ಬೆಳಗಾವಿ : ಜಿಲ್ಲಾ ಆಸ್ಪತ್ರೆಗಳಲ್ಲಿ ಸೌರ ವಿದ್ಯುತ್ ಉತ್ಪಾದನೆ
ಬೆಳಗಾವಿ, ನವೆಂಬರ್ 14 : ಬೆಳಗಾವಿ ಜಿಲ್ಲೆಯಲ್ಲಿ ಆಸ್ಪತ್ರೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾದರೆ ಜನರೇಟರ್ ಮೊರೆ ಹೋಗಬೇಕಿತ್ತು. ಆದರೆ, ಈಗ ಸೌರಶಕ್ತಿಯನ್ನು ಬಳಕೆ ಮಾಡಿಕೊಂಡು ವಿದ್ಯುತ್ ಉತ್ಪಾದನೆ ಮಾಡುತ್ತಿದ್ದು, ಹಣ ಉಳಿತಾಯವಾಗುತ್ತಿದೆ.
ಬೆಳಗಾವಿಯಲ್ಲಿ ಜಿಲ್ಲಾಸ್ಪತ್ರೆ, 139 ಪ್ರಾಥಮಿಕ ಆರೋಗ್ಯ ಕೇಂದ್ರ, 16 ಸಮುದಾಯ ಆರೋಗ್ಯ ಕೇಂದ್ರ, 9 ತಾಲೂಕು ಆಸ್ಪತ್ರೆ ಮತ್ತು 12 ನಗರ ಆರೋಗ್ಯ ಕೇಂದ್ರಗಳಿವೆ. ಇವುಗಳಲ್ಲಿ 80 ಆಸ್ಪತ್ರೆಗಳು ದಿನದ 24 ಗಂಟೆಯೂ ಸೇವೆ ಒದಗಿಸುತ್ತಿವೆ.
ಈ ಆಸ್ಪತ್ರೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾದಾಗ ರೋಗಿಗಳಿಗೆ ತೊಂದರೆ ಆಗಬಾರದು ಎಂದು ಜನರೇಟರ್ ಮೊರೆ ಹೋಗಲಾಗುತ್ತಿತ್ತು. ಈಗ ಸೌರಶಕ್ತಿಯನ್ನು ಬಳಕೆ ಮಾಡಿಕೊಳ್ಳುವ ಕುರಿತು ಚಿಂತನೆ ನಡೆಸಿ, ಆಸ್ಪತ್ರೆ ಕಟ್ಟಡಗಳ ಮೇಲೆ ಸೌರಫಲಕ ಆಳವಡಿಸಲಾಗಿದೆ.

ಬಹುತೇಕ ಎಲ್ಲಾ ಆಸ್ಪತ್ರೆಗಳಲ್ಲಿ ಕನಿಷ್ಠ 5 ಕಿಲೋವಾಟ್, ಗರಿಷ್ಠ 10 ಕಿಲೋವಾಟ್ ಸಾಮರ್ಥ್ಯದ ಫಲಕಗಳನ್ನು ಅಳವಡಿಸಲಾಗಿದೆ. ಪ್ರತಿನಿತ್ಯ 40 ರಿಂದ 60 ಕೆ.ವಿ. ವಿದ್ಯುತ್ ಉತ್ಪಾದನೆಯಾಗುತ್ತಿದೆ. ಇದರಿಂದ ಸಾಂಪ್ರದಾಯಿಕ ವಿದ್ಯುತ್ ಮೇಲಿನ ಅವಲಂಬನೆ ಕಡಿಮೆ ಆಗಿದೆ.
ಸೌರ ಶಕ್ತಿಯ ಬಳಕೆ ಇಂದಿನ ಅಗತ್ಯಗಳಲ್ಲಿ ಒಂದಾಗಿದೆ. ಸಇದಕ್ಕಾಗಿ ಸರ್ಕಾರಿ ಆಸ್ಪತ್ರೆ ಗಳಲ್ಲಿ ಸೌರಶಕ್ತಿ ಘಟಕ ಸ್ಥಾಪನೆಗೆ ಆದ್ಯತೆ ನೀಡಲಾಗಿದೆ. ಕೇಂದ್ರ ಕಚೇರಿಯಿಂದಲೇ ಕೆಲವು ಆಸ್ಪತ್ರೆಗಳಿಗೆ ಸೌಲಭ್ಯ ಒದಗಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications