ಕೊರೊನಾ ಹಿನ್ನೆಲೆಯಲ್ಲಿ ಸರಳ ಕನಕದಾಸ ಜಯಂತಿ ಆಚರಣೆ
ಬೆಳಗಾವಿ, ನವೆಂಬರ್ 25: ಕೋವಿಡ್-19 ಹಿನ್ನೆಲೆಯಲ್ಲಿ ಡಿ.3 ರಂದು ಕನಕದಾಸ ಜಯಂತಿಯನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ಕನಕದಾಸ ಜಯಂತಿ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಡಿ.3 ರಂದು ಬೆಳಿಗ್ಗೆ 9.30 ಗಂಟೆಗೆ ಬುಡಾ ಕಚೇರಿ ಬಳಿಯಿರುವ ಕನಕದಾಸ ವೃತ್ತದಲ್ಲಿ, ಕನಕದಾಸ ಭಾವಚಿತ್ರಕ್ಕೆ ಮಾಲಾರ್ಪಣೆ ನಡೆಯಲಿದೆ. ಇದಾದ ಬಳಿಕ ರಂಗಮಂದಿರದ ಆವರಣದಲ್ಲಿರುವ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಕನಕದಾಸರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.

ಇದೇ ವೇಳೆ ಮಾತನಾಡಿದ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಸಾರ್ವಜನಿಕ ಹಿತದೃಷ್ಟಿಯಿಂದ ಕೋವಿಡ್-19 ನಿಯಮಗಳನ್ನು ಉಲ್ಲಂಘನೆ ಮಾಡದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸರಳ ರೀತಿಯಲ್ಲಿ ಕನಕದಾಸ ಜಯಂತಿಯನ್ನು ಆಚರಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.












Click it and Unblock the Notifications