unblock the Notifications