ಬೆಳಗಾವಿ; ಡಿಕೆಶಿ ಬೆಂಬಲಿಗರ ವಾಹನದ ಮೇಲೆ ಚಪ್ಪಲಿ ಎಸೆತ

ಬೆಳಗಾವಿ, ಮಾರ್ಚ್ 28; ಡಿ. ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳಗಾವಿಗೆ ಆಗಮಿಸಿದ ಅವರ ವಿರುದ್ಧ ಪ್ರತಿಭಟನೆಯನ್ನು ಮಾಡಿದರು.

ಭಾನುವಾರ ಮಧ್ಯಾಹ್ನ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಡಿ. ಕೆ. ಶಿವಕುಮಾರ್‌ಗೆ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ವಿಮಾನ ನಿಲ್ದಾಣದ ಹೊರಗೆ ಅವರ ವಿರುದ್ಧ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸಿದರು.

ವಿಮಾನ ನಿಲ್ದಾಣದಿಂದ ಡಿ. ಕೆ. ಶಿವಕುಮಾರ್ ಹೋಟೆಲ್‌ಗೆ ಹೋಗುವಾಗ ಅವರ ಬೆಂಗಾವಲು ವಾಹನದ ಮೇಲೆ ಚಪ್ಪಲಿ ತೂರಲಾಯಿತು. ಕಪ್ಪು ಬಾವುಟ ಎಸೆಯಲಾಯಿತು, ಕಲ್ಲನ್ನು ತೂರಲಾಯಿತು. ಡಿ. ಕೆ. ಶಿವಕುಮಾರ್ ಬೆಂಬಲಿಗರ ವಾಹನದ ಗಾಜು ಪುಡಿಯಾಗಿದೆ.

Slipper Thrown At DK Shivakumar Convoy Near Airport

ರಮೇಶ್ ಜಾರಕಿಹೊಳಿ ಬೆಂಬಲಿಗರನ್ನು ಪೊಲೀಸರ ತಡೆಯುವ ಪ್ರಯತ್ನ ಮಾಡಿದರು. ಈ ಸಂದರ್ಭದಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ ಅವರನ್ನು ಎಳೆದಾಡಿದ ಪ್ರಸಂಗವೂ ನಡೆಯಿತು.

ಕಾರು ಅಡ್ಡಗಟ್ಟಿದರು; ಡಿ. ಕೆ. ಶಿವಕುಮಾರ್ ಬೆಳಗಾವಿ ನಗರ ಪ್ರವೇಶಿಸುತ್ತಿದ್ದಂತೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಅವರ ಕಾರನ್ನು ಅಡ್ಡಗಟ್ಟಿದರು. ಕಾರಿಗೆ ಗುದ್ದಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಡಿ. ಕೆ. ಶಿವಕುಮಾರ್ ಕಾರನ್ನ ಅಡ್ಡಗಟ್ಟಲು ಪ್ರಯತ್ನ ನಡೆಸಿರುವುದನ್ನು ಕರ್ನಾಟಕ ಕಾಂಗ್ರೆಸ್ ಖಂಡಿಸಿದೆ. ಈ ಕುರಿತು ಟ್ವೀಟ್ ಮಾಡಿದೆ.

ಬೆಳಗಾವಿ ಉಪ ಚುನಾವಣೆ; ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಡಿ. ಕೆ. ಶಿವಕುಮಾರ್, "ಸೋಮವಾರ ಸತೀಶ್ ಜಾರಕಿಹೊಳಿ ಉಪ ಚುನಾವಣೆಗೆ ನಾಮಪತ್ರವನ್ನು ಸಲ್ಲಿಸಲಿದ್ದಾರೆ" ಎಂದರು.

"ಕರ್ನಾಟಕದಿಂದ ಆಯ್ಕೆಯಾಗಿ ಹೋದ ಸಂಸದರು ಬೆಲೆ ಏರಿಕೆ ಬಗ್ಗೆ ಮಾತನಾಡಿಲ್ಲ. ನಾಡಿನ ಸಮಸ್ಯೆಗಳ ಬಗ್ಗೆ ಮಾತನಾಡಿಲ್ಲ. ರಾಜ್ಯದಿಂದ ಸತೀಶ್ ಜಾರಕಿಹೊಳಿ 2ನೇ ಕಾಂಗ್ರೆಸ್ ಸಂಸದರಾಗಿ ಲೋಕಸಭೆ ಪ್ರವೇಶಿಸಲಿದ್ದಾರೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

"ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದಾಗಿ ಉಪ ಚುನಾವಣೆ ಎದುರಾಗಿದೆ. ಬಿಜೆಪಿಯ ಜನವಿರೋಧಿ ನೀತಿಗಳೇ ನಮಗೆ ಬೆಂಬಲವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಉಪ ಚುನಾವಣೆಯಲ್ಲಿ ಗೆಲ್ಲುವುದು ನಿಶ್ಚಿತ" ಎಂದು ಡಿ. ಕೆ. ಶಿವಕುಮಾರ್ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+