ಮಲಪ್ರಭಾ ನದಿ ಪಾತ್ರದಲ್ಲಿ ಒತ್ತುವರಿಯಾಗಿದೆ; ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ, ಆಗಸ್ಟ್ 25: ಮಲಪ್ರಭಾ ನದಿಪಾತ್ರದಲ್ಲಿ ಆಗಿರುವ ಅಕ್ರಮ ಒತ್ತುವರಿಯನ್ನು ಆದಷ್ಟು ಬೇಗ ಸರ್ವೇ ಮಾಡಲಾಗುವುದು, ಅದಕ್ಕಾಗಿ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

Recommended Video

      JEE ,NEET ಪರೀಕ್ಷೆ ಮುಂದೂಡಿ ಎಂದು ವಿದ್ಯಾರ್ಥಿಗಳ ಪರ ನಿಂತ Greta Thunberg | Oneindia Kannada

      ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಾರಕಿಹೊಳಿ, ಬೆಳಗಾವಿ ಮತ್ತು ಆಲಮಟ್ಟಿಯಲ್ಲಿ ಮುಖ್ಯಮಂತ್ರಿಗಳು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಚರ್ಚೆ ಮಾಡಿ, ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ. ಬೆಂಗಳೂರಿನಲ್ಲಿ ನೆರೆ ಪರಿಹಾರ ಕುರಿತು ಮತ್ತೊಮ್ಮೆ ಸಭೆ ಮಾಡಿ ಜಿಲ್ಲಾವಾರು ಪರಿಹಾರ ನೀಡಲು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದರು.

      ಕೃಷ್ಣಾ ನದಿ ಪಾತ್ರದಲ್ಲಿ ಮಳೆಯಿಂದಾಗಿ ಹಾನಿಯಾಗಿದೆ, ಆದರೆ ಈ ಬಾರಿ ಕೈಗೊಂಡ ಮುಂಜಾಗ್ರತಾ ಕ್ರಮಗಳ ಪರಿಣಾಮವಾಗಿ ಪ್ರವಾಹದಿಂದ ಹಾನಿಯಾಗಿಲ್ಲ. ಐದು‌ ಜಿಲ್ಲೆಗಳ ನೆರೆ ಸಂತ್ರಸ್ಥರಿಗೆ ಆದಷ್ಟು ಬೇಗ ಪರಿಹಾರ ಕೊಡಲಾಗುತ್ತದೆ ಎಂದು ಸಚಿವರು ಭರವಸೆ ನೀಡಿದರು.

      Survey As Soon In Malaprabha River Character: Ramesh Jarakiholi

      ನಾಳೆ ರಾಮದುರ್ಗದಲ್ಲಿ ಧರಣಿ ನಿರತ ನೆರೆ ಸಂತ್ರಸ್ಥರ ಭೇಟಿಯಾಗಿ ಚರ್ಚೆ ಮಾಡುತ್ತೇನೆ. ಬೆಳಗಾವಿ ಜಿಲ್ಲೆಯ 30 ಗ್ರಾಮಗಳ ಸ್ಥಳಾಂತರ ಕುರಿತು ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+