ನಕಲಿ ಮದ್ಯ ಹಾವಳಿಗೆ ಕಠಿಣ ಕ್ರಮದ ಅಗತ್ಯ ಹೆಚ್ಚಿದೆ; ರಮೇಶ ಜಾರಕಿಹೊಳಿ

ಬೆಳಗಾವಿ, ಮೇ 16: ಬೆಳಗಾವಿ ಭಾಗದಲ್ಲಿ ನಕಲಿ ಮದ್ಯದ ಹಾವಳಿ ಹೆಚ್ಚಾಗಿದ್ದು, ಇದನ್ನು ಕಠಿಣ ಕಾನೂನು ಕ್ರಮದ‌ ಮೂಲಕ ಹತ್ತಿಕ್ಕಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಇಂದು ಗೋಕಾಕ್ ನಗರದಲ್ಲಿ ಅಂಗವಿಕಲರಿಗೆ ದ್ವಿಚಕ್ರ ವಾಹನ ವಿತರಿಸಿ ಮಾತನಾಡಿದ ಅವರು, ಮದ್ಯಪಾನ ನಿಷೇಧದ ಬಗ್ಗೆ ರಾಜ್ಯ ಸರ್ಕಾರದ ನಿರ್ಧಾರವೇ ಅಂತಿಮ. ಈಗಾಗಲೇ ಗುಜರಾತ್ ರಾಜ್ಯದಲ್ಲಿ ಮದ್ಯಪಾನ ನಿಷೇಧ ಜಾರಿಯಲ್ಲಿದೆ. ಆದರೆ ಅದು ಯಶಸ್ವಿಯಾಗಿಲ್ಲ. ಆದರೆ ಮದ್ಯಪಾನ ನಿಷೇಧದಿಂದ ನಕಲಿ ಮದ್ಯದ ಹಾವಳಿ ಹೆಚ್ಚಾಗುವ ಆತಂಕವೂ ಇದೆ. ಹೀಗಾಗಿ ಈ ಕುರಿತು ಕಠಿಣ ಕಾನೂನು ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ" ಎಂದು ತಿಳಿಸಿದರು.

Strict Legal Action Required To Stop Illicit Liquor Said Ramesh Jarkiholi

ಮದ್ಯ ನಿಷೇಧ ಮಾಡಬೇಕು ಎಂದು ಈಗಾಗಲೇ ಹಲವಾರು ಮಠಾಧೀಶರು ಮತ್ತು ಜನರು ಒತ್ತಾಯಿಸಿದ್ದಾರೆ. ರಾಜ್ಯ ಸರ್ಕಾರ ಈ ಕುರಿತು ಕಠಿಣವಾದ ಕಾನೂನು ಜಾರಿಗೊಳಿಸಬೇಕು ಎಂದು ಸಲಹೆ ನೀಡಿದರು.

ಮೇ 17ರ ಬಳಿಕ ಲಾಕ್‌ಡೌನ್ ಸಡಿಲಿಕೆಯಾಗುವ ಸಂಭವವಿದೆ. ಆದರೂ ಜನ ಸಾಮಾಜಿಕ ಅಂತರ ಕಾಪಾಡಿಕೊಂಡು ಜೀವಿಸುವುದನ್ನು ರೂಢಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+