ಚಿಕ್ಕಮಗಳೂರಿನಲ್ಲಿ ಪಿತೂರಿ ನಡೆಸುತ್ತಿರುವುದ್ಯಾರು: ಶೋಭಾ ಕರಂದ್ಲಾಜೆ ಹೇಳಿದ್ದೇನು..?

ಬೆಳಗಾವಿ, ಮಾರ್ಚ್ 09: ನನಗೆ ಟಿಕೆಟ್ ತಪ್ಪಿಸಲು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಹಾಗೂ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವಾಗ ವಿರೋಧ ವ್ಯಕ್ತವಾಗುತ್ತದೋ, ಆಗಲೇ ನಮ್ಮ ನಾಯಕರು ನಮ್ಮ ಬಗ್ಗೆ ಮಾಹಿತಿ ಕಲೆ ಹಾಕುತ್ತಾರೆ. ನಮ್ಮವರು ವಿರೋಧ ಮಾಡಿದ ಕಾರಣಕ್ಕೆ ನನಗೆ ಅನುಕೂಲ ಆಗಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.

Those Who Have Worked In The Constituencies They Will Get Tickets Says MP Shobha Karandlaje

ನಮ್ಮನ್ನು ವಿರೋಧ ಮಾಡದೇ ಇದ್ದರೆ, ಶೋಭಾ ಒಳ್ಳೆಯ ‌ಕೆಲಸ ಮಾಡುತ್ತಿದ್ದಾರೆ.‌ ಪಕ್ಷದ ಕೆಲಸ ಮಾಡುತ್ತಾರೆ ಎಂದಷ್ಟೇ ‌ಹೇಳುತ್ತಾರೆ. ಒಂದು ವೇಳೆ ವಿರೋಧ ಮಾಡಿದರೆ, ಶೋಭಾರನ್ನು ಯಾಕೆ ವಿರೋಧ ಮಾಡುತ್ತಿದ್ದಾರೆ ಎಂದು ಪಕ್ಷದ ನಾಯಕರು ಮಾಹಿತಿ ಕಲೆ ಹಾಕುತ್ತಾರೆ. ಆಗಲೇ ಸತ್ಯ ಗೊತ್ತಾಗುವುದು. ನಮ್ಮ ವ್ಯಕ್ತಿತ್ವವೇನು, ನಮ್ಮ ಅಭಿವೃದ್ಧಿ ಕೆಲಸಗಳು ಗೊತ್ತಾಗುತ್ತದೆ. ನಾವೇನು ಮಾಡಿಲ್ಲ, ಏನನ್ನು ಮಾಡಬಾರದು, ಎನ್ನುವುದು ಇಂತಹ ವರದಿ ಪಡೆಯುವುದರಿಂದ ತಿಳಿದು ಬರುತ್ತದೆ ಎಂದರು.

ಚುನಾವಣೆ ಸಮಯ ಬಹಳಷ್ಟು ಸೂಕ್ಷ್ಮತೆಯಿಂದ ಕೂಡಿರುತ್ತದೆ. ಮಾಹಿತಿ ಸಂಗ್ರಹದಿಂದ ನನಗೆ ಅನುಕೂಲ ಆಗಲಿದೆಯೇ ಹೊರತು ಕೆಟ್ಟದಾಗಲ್ಲ. ಹೀಗಾಗಿ ನಮ್ಮ ಹೈಕಮಾಂಡ್‌ ಬಗ್ಗೆ ನನಗೆ ನಂಬಿಕೆಯಿದೆ. ಕೆಲಸದ ಆಧಾರದ ಮೇಲೆ ಟಿಕೆಟ್ ಸಿಗುತ್ತದೆ. ಪಕ್ಷದ ಕೆಲಸ ಕೊಡಲಿ, ಸರ್ಕಾರದ ಕೆಲಸ ಕೊಡಲಿ ಪ್ರಮಾಣಿಕ ಸೇವೆ ಸಲ್ಲಿಸಿದ ಸಂತೃಪ್ತಿ ನನಗಿದೆ. ಇದು ಎಲ್ಲರಿಗೂ ಅನ್ವಯ ಆಗುತ್ತದೆ, ಕೆಲಸ ಮಾಡಿದವರಿಗೆ ಅವಕಾಶ ಸಿಕ್ಕೇ ಸಿಗುತ್ತದೆ ಎಂದು ಹೇಳಿದರು.

