ಬೆಳಗಾವಿ: 3ರ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಹತ್ಯೆಗೈದ ಆರೋಪಿ ಬಂಧನ
ಬೆಳಗಾವಿ, ಸೆಪ್ಟೆಂಬರ್ 23 : ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ನಂತರ ಕೊಲೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆ ಕುರುಬಗೊಡ್ಡಿ ಗ್ರಾಮದ ಉದ್ದಪ್ಪ ರಾಮಪ್ಪ ಗಾಣಿಗೇರ (32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಚಾಕೊಲೇಟ್ ಕೊಡಿಸುವುದಾಗಿ ಬಾಲಕಿಯನ್ನು ಕರೆದೊಯ್ದಿದು ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತಡರಾತ್ರಿಯಾದರೂ ಬಾಲಕಿ ಮನೆಗೆ ಬಾರದಿದ್ದಾಗ, ಪೋಷಕರು ಹುಡುಕಾಟ ನಡೆಸಿದ್ದಾರೆ. ಬಾಲಕಿಯನ್ನು ಉದ್ದಪ್ಪ ಎತ್ತಿಕೊಂಡು ಹೋಗುತ್ತಿದ್ದುದನ್ನು ನೋಡಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ನಂತರ ಉದ್ದಪ್ಪನ ಮನೆಗೆ ಹೋಗಿ ಪೋಷಕರು, ಮಗು ಎಲ್ಲಿ ಎಂದು ಥಳಿಸಿ ಬಳಿಕ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ವಿಚಾರಣೆ ವೇಳೆ ತಾನೆ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
ಆರೋಪಿ ಉದ್ದಪ್ಪನನ್ನು ಬಂಧಿಸಿದ ಪೊಲೀಸರು ಪೋಸ್ಕೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಬಾಲಕಿಯ ಕುಟುಂಬಸ್ಥರು ಬೆಳಗಾವಿ ಜಿಲ್ಲಾಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದರು. ಸ್ಥಳಕ್ಕಾಗಮಿಸಿದ ಡಿಸಿಪಿ ಅಮರನಾಥ್ ರೆಡ್ಡಿ ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಿದರು












Click it and Unblock the Notifications