• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಿಬ್ಬಂದಿ ಸೋಂಕು: ಚಿಕ್ಕೋಡಿ ಉಪವಿಭಾಗಾಧಿಕಾರಿ ಕಚೇರಿ ಸೀಲ್ ಡೌನ್!

|

ಚಿಕ್ಕೋಡಿ, ಜುಲೈ.27: ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಚಿಕ್ಕೋಡಿಯ ಉಪ ವಿಭಾಗಾಧಿಕಾರಿ ಕಚೇರಿ ಸಿಬ್ಬಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ.

ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

ಚಿಕ್ಕೋಡಿ ಉಪವಿಭಾಗಾಧಿಕಾರಿ ಕಚೇರಿಯ ಸಿಬ್ಬಂದಿಯೊಬ್ಬರಿಗೆ ಸೋಂಕು ಪತ್ತೆಯಾಗಿರುವ ಹಿನ್ನೆಲೆ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೇರಿದಂತೆ ಮಿನಿ ವಿಧಾನಸೌಧದಲ್ಲಿ 10ಕ್ಕೂ ಹೆಚ್ಚು ಕಚೇರಿಗಳನ್ನು ಸೀಲ್ ಡೌನ್ ಮಾಡಲಾಗಿದೆ.

ಕೊರೊನಾ ಭಯ: ಚಿಕ್ಕೋಡಿಯಲ್ಲಿ ಸ್ವಯಂ ಪ್ರೇರಿತ ಬಂದ್

ಪುರಸಭೆ ಮುಖ್ಯಾಧಿಕಾರಿ ಡಾ.ಸುಂದರ ರೋಗಿ ನೇತೃತ್ವದಲ್ಲಿ ಮಿನಿ ವಿಧಾನಸೌಧಕ್ಕೆ ಕ್ರಿಮಿನಾಶಕ ಸಿಂಪಡಿಸಲಾಗುತ್ತಿದೆ. ಇನ್ನು, ಉಪವಿಭಾಗಾಧಿಕಾರಿ ಕಚೇರಿ ಸಿಬ್ಬಂದಿಗೆ ಕೊರೊನಾವೈರಸ್ ಸೋಂಕು ದೃಢಪಟ್ಟಿರುವ ಹಿನ್ನಲೆ ಸಾರ್ಜಜನಿಕರಲ್ಲಿ ಆತಂಕ ಹೆಚ್ಚಾಗಿದೆ.

ಬೆಳಗಾವಿಯಲ್ಲಿ ಒಂದೇ ದಿನ 163 ಮಂದಿಗೆ ಸೋಂಕು:

ಕಳೆದ 24 ಗಂಟೆಗಳಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 163 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಒಂದೇ ದಿನ ಮಹಾಮಾರಿಗೆ ಜಿಲ್ಲೆಯಲ್ಲಿ ಆರು ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 46ಕ್ಕೆ ಏರಿಕೆಯಾಗಿದೆ. ಇನ್ನು, ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 2149ಕ್ಕೆ ಏರಿಕೆಯಾಗಿದೆ. ಈ ಪೈಕಿ 642 ಮಂದಿ ಸೋಂಕಿತರು ಗುಣಮುಖರಾಗಿದ್ದು, ಬಾಕಿ ಉಳಿದಿರುವ 1461 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

English summary
Staff Infect From Covid-19: Chikkodi Subdivisional Office Seal Down.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X