ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ; ಕೊನೆ ಕ್ಷಣದಲ್ಲಿ sslc ಪರೀಕ್ಷಾ ಕೇಂದ್ರದ ಬದಲಾವಣೆ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಜೂನ್ 24: ನಾಳೆಯಿಂದ ರಾಜ್ಯಾದ್ಯಂತ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಗಳು ಆರಂಭಗೊಳ್ಳಲಿದ್ದು, ಕೊನೆ ಕ್ಷಣದಲ್ಲಿ ದಿಢೀರ್ ಪರೀಕ್ಷಾ ಕೇಂದ್ರವೇ ಬದಲಾವಣೆ ಆದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪರೀಕ್ಷಾ ಕೇಂದ್ರ ಆಯ್ಕೆಗೂ ಮುನ್ನ ಪರಿಸ್ಥಿತಿ ಅವಲೋಕಿಸದೇ ಬೆಳಗಾವಿ ಶಿಕ್ಷಣ ಇಲಾಖೆ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ.

Recommended Video

World No.1 Tennis player Novak DJokovic Tests Positive for Coronavirus | Oneindia Kannada

ಕಟ್ಟಡ ಶಿಥಿಲಾವಸ್ಥೆಯಲ್ಲಿದೆ ಎಂಬ ಕಾರಣಕ್ಕೆ ಬೆಳಗಾವಿಯ ಶಹಾಪುರ್ ‌ನಲ್ಲಿರುವ ಸರಸ್ವತಿ ಬಾಲಕಿಯರ ಪ್ರೌಢ ಶಾಲೆಯಲ್ಲಿದ್ದ ಪರೀಕ್ಷಾ ಕೇಂದ್ರವನ್ನು ಜ್ಞಾನ ಮಂದಿರ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶಿಫ್ಟ್ ಮಾಡಿದ್ದಾರೆ. ಬೆಳಗಾವಿಯ 12 ಶಾಲೆಗಳ 315 ವಿದ್ಯಾರ್ಥಿಗಳು ಇಲ್ಲಿ ಪರೀಕ್ಷೆ ಬರೆಯಬೇಕಿತ್ತು. ಪರೀಕ್ಷಾ ಹಾಲ್ ಟಿಕೆಟ್ ನಲ್ಲಿ ಸರಸ್ವತಿ ಪ್ರೌಢ ಶಾಲೆ ಪರೀಕ್ಷಾ ಕೇಂದ್ರ ಎಂದು ಈಗಾಗಲೇ ನಮೂದಾಗಿದೆ.

SSLC ಪರೀಕ್ಷೆ ಸುದ್ದಿಗೋಷ್ಠಿ: ವಿದ್ಯಾರ್ಥಿಗಳು ತಿಳಿಯಬೇಕಾದ ವಿಷಯಗಳುSSLC ಪರೀಕ್ಷೆ ಸುದ್ದಿಗೋಷ್ಠಿ: ವಿದ್ಯಾರ್ಥಿಗಳು ತಿಳಿಯಬೇಕಾದ ವಿಷಯಗಳು

ಆದರೆ ಇದೀಗ ಮಳೆಗಾಲದಲ್ಲಿ ಕಟ್ಟಡ ಸೋರುತ್ತದೆ ಎಂಬ ಕಾರಣಕ್ಕೆ ಕಟ್ಟಡ ಬದಲಾವಣೆ ಮಾಡಲಾಗಿದ್ದು ಎಲ್ಲಾ ಶಾಲಾ ಆಡಳಿತ ಮಂಡಳಿಗೆ ಪರೀಕ್ಷಾ ಕೇಂದ್ರ ಬದಲಾವಣೆ ಕುರಿತು ಮಾಹಿತಿ ರವಾನಿಸಲಾಗುತ್ತಿದೆ. ನಿನ್ನೆಯಿಂದ ಪರೀಕ್ಷಾ ಕೇಂದ್ರ ಬದಲಾವಣೆ ಆಗಿದೆ ಎಂದು ಪಾಲಕರಿಗೆ ಫೋನ್ ಕರೆ ಮಾಡಿ ಮಾಹಿತಿ ನೀಡಲಾಗುತ್ತಿದೆ.

SSLC Exam Centre Changed At Last Moment In Belagavi

ಬೆಳಗಾವಿಯ ಸರ್ದಾರ್ ಹೈಸ್ಕೂಲ್ ಪರೀಕ್ಷಾ ಕೇಂದ್ರಕ್ಕೆ ಇಂದು ಸಚಿವ ಸುರೇಶ್ ಅಂಗಡಿ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು.

English summary
SSLC exams will start from june 25 statewide. But at the last moment, the sslc exam centre has been changed in belagavi creates confusion among students
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X