ರಾಜ್ಯ ಮಟ್ಟದ ಕಾಯಕ ಯೋಗಿ ಪ್ರಶಸ್ತಿಗೆ ಭಾಜನರಾದ ಡಾ.ನಾಗರಾಜ ಮರೆಣ್ಣವರ
ಬೆಳಗಾವಿ, ಜುಲೈ, 18: ನಗರದ ವಡಗಾವಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು, ಬೆಳಗಾವಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ಶಿಕ್ಷಕರ ಸಂಘಗಳ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ.ನಾಗರಾಜ ಮರೆಣ್ಣವರ ರಾಜ್ಯ ಮಟ್ಟದ ಕಾಯಕಯೋಗಿ ಪ್ರಶಸ್ತಿಗೆ ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ.
ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಪ್ರತಿವರ್ಷ ನೀಡುವ ಈ ಪ್ರಶಸ್ತಿಗೆ ಅವರ ಶೈಕ್ಷಣಿಕ, ಸಾಮಾಜಿಕ ಸಂಶೋಧನ ಕ್ಷೇತ್ರಗಳಲ್ಲಿ ಮಾಡಿದ ಸೇವೆ, ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಾಡಿರುವ ಸೇವೆಯನ್ನು ಗುರುತಿಸಿ ಕರ್ನಾಟಕ ವೈಜ್ಞಾನಿಕ ಸಂಶೋಧನಾ ಪರಿಷತ್ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಹುಲಿಕಲ್ ನಟರಾಜ್ ಅವರು ಆಯ್ಕೆ ಮಾಡಿದ್ದಾರೆ ಎಂದು ಜಿಲ್ಲಾಧ್ಯಕ್ಷರಾದ ಸಂಗಮೇಶ ಖನ್ನಿನಾಯ್ಕರ ತಿಳಿಸಿದ್ದಾರೆ.

ಜುಲೈ 13ರಂದು ಬೀದರ್‌ನ ಡಾ.ಚನ್ನಬಸವ ಪಟ್ಟದೇವರ ರಂಗ ಮಂದಿರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಚಿವರಾದ ಈಶ್ವರ ಖಂಡ್ರೆ, ಇಸ್ರೋ ಮಾಜಿ ಅಧ್ಯಕ್ಷ ಕಿರಣ ಕುಮಾರ್ ಅವರು ಪ್ರಶಸ್ತಿ ವಿತರಣೆ ಮಾಡಲಿದ್ದಾರೆ .
ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಡಾ.ನಾಗರಾಜ ಮರೆಣ್ಣವರ ಅವರಿಗೆ ಕಾಯಕಯೋಗಿ ಪ್ರಶಸ್ತಿಗೆ ಭಾಜನರಾಗಿರುವುದು ಅಭಿಮಾನ ಪಡುವ ಸಂಗತಿಯಾಗಿದೆ ಎಂದು ಜಿಲ್ಲಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾದ ಸುರೇಶ ಸಕ್ರೆನವರ ಹೆಳಿದ್ದಾರೆ.
ಅಲ್ಲದೆ, ಜಿಲ್ಲಾ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾ ಕಾರ್ಯದರ್ಶಿ ರುದ್ರಣ್ಣ ಚಂದರಗಿ, ಶ್ರೀ ಸದ್ಗುರು ಸಾಹಿತ್ಯ ಪ್ರತಿಷ್ಠಾನದ ಅಧ್ಯಕ್ಷರಾದ ಬಸವರಾಜ ಫಕೀರಪ್ಪ ಸುಣಗಾರ ಮತ್ತು ಉಪನ್ಯಾಸಕರ ಸಂಘದ ಅಧ್ಯಕ್ಷರಾದ ರವಿಶಂಕರ ಮಠ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಪತಿಗೆ ಚಿನ್ನ, ಪತ್ನಿಗೆ ಬೆಳ್ಳಿ ಪದಕ: ಕರ್ನಾಟಕ ಸ್ಟೇಟ್ ರೈಫಲ್ ಅಸೋಸಿಯೇಷನ್ ವತಿಯಿಂದ ರಾಜ್ಯ ಮಟ್ಟದ 22 ಚಾಂಪಿಯನ್‌ಶಿಷ್ 2024 ಪ್ರೋನ್ ಅನ್ನು ಆಯೋಜನೆ ಮಾಡಲಾಗಿತ್ತು. ಪುರುಷ ವಿಭಾಗದ ಪ್ರತ್ಯೇಕ ವಿಭಾಗದಲ್ಲಿ ನಗರದ ಜೋಡಿರಸ್ತೆಯಲ್ಲಿರುವ ಪ್ರಿಯಾ ಎಲೆಕ್ಟ್ರಾನಿಕ್ ಅಂಗಡಿ ಮಾಲೀಕ ರಮೇಶ್ ಬಾಬು ಭಾಗವಹಿಸಿ, ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿ ಚಿನ್ನದಪದಕ ಪಡೆದಿದ್ದಾರೆ. ಪತ್ನಿ ಸತ್ಯಭಾಮ ಕೂಡ ಮಹಿಳಾ ವಿಭಾಗದ ಪ್ರತ್ಯೇಕ ವಿಭಾಗದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ.
