ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲೈಂಗಿಕ ದೌರ್ಜನ್ಯ, ಹೆಸ್ಕಾಂ ಉದ್ಯೋಗಿಗಳ ಬಂಧನ

|
Google Oneindia Kannada News

ಬೆಳಗಾವಿ. 20 : ಕಿರಿಯ ಇಂಜಿನಿಯರ್‌ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮೂವರು ಹೆಸ್ಕಾಂ ಉದ್ಯೋಗಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಮಾಳಮಾರುತಿ ಪೊಲೀಸರು ಮೂವರ ವಿಚಾರಣೆಯನ್ನು ನಡೆಸುತ್ತಿದ್ದಾರೆ.

ಬಂಧಿತರನ್ನು ಟಿಬಿ ಮಜ್ಜಗಿ, ಎಂ.ಟಿ.ಟಕ್ಕಲಿಗಿ ಮತ್ತು ಮಾರುತಿ ದೊಡ್ಡಮನಿ ಎಂದು ಗುರುತಿಸಲಾಗಿದೆ. ಗ್ರಾಮಾಂತರ ಹೆಸ್ಕಾಂನಲ್ಲಿ ಕಿರಿಯ ಎಂಜಿನಿಯರ್ ಆಗಿರುವ ಮೈಸೂರು ಮೂಲದ ಯುವತಿಗೆ ಮೂವರು ನ.13ರಂದು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬುದು ಆರೋಪವಾಗಿದೆ.

rape

ಈ ಘಟನೆ ಬಗ್ಗೆ ಯಾರಿಗೂ ಹೇಳದಂತೆ ಮೂವರು ಬೆದರಿಕೆ ಹಾಕಿದ್ದರು. ಸುಮ್ಮನಿದ್ದರೆ ಬಡ್ತಿ ಕೊಡಿಸುವುದಾಗಿ ಆಮಿಷವೊಡ್ಡಿದ್ದರು ಎಂದು ಯುವತಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾಳೆ. ವಿಷಯವನ್ನು ಯಾರಿಗಾದರೂ ತಿಳಿಸಿದರೆ, ವರ್ಗಾವಣೆ ಮಾಡಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು ಎಂದು ಯುವತಿ ದೂರಿದ್ದಾಳೆ. [ಅತ್ಯಾಚಾರ ಆರೋಪ: ಕಂಬಳೇಶ್ವರ ಸ್ವಾಮೀಜಿ ಬಂಧನ]

ದೌರ್ಜನ್ಯದ ಸಂಬಂಧ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದರೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಯುವತಿ ಪೊಲೀಸರಿಗೆ ತಿಳಿಸಿದ್ದು, ಆರೋಪಿಗಳು ಪ್ರಭಾವಿಗಳಾಗಿದ್ದು, ರಾಜಕೀಯ ಮುಖಂಡರ ಬೆಂಬಲ ಹೊಂದಿದ್ದಾರೆ ಎಂದು ಆರೋಪಿಸಿದ್ದಾಳೆ. ಯುವತಿ ಬುಧವಾರ ಸಂಜೆ ಮಾಳಮಾರುತಿ ಪೊಲೀಸ್ ಠಾಣೆಗೆ ಮೂವರ ವಿರುದ್ಧ ದೂರು ನೀಡಿದ್ದು, ಮೂವರನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

English summary
Three employees of Hubli Electricity Supply Company Limited (HESCOM) were arrested by Malmaruti police, Belagavi, for attempting to rape a colleague. 27-year-old Assistant Engineer field complaint.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X