ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಧಿಕಾರಿಗಳ ಕಿರುಕುಳ; ಸಾರಿಗೆ ನೌಕರ ಆತ್ಮಹತ್ಯೆಗೆ ಶರಣು

|
Google Oneindia Kannada News

ಬೆಳಗಾವಿ, ಏಪ್ರಿಲ್ 9; ಸಾರಿಗೆ ನೌಕರರ ಮುಷ್ಕರ 3ನೇ ದಿನಕ್ಕೆ ಕಾಲಿಟ್ಟಿದೆ. ಸಾರಿಗೆ ಸಚಿವ ಲಕ್ಷ್ಮಣ ಸವದಿ ತವರು ಜಿಲ್ಲೆಯಲ್ಲಿ ಸಾರಿಗೆ ನೌಕರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕ ಶಿವಕುಮಾರ ನೀಲಗಾರ (40) ಆತ್ಮಹತ್ಯೆ ಮಾಡಿಕೊಂಡವರು. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮನೆಯಲ್ಲಿ ಶಿವಕುಮಾರ ನೇಣಿಗೆ ಶರಣಾಗಿದ್ದಾರೆ.

ಸಾರಿಗೆ ಮುಷ್ಕರ; ವಿಶೇಷ ರೈಲುಗಳ ವೇಳಾಪಟ್ಟಿ ಸಾರಿಗೆ ಮುಷ್ಕರ; ವಿಶೇಷ ರೈಲುಗಳ ವೇಳಾಪಟ್ಟಿ

ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಮುಷ್ಕರ ನಡೆಯುತ್ತಿದ್ದರೂ ಕೆಲಸಕ್ಕೆ ಬರುವಂತೆ ಅಧಿಕಾರಿಗಳು ಒತ್ತಡ ಹಾಕಿದ್ದಾರೆ.

ಸಾರಿಗೆ ನೌಕರರ ಮುಷ್ಕರ; ಖಾಸಗಿ ಬಸ್‌ಗಳಿಗೆ ದರ ನಿಗದಿ ಮಾಡಿದ ಸರ್ಕಾರ ಸಾರಿಗೆ ನೌಕರರ ಮುಷ್ಕರ; ಖಾಸಗಿ ಬಸ್‌ಗಳಿಗೆ ದರ ನಿಗದಿ ಮಾಡಿದ ಸರ್ಕಾರ

Transport Employees Strike NWKRTC Conductor Commits Suicide

ಕೆಲಸಕ್ಕೆ ಬಾರದಿದ್ದರೆ ಕೆಲಸದಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿದೆ. ಇದರಿಂದಾಗಿ ಮನನೊಂದ ಶಿವಕುಮಾರ ನೀಲಗಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾರಿಗೆ ನೌಕರರ ಮುಷ್ಕರ; ಸರ್ಕಾರವೇ ಹೊಣೆ ಎಂದ ಸಿದ್ದರಾಮಯ್ಯ ಸಾರಿಗೆ ನೌಕರರ ಮುಷ್ಕರ; ಸರ್ಕಾರವೇ ಹೊಣೆ ಎಂದ ಸಿದ್ದರಾಮಯ್ಯ

ಶಿವಕುಮಾರ ನೀಲಗಾರ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಧಾರವಾಡ ವಿಭಾಗದ ಸವದತ್ತಿ ಘಟಕದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. ಸವದತ್ತಿಯಲ್ಲಿರುವ ಮನೆಯಲ್ಲಿಯೇ ಶುಕ್ರವಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 12 ವರ್ಷಗಳಿಂದ ಅವರು ಸಂಸ್ಥೆಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬೆಳಗಾವಿ ಲೋಕಸಭೆ ಉಪ ಚುನಾವಣೆ ಪ್ರಚಾರಕ್ಕಾಗಿ ಸವದತ್ತಿಗೆ ಇಂದು ಭೇಟಿ ನೀಡಲಿದ್ದಾರೆ. ಅವರು ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರ ಜೊತೆ ಮಾತುಕತೆಯನ್ನು ನಡೆಸಲಿದ್ದಾರೆ.

English summary
Transport employees strike entered 3rd day in Karnataka. North Western Karnataka Road Transport Corporation conductor Shivakumar Neelagara (40) committed suicide in Belagavi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X