ಭಾನುವಾರದಂದು ಬೆಂಗಳೂರಿನಲ್ಲಿ ನಡೆದ ರೈಫಲ್ ಶೂಟಿಂಗ್ ಸ್ಪರ್ಧೆಯಲ್ಲಿ ದಂಪತಿಗಳು ಭಾಗವಹಿಸಿ ಈ ಸಾಧನೆ ಮಾಡಿ ಇಡೀ ರಾಜ್ಯಕ್ಕೆ ಮಾದರಿಯಾಗಿದ್ದಾರೆ.
ರಮೇಶ್‌ಬಾಬು ಈ ಹಿಂದೆಯೂ ಕೂಡ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ರಾಷ್ಟ್ರ, ರಾಜ್ಯದ ಮಟ್ಟದ ರೈಫಲ್ ಶೂಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಸುಮಾರು ಒಟ್ಟು 107 ಪದಕಗಳನ್ನು ಪಡೆದಿದ್ದಾರೆ. ಅದರಲ್ಲಿ 73 ಚಿನ್ನದ ಪದಕ, 24 ಬೆಳ್ಳಿ ಪದಕ ಪಡೆದಿದ್ದಾರೆ.
ಇನ್ನು ಈತನ ಪತ್ನಿ ಸತ್ಯಭಾಮ ಎರಡು ವರ್ಷಗಳಿಂದ ರೈಫಲ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ದ್ವಿತೀಯ ಸ್ಥಾನ ಪಡೆದು 2 ಬೆಳ್ಳಿ ಪದಕ ಪಡೆದಿದ್ದಾರೆ. ಇಬ್ಬರು ಕೂಡ ರೈಫಲ್ ಅಭ್ಯಾಸದಲ್ಲಿ ನಿರಂತರವಾಗಿ ತೊಡಗಿದ್ದು, ಅಂತಾರಾಷ್ಟ್ರೀಯ ಮಟ್ಟದ ರೈಫಲ್ ಸ್ಪರ್ಧೆಯಲ್ಲಿ ಭಾಗವಹಿಸಿ ಸಾಧನೆ ಮಾಡುವ ಗುರಿಯಿಟ್ಟುಕೊಂಡಿದ್ದಾರೆ.
ಇನ್ನು ಸಾಧನೆ ಮಾಡಿದ ದಂಪತಿಯನ್ನು ಸ್ನೇಹಿತರು ಅಭಿನಂದಿಸಿ ಮುಂದಿನ ದಿನಗಳಲ್ಲಿ ಹೆಚ್ಚು ಸಾಧನೆ ಮಾಡಿ ಜಿಲ್ಲೆಯ ಕೀರ್ತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಿಸುವಂತೆ ಆಶಿಸಿ ಶುಭ ಕೋರಿದ್ದಾರೆ. ಜಿಲ್ಲೆಯಲ್ಲಿ ಕ್ರೀಡಾ ಅಸೋಸಿಯೇಷನ್ ಸ್ಥಾಪಿಸಿ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುವ 10 ಮಕ್ಕಳನ್ನು ಪ್ರತಿ ವರ್ಷದ ದತ್ತುಪಡೆದು ಅವರ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ತರಬೇತಿ ನೀಡಿ ಪ್ರೋತ್ಸಾಹಿಸಲು ಚಿಂತಿಸಲಾಗಿದೆ ಎಂದು ರಮೇಶ್ ಬಾಬು ತಿಳಿಸಿದ್ದಾರೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications