• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಳಗಾವಿ; ಒಂದೇ ಕುಟುಂಬದ ಮೂವರ ಹತ್ಯೆ; ಬೆಚ್ಚಿಬಿದ್ದ ಗ್ರಾಮಸ್ಥರು

|

ಬೆಳಗಾವಿ, ಜನವರಿ 19 : ಒಂದೇ ಕುಟುಂಬದ ಮೂವರನ್ನು ಹತ್ಯೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ದೊಡ್ಡವಾಡ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದರು.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೊಡ್ಡವಾಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪತಿ, ಪತ್ನಿ ಮತ್ತು ಪುತ್ರನನ್ನು ಶನಿವಾರ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಗೌರಿ ಲಂಕೇಶ್ ಹತ್ಯೆ; 15 ದಿನ ಪೊಲೀಸ್ ವಶಕ್ಕೆ ಋಷಿಕೇಶ್‌

ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಶಿವಾನಂದ ಅಂದಾನಶೆಟ್ಟಿ, ಶಾಂತತ್ವ, ವಿನೋದ್ ಅಂದಾನಶೆಟ್ಟಿ ಕೊಲೆಯಾದವರು. ಹಳೆಯ ದ್ವೇಷದ ಹಿನ್ನಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.

ಕೇರಳ ಪೊಲೀಸ್ ಅಧಿಕಾರಿ ಹತ್ಯೆ ಪ್ರಕರಣಕ್ಕೆ ಹೊಸ ತಿರುವು

ದೊಡ್ಡವಾಡ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಪ್ರಕರಣ ದಾಖಲು ಮಾಡಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕೇರಳದಲ್ಲಿ ಅಪಘಾತ: ಹಿರಿಯೂರು ನಗರಸಭೆ ಸದಸ್ಯ ಸಾವು

ಒಂದೇ ಕುಟುಂಬದ ಮೂವರ ಹತ್ಯೆಯಿಂದಾಗಿ ದೊಡ್ಡವಾಡ ಗ್ರಾಮದ ಜನರು ಬೆಚ್ಚಿ ಬಿದ್ದಿದ್ದಾರೆ. ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

English summary
Triple murder in Belagavi. Taluk panchayat former member and his wife, son murderedin Belagavi district Bailhongal taluk.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X