ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ್‌ಗೆ ಡೆಂಗ್ಯೂ

ಬೆಳಗಾವಿ, ಡಿಸೆಂಬರ್ 10: ಕಾಗವಾಡ ವಿಧಾನಸಭಾ ಉಪ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿರುವ ಶ್ರೀಮಂತ್ ಪಾಟೀಲ್‌ ಡೆಂಗ್ಯೂ ಜ್ವರದಿಂದ ನರಳುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಅವರು ಕೆಲ ದಿನಗಳಿಂದ ಡೆಂಗ್ಯೂ ಜ್ವರಕ್ಕೆ ತುತ್ತಾಗಿದ್ದು, ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಸಂಜೆ ಅವರನ್ನು ಮಹಾರಾಷ್ಟ್ರದ ಸಾಂಗ್ಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ತೊಂದರೆ ಇಲ್ಲ ಇಂದು ಸಂಜೆ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ಅವರ ಪುತ್ರ ಶ್ರೀನಿವಾಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.

Shrimanth Patil Is suffering From Dengue

ಡಿಸೆಂಬರ್ 5ರಂದು 15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದ್ದು, ಡಿಸೆಂಬರ್ 9ರಂದು ಫಲಿತಾಂಶ ಹೊರಬಿದ್ದಿದೆ. ಕಾಗವಾಡ ವಿಧಾನಸಭಾ ಕ್ಷೇತ್ರ ಸಹ ಬಿಜೆಪಿ ತೆಕ್ಕೆಗೆ ಬಿದ್ದಿದೆ. ಶ್ರೀಮಂತ್ ಪಾಟೀಲ್ ಪರ ಮತದಾರರು ತೀರ್ಪು ನೀಡಿದ್ದಾರೆ. ಕಾಂಗ್ರೆಸ್‌ನ ರಾಜು ಕಾಗೆ ಮತ್ತು ಜೆಡಿಎಸ್‌ನ ಶ್ರೀಶೈಲ ತುಗಶೆಟ್ಟಿ ವಿರುದ್ಧ ಶ್ರೀಮಂತ್ ಪಾಟೀಲ್ ಗೆಲುವು ಸಾಧಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+