ಬೆಳಗಾವಿ: ಹಿಂಡಲಗಾ ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ
ಬೆಳಗಾವಿ, ಆಗಸ್ಟ್, 10: ಇಂದು (ಆಗಸ್ಟ್ 10) ಬೆಳಗಾವಿ ಜಿಲ್ಲೆಯ ಹಿಂಡಲಗಾ ಗ್ರಾಮದಲ್ಲಿರುವ ಜೈಲಿನ ಮೇಲೆ ಕಮಿಷನರ್ ನೇತೃತ್ವದಲ್ಲಿ ಮಹಾನಗರ ಪೊಲೀರು ದಿಢೀರ್ ದಾಳಿ ನಡೆಸಿದ್ದಾರೆ. ಹಾಗಾದರೆ ಇದಕ್ಕೆ ಪ್ರಮುಖ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದಲ್ಲಿರುವ ಜೈಲಿನ ಮೇಲೆ ಕಮಿಷನರ್ ಯಡಾ ಮಾರ್ಟಿನ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ತಂಬಾಕು ಪಾಕೇಟ್, ಸಿಗರೇಟ್, ಮೂರು ಚಾಕುಗಳು, ಸ್ಮಾಲ್ ಹೀಟರ್ ವೈಯರ್ ಬಂಡಲ್, ಎಲೆಕ್ಟ್ರಿಕಲ್ ಒಲೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ರೋಹನ್ ಜಗದೀಶ್ ಸೇರಿ 260ಕ್ಕೂ ಅಧಿಕ ಅಧಿಕಾರಿಗಳಿಂದ ದಾಳಿ ನಡೆಸಿ ದಾಳಿ ಮಾಡಿದ್ದಾರೆ. ಇನ್ನು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಮೃತದೇಹವನ್ನು ಕೈಚೀಲದಲ್ಲಿ ತುಂಬಿಕೊಟ್ಟ ಅಧಿಕಾರಿಗಳು: ಬೆಳಗಾವಿಯ ಸ್ನೇಹಂ ಎಂಬ ಟೇಪ್ ಮ್ಯಾನಿಫ್ಯಾಕ್ಚರಿಂಗ್ ಕಾರ್ಖಾನೆಗೆ ಬೆಂಕಿ ಬಿದ್ದು, ದೊಡ್ಡ ಅನಾಹುತವೇ ನಡೆದಿದೆ. ಘಟನೆಯಲ್ಲಿ ಓರ್ವ ಯುವಲ ಸಜೀವ ದಹನವಾಗಿದ್ದು, 16 ಗಂಟೆಗಳ ಕಾರ್ಯಾಚರಣೆ ಬಳಿಕ ಮೃತನ ಮೂಳೆಗಳು ಲಭ್ಯವಾಗಿದೆ.
ಆದರೆ ಮೃತಪಟ್ಟ ಕಾರ್ಮಿಕ ಯಲ್ಲಪ್ಪ ಸಣ್ಣಗೌಡ ಗುಂಡ್ಯಾಗೋಳ (19) ಅವರ ಮೃತದೇಹದ ಅವಶೇಷಗಳನ್ನು ಅಧಿಕಾರಿಗಳು ಕೈಚೀಲದಲ್ಲಿ ಹಾಕಿ ಅವರ ತಂದೆ ಸಣ್ಣಗೌಡ ಅವರ ಕೈಗೆ ಕೊಟ್ಟಿದ್ದು, ಇದು ಜನಾಕ್ರೋಶಕ್ಕೆ ಕಾರಣವಾಗಿದೆ.
ಮನೆಯ ನಿರ್ವಹಣೆ ಜವಾಬ್ದಾರಿ ಹೊತ್ತು ಕಾರ್ಖಾನೆಗೆ ಕೆಲಸಕ್ಕೆ ಸೇರಿಕೊಂಡಿದ್ದ ಯಲ್ಲಪ್ಪ ಕಾರ್ಖಾನೆಗೆ ಬಿದ್ದ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದ್ದಾನೆ. ಇನ್ನು ಆತನ ಸುಟ್ಟು ಕರಕಲಾಗಿ ಮೂಳೆಗಳು ಮಾತ್ರ ಸಿಕ್ಕಿದ್ದು, ಆ ಮೂಳೆಗಳನ್ನು ಕೈಚೀಲದಲ್ಲಿ ತುಂಬಿ ತಂದೆಯ ಕೈಗೆ ಕೊಡಲಾಗಿದೆ. ಈ ದೃಶ್ಯ ಎಂಥಹವರ ಮನಕಲುಕುವಂತಿದೆ.
ಸಾವನ್ನಪ್ಪಿದ ಮಗನ ಮೂಳೆಗಳನ್ನು ಕೈಯಲ್ಲಿ ಹಿಡಿದು ತಂದೆ ಕಣ್ಣೀರು ಹಾಕಿದ್ದು, ಮತ್ತೊಂದೆಡೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ರೀತಿ ಕೈ ಚೀಲದಲ್ಲಿ ಮೂಳೆಗಳನ್ನು ಹಾಕಿ ಕೊಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಜನರು ಆಕ್ರೋಶ ಹೊರಹಾಕುತ್ತಿದ್ದಾರೆ. ಮೃತ ಯುವಕನಿಗೆ ಕನಿಷ್ಠ ಮಟ್ಟದ ಗೌರವ ನೀಡದೆ, ಮೃತದೇಹ ಸಾಗಾಣೆಗೆ ವಾಹನ ವ್ಯವಸ್ಥೆ ಮಾಡದೆ, ಮೂಳೆಗಳನ್ನು ಚೀಲದಲ್ಲಿ ನೀಡಿ ಅಮಾನವೀಯತೆ ಮೆರೆದಿದ್ದಾರೆ ಎಂದು ಸಾರ್ವಜನಿಕರು ಕೆಂಡಕಾರುತ್ತಿದ್ದಾರೆ.
ಘಟನೆ ಹಿನ್ನೆಲೆ: ಬೆಳಗಾವಿ ಜಿಲ್ಲೆಯ ನಾವಗೆ ಗ್ರಾಮದ ಹೊರ ವಲಯದಲ್ಲಿ ಇರುವ ಈ ಸ್ನೇಹಂ ಫ್ಯಾಕ್ಟರಿ ಹೊತ್ತಿ ಉರಿದಿದ್ದು, ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ಅಲ್ಲದೆ, ಮಾರ್ಕಂಡೇಯ ನಗರ ನಿವಾಸಿ ಆಗಿದ್ದ ಯಲ್ಲಪ್ಪ ಗುಂಡ್ಯಾಗೋಳ(19) ಬೆಂಕಿಯಲ್ಲಿ ಬೆಂದು ಸಜೀವದಹನವಾಗಿದ್ದಾರೆ.
ಚಿಕ್ಕ ವಯಸ್ಸಿನಲ್ಲಿಯೇ ಮನೆ ನಿರ್ವಹಣೆಗಾಗಿ ಯಲ್ಲಪ್ಪ ಕೆಲಸಕ್ಕೆ ಸೇರಿದ್ದ. ನಿನ್ನೆ ಸಂಜೆ 7 ಗಂಟೆಯ ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಕಾರ್ಖಾನೆಗೆ ಬೆಂಕಿ ಬಿದ್ದಿದ್ದು, ಸಮಯ ಕಳೆಯುತ್ತಿದ್ದಂತೆ ಬೆಂಕಿಯ ಜ್ವಾಲೆ ಹೆಚ್ಚಾಗಿತ್ತು. ಬಳಿಕ ಸ್ಥಳಕ್ಕೆ ಆಗಮಿಸಿದ ಜಿಲ್ಲಾಡಳಿತ ತಂಡ ಬೆಂಕಿ ಕೆನ್ನಾಲಿಗೆ ನಂದಿಸಲು ಮುಂದಾದರು. ರಾತ್ರಿಯಿಡೀ 8 ಅಗ್ನಿ ಶಾಮಕ ವಾಹನಗಳು, ಖಾಸಗಿ ನೀರಿನ ಟ್ಯಾಂಕರ್‌ಗಳ ಮೂಲಕ ಬೆಂಕಿ ನಂದಿಸುವ ಕೆಲಸವನ್ನು ಮಾಡಲಾಯಿತು.
ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಸಹ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದರು. ಸತತ 16 ಗಂಟೆಯ ಕಾರ್ಯಾಚರಣೆಯ ಬಳಿಕ ಯಲ್ಲಪ್ಪ ಗುಂಡ್ಯಾಗೋಳ ಇರುವ ಸ್ಥಳವನ್ನು ಅಧಿಕಾರಿಗಳು ತಲುಪಿದ್ದರು. ಜೆಸಿಬಿ ಮೂಲಕ ಗೋಡೆ ಹೊಡೆದು ಸುಟ್ಟು ಕರಕಲಾಗಿದ್ದ ಯಲಪ್ಪನ ದೇಹದ ಮೂಳೆಗಳನ್ನು ಹೊರ ತೆಗೆದರು. ಬಳಿಕ ಕುಟುಂಬಸ್ಥರು, ತಹಶೀಲ್ದಾರ್, ಡಿಎಚ್ಒ ಸ್ಥಳ ಪಂಚನಾಮೆ ಮಾಡಿ ಮೂಳೆಯೊಂದನ್ನು ಡಿಎನ್ಎ ಟೆಸ್ಟ್‌ಗೆ ಎಫ್‌ಎಸ್‌ಎಲ್ ತಂಡ ರವಾನೆ ಮಾಡಿತು. ಬಳಿಕ ಉಳಿದ ಮೂಳೆಗಳನ್ನು ಕುಟುಂಬಸ್ಥರಿಗೆ ಚೀಲದಲ್ಲಿ ನೀಡಲಾಗಿದ್ದು, ಇದಕ್ಕೆ ಇದೀಗ ಇಡೀ ರಾಜ್ಯಾದ್ಯಂತ ಆಕ್ರೊಶಗಳು ಭುಗಿಲೆದ್ದಿವೆ.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications