ಬೆಳಗಾವಿ ಗಡಿ ಸಮಸ್ಯೆ; ಸುವರ್ಣ ಸೌಧದಲ್ಲಿ ಕಛೇರಿ ಸ್ಥಾಪನೆ
ಬೆಳಗಾವಿ, ಮಾರ್ಚ್ 13: ಕರ್ನಾಟಕದ ಗಡಿನಾಡು ಬೆಳಗಾವಿ ಸದಾ ಸುದ್ದಿಯಲ್ಲಿರುವುದು ರಾಜಕೀಯ, ಗಡಿ ಮತ್ತು ಕನ್ನಡ ಭಾಷೆಯ ವಿಚಾರಕ್ಕೆ. ಸುವರ್ಣ ವಿಧಾನಸೌಧದಲ್ಲಿ ಕರ್ನಾಟಕ ಗಡಿ ಮತ್ತು ನದಿಗಳ ಸಂರಕ್ಷಣಾ ಆಯೋಗ ಕಛೇರಿಯನ್ನು ಶೀಘ್ರದಲ್ಲೇ ಸ್ಥಾಪನೆ ಮಾಡಲಾಗುತ್ತದೆ.
ಬುಧವಾರ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಕರ್ನಾಟಕ ಗಡಿ ಮತ್ತು ನದಿಗಳ ಸಂರಕ್ಷಣಾ ಆಯೋಗದ ಅಧ್ಯಕ್ಷ ಶಿವರಾಜ್ ಪಾಟೀಲ ಮಾತನಾಡಿದರು.

"ಸಾರ್ವಜನಿಕರು, ಕನ್ನಡಪರ ಸಂಘಟನೆಗಳ ಬೇಡಿಕೆಯಂತೆ ಗಡಿ ಹಾಗೂ ನದಿಗಳ ರಕ್ಷಣೆಗೆ ಸಂಬಂಧಿಸಿದಂತೆ ಸ್ಥಳೀಯ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಸ್ವೀಕರಿಸಲು ಅನುಕೂಲವಾಗುವಂತೆ ಗಡಿ ಆಯೋಗದ ಕಛೇರಿಯೊಂದನ್ನು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸ್ಥಾಪಿಸಲಾಗುವುದು" ಎಂದು ತಿಳಿಸಿದರು.
"ಗಡಿ ಮತ್ತು ನದಿಗಳ ಆಯೋಗಕ್ಕೆ ಸುವರ್ಣ ವಿಧಾನಸೌಧದಲ್ಲಿ ಎರಡು ಕೊಠಡಿಗಳನ್ನು ನೀಡುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಸದರಿ ಆಯೋಗವನ್ನು ಪುನರ್ ರಚನೆಗೆ ಕ್ರಮ ಕೈಗೊಂಡು ಶೀಘ್ರವೇ ಸುವರ್ಣ ಸೌಧದಲ್ಲಿ ಕಚೇರಿ ಸ್ಥಾಪಿಸಿ ಕಚೇರಿಗೆ ಆಯೋಗದ ಸ್ಥಳೀಯ ಸದಸ್ಯರೊಬ್ಬರನ್ನು ನಿಯೋಜಿಸುವ ಮೂಲಕ ಸ್ಥಳೀಯ ಗಡಿ ಹಾಗೂ ನದಿಗಳ ರಕ್ಷಣೆಗೆ ಸಂಬಂಧಿಸಿದಂತೆ ಜನರ, ಸಂಘ-ಸಂಸ್ಥೆಗಳ ಅಹವಾಲುಗಳನ್ನು ಸ್ವೀಕರಿಸಲಾಗುತ್ತದೆ" ಎಂದರು.
"ನಮ್ಮೆಲ್ಲರ ಉದ್ದೇಶ, ಭಾವನೇ ಹಾಗೂ ಮಾಡಬೇಕಾದ ಕೆಲಸ ಒಂದೇ ಆಗಿರುವುದರಿಂದ ಎಲ್ಲರೂ ಸೇರಿಕೊಂಡು ಸರಿಯಾದ ದಿಸೆಯಲ್ಲಿ ಕೆಲಸ ಮಾಡೋಣ. ಸಮಸ್ಯೆ ಹೊಸದಲ್ಲ. ವಿಳಂಬವೇ ದೊಡ್ಡ ಸಮಸ್ಯೆಯಾಗಿದೆ. ಕನ್ನಡಡಪರ ಸಂಘಟನೆಗಳ ಸಲಹೆಗಳ ಆಧಾರದ ಮೇಲೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು" ಎಂದು ಭರವಸೆ ನೀಡಿದರು.
