ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೇವಾಲಯಗಳ ತಾತ್ಕಾಲಿಕ ನೌಕರರಿಗೆ ರಾಜ್ಯ ಸರ್ಕಾರದಿಂದ ಕೊಡುಗೆ

|
Google Oneindia Kannada News

ಬೆಳಗಾವಿ, ಡಿಸೆಂಬರ್ 19: ದೇವಾಲಯಗಳಲ್ಲಿ ತಾತ್ಕಾಲಿಕ ನೌಕರರಾಗಿ ಕೆಲಸ ಮಾಡುತ್ತಿರುವವರಿಗೆ ರಾಜ್ಯ ಸರ್ಕಾರ ಸಂತಸ ಸುದ್ದಿ ನೀಡಿದೆ.

ಪಂಚತಾರಾ ಹೋಟೆಲ್ ನಲ್ಲಿ ಎಚ್ಡಿಕೆ: ಬಿಎಸ್ವೈ ಏಟಿಗೆ ಕುಮಾರಸ್ವಾಮಿ ತಿರುಗೇಟು ಪಂಚತಾರಾ ಹೋಟೆಲ್ ನಲ್ಲಿ ಎಚ್ಡಿಕೆ: ಬಿಎಸ್ವೈ ಏಟಿಗೆ ಕುಮಾರಸ್ವಾಮಿ ತಿರುಗೇಟು

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 2011ರ 8ನೇ ನಿಯಮಕ್ಕೆ ತಿದ್ದುಪಡಿ ತಂದು ದೇವಾಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ 2568 ತಾತ್ಕಾಲಿಕ ನೌಕರರಿಗೆ ವೇತನ ತಾರತಮ್ಯ ಸರಿಪಡಿಸಲು ಸೂಕ್ತ ವೇತನ ಶ್ರೇಣಿ ನಿಗದಿಪಡಿಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ಮುಜರಾಯಿ ಸಚಿವ ರಾಜಶೇಖರ್ ಬಿ.ಪಾಟೀಲ ರಾಜ್ಯ ವಿಧಾನಪರಿಷತ್‌ನಲ್ಲಿ ಬುಧವಾರ ಹೇಳಿದರು.

ಸದನದಲ್ಲಿ ಮಹಿಳೆಯರ ಸಂಖ್ಯೆ ಕ್ಷೀಣ,ನಮಗೆ ಅವಕಾಶ ಕೊಡಿ: ಸೌಮ್ಯಾ ರೆಡ್ಡಿಸದನದಲ್ಲಿ ಮಹಿಳೆಯರ ಸಂಖ್ಯೆ ಕ್ಷೀಣ,ನಮಗೆ ಅವಕಾಶ ಕೊಡಿ: ಸೌಮ್ಯಾ ರೆಡ್ಡಿ

ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಎಂ.ಸಿ.ವೇಣುಗೋಪಾಲ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ನೌಕರರು ದೇವಾಲಯದ ನೌಕರರಾಗಿರುತ್ತಾರೆಯೇ ಹೊರತು ಸರ್ಕಾರಿ ನೌಕರರಲ್ಲ.

state government fixed salary range for temporary employees of temples

ಇವರಿಗೆ ವೇತನ ಶ್ರೇಣಿ ನೀಡಲು ನಿಯಮ ರೂಪಿಸಲಾಗಿದೆ. ದೇವಾಲಯದ ವಾರ್ಷಿಕ ಆದಾಯದಲ್ಲಿ ಸಿಬ್ಬಂದಿ ವೆಚ್ಚವು ಶೇಕಡಾ 35 ಮೀರದಂತೆ ವೇತನ ಶ್ರೇಣಿ ನೀಡಬೇಕಾಗಿದೆ. ಈಗಾಗಲೇ 1111 ನೌಕರರುಗಳಿಗೆ ಐದನೇ ವೇತನ ಶ್ರೇಣಿ ನೀಡಲಾಗುತ್ತಿದೆ.

ರೈತ ಮಹಿಳೆ ಬಗ್ಗೆ ಹೇಳಿಕೆ: ಸದನದಲ್ಲಿ ಕುಮಾರಸ್ವಾಮಿ ಸ್ಪಷ್ಟೀಕರಣರೈತ ಮಹಿಳೆ ಬಗ್ಗೆ ಹೇಳಿಕೆ: ಸದನದಲ್ಲಿ ಕುಮಾರಸ್ವಾಮಿ ಸ್ಪಷ್ಟೀಕರಣ

2568 ತಾತ್ಕಾಲಿಕ ನೌಕರರಿಗೆ ವೇತನ ತಾರತಮ್ಯ ಸರಿಪಡಿಸಲು ಧಾರ್ಮಿಕ ದತ್ತಿ ಆಯುಕ್ತರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳನ್ನು ಒಳಗೊಂಡ ಸಮಿತಿಯು ದಿನಾಂಕ ಡಿ. 7 ರಂದು ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ವರದಿ ಪರಿಶೀಲಿಸಿ ದೇವಾಲಯಗಳ ಆದಾಯ ಮತ್ತು ವೆಚ್ಚದ ಪೂರ್ಣ ಅಂಕಿ ಅಂಶ ಪಡೆದು ವೇತನ ಶ್ರೇಣಿ ಜಾರಿಗೊಳಿಸಲಾಗುವುದು ಎಂದು ಸದನಕ್ಕೆ ಮಾಹಿತಿ ನೀಡಿದರು.

English summary
Karnataka government has fixed the salary range for temporary employees of Mujarai temples.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X