ಬೆಳಗಾವಿಯಲ್ಲಿ ಮತ್ತಿಬ್ಬರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಳಗಾವಿ, ಏಪ್ರಿಲ್ 26: ಕೊರೊನಾ ವೈರಸ್ ಸೋಂಕು ತಗುಲಿದ್ದ ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿಯ ದಂಪತಿ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತಿದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ.
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ 50 ವರ್ಷದ ವ್ಯಕ್ತಿ(ಪಿ-182) ಹಾಗೂ ಅವರ ಪತ್ನಿಯಾಗಿರುವ 40 ವರ್ಷದ (ಪಿ-192) ಅವರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ.

ಇವರು ಏ.3 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 54 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಈ ಪೈಕಿ ನಾಲ್ಕು ಜನರನ್ನು ಈಗಾಗಲೇ ಸರ್ಕಾರದ ಮಾರ್ಗಸೂಚಿಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿರುತ್ತದೆ. ಇದೀಗ ಒಟ್ಟಾರೆ ಆರು ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ತಿಳಿಸಿದ್ದಾರೆ.












Click it and Unblock the Notifications