ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ: ಮಿಲಿಟರಿ ವಶದಲ್ಲಿರುವ ರಾಜ್ಯದ ಜಮೀನು ವಶಕ್ಕೆ ಪಡೆಯಲು ಕ್ರಮ- ಸಿಎಂ

|
Google Oneindia Kannada News

ಬೆಳಗಾವಿ, ಏಪ್ರಿಲ್ 28: ಮಿಲಿಟರಿ ವಶದಲ್ಲಿರುವ ರಾಜ್ಯದ ಜಮೀನನ್ನು ವಶಕ್ಕೆ ಪಡೆಯಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಳಗಾವಿಯ ರಾಷ್ಟ್ರೀಯ ಹೆದ್ದಾರಿ ಪಕ್ಕ ದಲ್ಲಿರುವ ಮಿಲಿಟರಿ ಪ್ರದೇಶ ಸ್ವಾಧೀನತೆ ಬಗ್ಗೆ ಪ್ರತಿಕ್ರಿಯಿಸಿ, ಈ ಬಗ್ಗೆ ರಕ್ಷಣಾ ಸಚಿವರೊಂದಿಗೆ ಚರ್ಚಿಸಲಾಗಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಅವರು ಗುರುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಬೆಳಗಾವಿ ಜಿಲ್ಲೆಯ ವಿಭಜನೆಗೆ ಜನರ ಒತ್ತಾಸೆ: ಸಿಎಂ ಬೊಮ್ಮಾಯಿಬೆಳಗಾವಿ ಜಿಲ್ಲೆಯ ವಿಭಜನೆಗೆ ಜನರ ಒತ್ತಾಸೆ: ಸಿಎಂ ಬೊಮ್ಮಾಯಿ

ಇಲ್ಲಿನ ವಸ್ತುಸ್ಥಿತಿಯ ವರದಿಯನ್ನು ಕೇಂದ್ರ ಸರ್ಕಾರ ತರಿಸಿಕೊಳ್ಳುತ್ತಿದೆ. ಈ ಪ್ರದೇಶವನ್ನು ಮಿಲಿಟರಿಯವರೇ ಬಳಸಿಕೊಳ್ಳುತ್ತಿದ್ದಾರೆ. ಆದರೆ ಆ ಪ್ರದೇಶ ಕೇಂದ್ರ ರಕ್ಷಣಾ ಇಲಾಖೆಗೆ ಸೇರಿರುವುದಿಲ್ಲ. ಕಂದಾಯದ ಹೆಸರಿನಲ್ಲಿಯೇ ಇದೆ. ಈ ಎಲ್ಲ ಮಾಹಿತಿಗಳನ್ನು ಕೇಂದ್ರ ರಕ್ಷಣಾ ಇಲಾಖೆ ನೀಡಲಾಗಿದ್ದು, ಇನ್ನಷ್ಟು ಒತ್ತಡ ಹೇರುವ ಮೂಲಕ ಆ ಮಿಲಿಟರಿ ಪ್ರದೇಶವನ್ನು ಕರ್ನಾಟಕ ಸರ್ಕಾರದ ವಶಕ್ಕೆ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದರು.

steps will be taken to take over military territory excess land near Belagavi: Basavaraj Bommai

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಇನ್ನೂ ಚರ್ಚೆಯಾಗಿಲ್ಲ. ಪಕ್ಷದ ವರಿಷ್ಟರು ಈ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಂಡ ನಂತರ ಮಾಹಿತಿ ಒದಗಿಸಲಾಗುವುದು ಎಂದರು.

ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿಚೆನ್ನಮ್ಮ ಎಂದು ಹೆಸರಿಡುವ ಬಗ್ಗೆ ಸ್ಥಳೀಯ ನಾಯಕರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

English summary
military camp in Belagavi Chief Minister Basavaraja Bommai said that steps will be taken to take over the Karnataka government's for military territory land near Belagavi,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X