ಬೆಳಗಾವಿಯಲ್ಲಿ ಗುರುವಾರ ಸಿಎಂ, ಸೋನಿಯಾ ಭೇಟಿ

ಬೆಳಗಾವಿ, ಅ.8 : ನಿಗಮ ಮಂಡಳಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ನೇಮಕದ ಬಗ್ಗೆ ಸಿಎಂ ಸಿದ್ದರಾಮಯ್ಯ ಗುರುವಾರ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಬೆಳಗಾವಿಯಲ್ಲಿ ಸಿಎಂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲಿದ್ದು, ಅಧ್ಯಕ್ಷ ಮತ್ತು ಉಪಾಧ್ಯಕ್ಷ ಪಟ್ಟಿ ಬಗ್ಗೆ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಗುರುವಾರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಪ್ರಚಾರಕ್ಕೆ ಆಗಮಿಸಲಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬೆಳಗ್ಗೆ 10 ಗಂಟೆ ಸುಮಾರಿಗೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿಗೆ ತೆರಳಲಿದ್ದು, ಸೋನಿಯಾ ಗಾಂಧಿ ಭೇಟಿ ಮಾಡಲಿದ್ದಾರೆ.

Sonia Gandhi

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸೋನಿಯಾ ಗಾಂಧಿ ಅವರು ಸುಮಾರು ಒಂದು ತಾಸು ವಿಶ್ರಾಂತಿ ತೆಗೆದುಕೊಳ್ಳಲಿದ್ದು, ಈ ಸಮಯದಲ್ಲಿ ಸಿಎಂ ಮತ್ತು ಪರಮೇಶ್ವರ್ ಅವರನ್ನು ಭೇಟಿ ಮಾಡಿ ನಿಗಮ ಮಂಡಳಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ನೇಮಕಾತಿ ಸೇರಿದಂತೆ ರಾಜ್ಯ ಕಾಂಗ್ರೆಸ್ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. [ದಸರಾ ನಂತರ ನಿಗಮ-ಮಂಡಳಿಗಳಿಗೆ ನೇಮಕಾತಿ]

ದಸರಾ ನಂತರ ನಿಗಮ ಮಂಡಳಿಗಳ ನೇಮಕದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಹೇಳಿದ್ದರು. ಈಗಾಗಲೇ ಪಟ್ಟಿಯನ್ನು ಸಿದ್ಧಪಡಿಸಿರುವ ನಾಯಕರು ಸೋನಿಯಾ ಗಾಂಧಿ ಅವರರೊಂದಿಗೆ ಈ ಕುರಿತು ಮಾತುಕತೆ ನಡೆಸಿ, ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. [ನಿಗಮ-ಮಂಡಳಿ ನೇಮಕಕ್ಕೆ ಎಐಸಿಸಿ ಮಾರ್ಗಸೂಚಿಗಳು]

ಪರಮೇಶ್ವರ್ ಪ್ರಚಾರಕ್ಕೆ : ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಹ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಪ್ರಚಾರ ನಡೆಸಲಿದ್ದು, ಪರಮೇಶ್ವರ್ ನಾಳೆಯಿಂದಲೇ ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ. ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು, ಅ.10ರ ನಂತರ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಅ.15ರಂದು ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+