Those Who Have Worked In The Constituencies They Will Get Tickets Says MP Shobha Karandlaje

ಜಾತಿ ಸಮೀಕರಣ ಕಾರಣಕ್ಕೆ ಕೆಲ ಸಂದರ್ಭದಲ್ಲಿ ಇದು ವ್ಯತ್ಯಾಸ ಆಗಬಹುದಷ್ಟೇ. ನಮ್ಮ ಶ್ರಮ, ನಮ್ಮ ಕೆಲಸ ಗುರುತಿಸುತ್ತದೆ ಎನ್ನುವುದಕ್ಕೆ ನಾನೇ ಉದಾಹರಣೆ. ನನ್ನ ವಿರುದ್ಧ ನಡೆಯುತ್ತಿರುವ ಪಿತೂರಿಯಿಂದ ನನಗೆ ಅನುಕೂಲ ‌ಆಗಲಿದೆ. ಪಿತೂರಿ ಮಾಡಿದಾಗಲೇ ಹೈಕಮಾಂಡ್‌ ನಮ್ಮ ಬಗ್ಗೆ ಗಮನ ಕೊಡುತ್ತದೆ. ವಿರೋಧ ಯಾಕೆ ಮಾಡುತ್ತಿದ್ದಾರೆ ಎನ್ನುವುದರ ವರದಿ ತರಿಸಿಕೊಳ್ಳುತ್ತಾರೆ, ಆಗ ಸತ್ಯ ಗೊತ್ತಾಗುತ್ತದೆ. ನನ್ನ ಕ್ಷೇತ್ರದಲ್ಲಿ ನಾನು ಸಾಕಷ್ಟು ಕೆಲಸ ಮಾಡಿದ್ದೇನೆ,‌ ಅಭಿವೃದ್ಧಿ ಆಧಾರದ ಮೇಲೆ‌ ಮತ‌ ಕೇಳುತ್ತೇನೆ ಎಂದು ಹೇಳಿದರು.

ಶೋಭಾ ಕರಂದ್ಲಾಜೆಗೆ ಬಿಜೆಪಿ ಟಿಕೆಟ್ ನೀಡದಂತೆ ಬಿಜೆಪಿ ಕಾರ್ಯಕರ್ತರ ಒತ್ತಡ

ಹಾಲಿ ಸಂಸದೆ ಶೋಭಾ ಕರಂದ್ಲಾಜೆಗೆ ಬಿಜೆಪಿ ಟಿಕೆಟ್ ನೀಡದಂತೆ ಚಿಕ್ಕಮಗಳೂರಿನಲ್ಲಿ ಕೆಲ ಬಿಜೆಪಿ ಕಾರ್ಯಕರ್ತರು ಪತ್ರ ಚಳುವಳಿ ನಡೆಸಿದ್ದರು. ಪ್ರಧಾನಿ ನರೇಂದ್ರ ಮೋದಿ, ಜೆ.ಪಿ.ನಡ್ಡಾ, ಹಾಗೂ ಅಮಿತ್ ಷಾಗೆ ಪತ್ರ ಬರೆದ ಬಿಜೆಪಿ ಕಾರ್ಯಕರ್ತರು ಹೊಸ ಮುಖಕ್ಕೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದರು. ಉಡುಪಿ ಚಿಕ್ಕಮಗಳೂರು ಲೋಕಾಸಭಾ ಕ್ಷೇತ್ರದಲ್ಲಿ ಎರಡು ಭಾರಿ ಶೋಭಾ ಕರಂದ್ಲಾಜೆ ಆಯ್ಕೆಯಾಗಿದ್ದು ಕ್ಷೇತ್ರಕ್ಕೆ ಹೆಚ್ಚು‌ ಕೊಡುಗೆ ನೀಡಿಲ್. ಹಾಗಾಗಿ ಬಿಜೆಪಿ ಟಿಕೆಟ್ ಹೊಸ ಮುಖಕ್ಕೆ ನೀಡಬೇಕು ಎಂದು 5 ಸಾವಿರಕ್ಕೂ ಹೆಚ್ಚು ಪತ್ರಗಳನ್ನು ಚಿಕ್ಕಮಗಳೂರು ನಗರದ ಅಂಚೆ ಕಚೇರಿಯಲ್ಲಿ ಪೋಸ್ಟ್ ಮಾಡುವ ಮೂಲಕ ಬಿಜೆಪಿ ಕಾರ್ಯಕರ್ತರು ಮನವಿ‌‌ ಮಾಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+