ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ : ಜಿಲ್ಲಾ ಆಸ್ಪತ್ರೆಗಳಲ್ಲಿ ಸೌರ ವಿದ್ಯುತ್ ಉತ್ಪಾದನೆ

|
Google Oneindia Kannada News

ಬೆಳಗಾವಿ, ನವೆಂಬರ್ 14 : ಬೆಳಗಾವಿ ಜಿಲ್ಲೆಯಲ್ಲಿ ಆಸ್ಪತ್ರೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾದರೆ ಜನರೇಟರ್ ಮೊರೆ ಹೋಗಬೇಕಿತ್ತು. ಆದರೆ, ಈಗ ಸೌರಶಕ್ತಿಯನ್ನು ಬಳಕೆ ಮಾಡಿಕೊಂಡು ವಿದ್ಯುತ್ ಉತ್ಪಾದನೆ ಮಾಡುತ್ತಿದ್ದು, ಹಣ ಉಳಿತಾಯವಾಗುತ್ತಿದೆ.

ಬೆಳಗಾವಿಯಲ್ಲಿ ಜಿಲ್ಲಾಸ್ಪತ್ರೆ, 139 ಪ್ರಾಥಮಿಕ ಆರೋಗ್ಯ ಕೇಂದ್ರ, 16 ಸಮುದಾಯ ಆರೋಗ್ಯ ಕೇಂದ್ರ, 9 ತಾಲೂಕು ಆಸ್ಪತ್ರೆ ಮತ್ತು 12 ನಗರ ಆರೋಗ್ಯ ಕೇಂದ್ರಗಳಿವೆ. ಇವುಗಳಲ್ಲಿ 80 ಆಸ್ಪತ್ರೆಗಳು ದಿನದ 24 ಗಂಟೆಯೂ ಸೇವೆ ಒದಗಿಸುತ್ತಿವೆ.

ವಿಶ್ವದ ಅತಿದೊಡ್ಡ ಸೋಲಾರ್ ಪಾರ್ಕ್ ವಿಶೇಷತೆಗಳುವಿಶ್ವದ ಅತಿದೊಡ್ಡ ಸೋಲಾರ್ ಪಾರ್ಕ್ ವಿಶೇಷತೆಗಳು

ಈ ಆಸ್ಪತ್ರೆಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾದಾಗ ರೋಗಿಗಳಿಗೆ ತೊಂದರೆ ಆಗಬಾರದು ಎಂದು ಜನರೇಟರ್ ಮೊರೆ ಹೋಗಲಾಗುತ್ತಿತ್ತು. ಈಗ ಸೌರಶಕ್ತಿಯನ್ನು ಬಳಕೆ ಮಾಡಿಕೊಳ್ಳುವ ಕುರಿತು ಚಿಂತನೆ ನಡೆಸಿ, ಆಸ್ಪತ್ರೆ ಕಟ್ಟಡಗಳ ಮೇಲೆ ಸೌರಫಲಕ ಆಳವಡಿಸಲಾಗಿದೆ.

ರಾಜಸ್ತಾನ ಸೋಲಾರ್ ಪಾರ್ಕ್ ನಲ್ಲಿ ಯೂನಿಟ್ ವಿದ್ಯುತ್ ಗೆ ಜಸ್ಟ್ ರು.2.62ರಾಜಸ್ತಾನ ಸೋಲಾರ್ ಪಾರ್ಕ್ ನಲ್ಲಿ ಯೂನಿಟ್ ವಿದ್ಯುತ್ ಗೆ ಜಸ್ಟ್ ರು.2.62

Solar power production in Belagavi district hospital

ಬಹುತೇಕ ಎಲ್ಲಾ ಆಸ್ಪತ್ರೆಗಳಲ್ಲಿ ಕನಿಷ್ಠ 5 ಕಿಲೋವಾಟ್‌, ಗರಿಷ್ಠ 10 ಕಿಲೋವಾಟ್‌ ಸಾಮರ್ಥ್ಯದ ಫಲಕಗಳನ್ನು ಅಳವಡಿಸಲಾಗಿದೆ. ಪ್ರತಿನಿತ್ಯ 40 ರಿಂದ 60 ಕೆ.ವಿ. ವಿದ್ಯುತ್‌ ಉತ್ಪಾದನೆಯಾಗುತ್ತಿದೆ. ಇದರಿಂದ ಸಾಂಪ್ರದಾಯಿಕ ವಿದ್ಯುತ್ ಮೇಲಿನ ಅವಲಂಬನೆ ಕಡಿಮೆ ಆಗಿದೆ.

ನವ ಮಂಗಳೂರು ಬಂದರಿನಲ್ಲಿ ಬಾಷ್ ನಿಂದ ಸೌರ ವಿದ್ಯುತ್ ಉತ್ಪಾದನೆನವ ಮಂಗಳೂರು ಬಂದರಿನಲ್ಲಿ ಬಾಷ್ ನಿಂದ ಸೌರ ವಿದ್ಯುತ್ ಉತ್ಪಾದನೆ

ಸೌರ ಶಕ್ತಿಯ ಬಳಕೆ ಇಂದಿನ ಅಗತ್ಯಗಳಲ್ಲಿ ಒಂದಾಗಿದೆ. ಸಇದಕ್ಕಾಗಿ ಸರ್ಕಾರಿ ಆಸ್ಪತ್ರೆ ಗಳಲ್ಲಿ ಸೌರಶಕ್ತಿ ಘಟಕ ಸ್ಥಾಪನೆಗೆ ಆದ್ಯತೆ ನೀಡಲಾಗಿದೆ. ಕೇಂದ್ರ ಕಚೇರಿಯಿಂದಲೇ ಕೆಲವು ಆಸ್ಪತ್ರೆಗಳಿಗೆ ಸೌಲಭ್ಯ ಒದಗಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

English summary
In a more than 60 government hospital's of the Belagavi district producing Solar power. 5 to 10 kilowatt solar power panel set up in the roof of the hospital building.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X