"ನದಿಗಳು ಮತ್ತು ಗಡಿಗಳ ಸಮಸ್ಯೆ ಎದುರಾದಾಗ ಕಾನೂನಾತ್ಮಕವಾಗಿ ಯಾವ ರೀತಿಯಲ್ಲಿ ರಕ್ಷಣೆ ಮಾಡಬೇಕು ಎಂಬುದನ್ನು ಸರಕಾರಕ್ಕೆ ಸಲಹೆ ರೂಪದಲ್ಲಿ ವರದಿ ನೀಡುವ ಕೆಲಸವನ್ನು ಆಯೋಗ ಮಾಡಲಿದೆ. ಯಾವುದೇ ಕಾನೂನುಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುವಲ್ಲಿ ಅಧಿಕಾರಿಗಳ ಪಾತ್ರ ಮಹತ್ವದಾಗಿದ್ದು ಅದರಂತೆ ಬೆಳಗಾವಿಯಲ್ಲಿ ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಕನ್ನಡ ನಾಡು, ನುಡಿಗೆ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿರುವುದು ಸಂತಸದ ಸಂಗತಿ" ಎಂದು ಹೇಳಿದರು.
"ಗಡಿ ಸಮಸ್ಯೆಗಳನ್ನು ಸಂವಿಧಾನಾತ್ಮಕವಾಗಿ ಬಗೆಹರಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಿರಂತರವಾಗಿ ನಡೆದಿರುತ್ತವೆ. ಸುಪ್ರೀಂಕೋರ್ಟ್‌ನಲ್ಲಿ ಪ್ರಕರಣ ಪಟ್ಟಿಯಾದ ಬಳಿಕ ಸಮರ್ಥವಾಗಿ ವಾದ ಮಂಡನೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಗಡಿ ಸಮಸ್ಯೆಗಳನ್ನು ಸಂವಿಧಾನಾತ್ಮಕವಾಗಿ ಬಗೆಹರಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಿರಂತರವಾಗಿ ನಡೆದಿರುತ್ತವೆ" ಎಂದರು.
"ಕಾನೂನಾತ್ಮಕ ಹಾಗೂ ರಾಜಕೀಯವಾಗಿ ಹೋರಾಟಕ್ಕೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳ ಸಲಹೆಗಳು ಮತ್ತು ಹಕ್ಕೊತ್ತಾಯಗಳನ್ನು ಸರಕಾರದ ಗಮನಕ್ಕೆ ತರುವ ಮೂಲಕ ರಚನಾತ್ಮಕ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು. ಮಹಾರಾಷ್ಟ್ರ ಮಾದರಿಯಲ್ಲಿ ಗಡಿ ಸಚಿವರನ್ನು ನೇಮಕ ಮಾಡುವ ಬಗ್ಗೆ ಸರಕಾರದ ಗಮನಸೆಳೆಯಲಾಗುವುದು" ಎಂದು ಶಿವರಾಜ್ ಪಾಟೀಲ ಭರವಸೆ ನೀಡಿದರು.
ಎಂಇಎಸ್, ಶಿವಸೇನೆ ನಿಷೇಧಿಸಿ: ಕರ್ನಾಟಕ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಸಭೆಯಲ್ಲಿ ಮಾತನಾಡಿದ ಕನ್ನಡಪರ ಸಂಘಟನೆಯ ಮುಖಂಡ ದೀಪಕ ಗುಡಗನಟ್ಟಿ. "ಆಯೋಗದ ವತಿಯಿಂದ ಪ್ರತಿ ಮೂರು ತಿಂಗಳಿಗೊಮ್ಮೆ ನಿಯಮಿತವಾಗಿ ಸಭೆಗಳನ್ನು ನಡೆಸಿದರೆ ಗಡಿಭಾಗದ ಸಮಸ್ಯೆಗಳನ್ನು ಸರಕಾರದ ಗಮನಕ್ಕೆ ತರಲು ಅನುಕೂಲವಾಗುತ್ತದೆ" ಎಂದು ಒತ್ತಾಯಿಸಿದರು.
"ವಾಣಿಜ್ಯ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಕೆ ಮಾಡಲು ಕ್ರಮ ಕೈಗೊಳ್ಳಬೇಕು. ಪದೇ ಪದೆ ಗಡಿಭಾಗದಲ್ಲಿ ಭಾಷಾದ್ವೇಷ ಮೂಡಿಸುತ್ತಿರುವ ಎಂಇಎಸ್ ಹಾಗೂ ಶಿವಸೇನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು" ಎಂದು ಆಗ್ರಹಿಸಿದರು.
ಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಸಬೇಕು, ಕನ್ನಡ ಬಳಕೆ ಕಡ್ಡಾಯವಾಗುವಂತೆ ಅಧಿಕಾರಿಗಳು ಗಮನಹರಿಸಬೇಕು, ಗಡಿಭಾಗದ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ಭಾಷೆ ಬಲ್ಲ ಶಿಕ್ಷಕರನ್ನು ನೇಮಿಸಬೇಕು ಎಂದು ಸಭೆಯಲ್ಲಿ ಆಯೋಗದ ಗಮನ ಸೆಳೆಯಲಾಯಿತು.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications