ಕಾಂಗ್ರೆಸ್‌ಗೆ ಮತ: ಉಪಕಾರಸ್ಮರಣೆಯ ಮಂತ್ರ ಜಪಿಸಿದ ಮಾತೆ ಮಹಾದೇವಿ
ಬೆಳಗಾವಿ, ಮೇ 1: 'ನಮಗೆ ಉಪಕಾರ ಮಾಡಿದ ಕಾಂಗ್ರೆಸ್‌ಅನ್ನು ಚುನಾವಣೆಯಲ್ಲಿ ಬೆಂಬಲಿಸಿ ನಾವು ಉಪಕಾರ ಮಾಡಬೇಕು' ಎಂದು ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಹೇಳಿದ್ದಾರೆ.
ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿಟ್ಟ ನಿರ್ಧಾರ ತೆಗೆದುಕೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ಈ ರೀತಿ ನಮಗೆ ಉಪಕಾರ ಮಾಡಿದ ಅವರಿಗೆ ನಾವೂ ಉಪಕಾರ ಮಾಡಬೇಕು' ಎಂದು ಅವರು ತಿಳಿಸಿದರು.
ಜಿಲ್ಲೆಯ ನಿರ್ಮಿಸಿರುವ ಬಸವ ಮಂಟಪವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡುವ ಐತಿಹಾಸಿಕ ನಿರ್ಣಯವನ್ನು ನೀವು ತೆಗೆದುಕೊಳ್ಳಿ. ನಾವು ನಿಮ್ಮನ್ನು ಬೆಂಬಲಿಸುತ್ತೇವೆ ಎಂದು ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದೆವು. ಅಂದರಂತೆಯೇ ಅವರು ನಡೆದುಕೊಂಡಿದ್ದಾರೆ ಎಂದು ಮಾತೆ ಮಹಾದೇವಿ ಹೇಳಿದರು.

ಚುನಾವಣೆಯಲ್ಲಿ ಕಾಂಗ್ರೆಸ್‌ಅನ್ನು ಬೆಂಬಲಿಸುವಂತೆ ಹೇಳಿಕೆ ನೀಡಿದ್ದಕ್ಕೆ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ, ಈ ವಿಚಾರದಲ್ಲಿ ಮುಚ್ಚುಮರೆ ಏಕೆ. ನಾನು ಬೆಂಬಲಿಸುತ್ತೇನೆ ಎಂಬುದನ್ನು ಬಹಿರಂಗವಾಗಿಯೇ ಹೇಳುತ್ತೇನೆ. ಹಿಂದೊಂದು-ಮುಂದೊಂದು ಹೇಳುವುದು ನಮಗೆ ತಿಳಿದಿಲ್ಲ ಎಂದು ಹೇಳಿದರು.
ವ್ಯಾಪಕ ಹೋರಾಟದ ಫಲವಾಗಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ಬೇಡಿಕೆಯನ್ನು ಶಿಫಾರಸು ಮಾಡಿದೆ. ಲಿಂಗಾಯತರಿಗೆ ಧಾರ್ಮಿಕ ಅಲ್ಪಸಂಖ್ಯಾತರು ಎಂಬ ಮಾನ್ಯತೆಯನ್ನೂ ನೀಡಬೇಕು ಎಂದು ಕೋರಿಕೆ ಸಲ್ಲಿಸಲಾಗಿದೆ. 900 ವರ್ಷಗಳ ಬಳಿಕ ಈ ಐತಿಹಾಸಿಕ ಕಾರ್ಯ ನಡೆದಿದೆ.
ಪಕ್ಷದ ಒಳಗಿನ ಮತ್ತು ಹೊರಗಿನವರ ವಿರೋಧಗಳನ್ನು ಲೆಕ್ಕಿಸದೆ ಸಿದ್ದರಾಮಯ್ಯ ಅವರು ದಿಟ್ಟತನದಿಂದ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಭಿನ್ನಮತೀಯರು ಇದ್ದರೂ ಅವರ ಧ್ವನಿ ಇಲ್ಲಿ ಕ್ಷೀಣವಾಗಿದೆ.
ಜಾತಿ ಎಂದರೆ ಕತ್ತಲು, ಧರ್ಮವೆಂದರೆ ಬೆಳಕು ಎಂಬುದನ್ನು ಮರೆಯಬಾರದು. ಲಿಂಗಾಯತವು ಜಾತಿಯಲ್ಲ. ಅದು ಧರ್ಮ ಎಂಬುದನ್ನು ಬಹಳ ಹಿಂದಿನಿಂದಲೂ ಪ್ರತಿಪಾದಿಸುತ್ತಾ ಬಂದಿದ್ದೇನೆ. ಈ ಸಮುದಾಯವನ್ನು ಹಿಂದೂ ಲಿಂಗಾಯತ ಎಂದು ಗುರುತಿಸುವುದು ಮಹಾಪರಾಧ ಎಂದು ತಿಳಿಸಿದರು.
ವೀರಶೈವ ಸಂಪ್ರದಾಯವಾದಿಗಳಿಗೂ ಲಿಂಗಾಯತ ಧರ್ಮ ಪಾಲಿಸುವವರಿಗೂ ಬಹಳ ವ್ಯತ್ಯಾಸಗಳಿವೆ. ಆದರೂ ಬಸವಣ್ಣನೇ ನಮ್ಮ ಗುರು, ವಚನ ಸಾಹಿತ್ಯವೇ ನಮ್ಮ ಸಂವಿಧಾನ ಎಂದು ಒಪ್ಪಿಕೊಂಡು ಬರುವವರನ್ನು ಮುಕ್ತ ಸ್ವಾಗತವಿದೆ.
ಕೆಲ ವಿರಕ್ತರು ಪಂಚಪೀಠದವರ ಜತೆ ಸೇರಿಕೊಂಡು ಸಮಾಜಕ್ಕೆ ಹಾಗೂ ಗುರುವಿಗೆ ದ್ರೋಹ ಎಸಗುತ್ತಿದ್ದಾರೆ. ವಿರಕ್ತರು ಬಸವಣ್ಣನೇ ಗುರು ಎಂಬುದನ್ನು ಒಪ್ಪಿಕೊಳ್ಳಬೇಕು ಎಂದು ಹೇಳಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications