ಬೆಳಗಾವಿ : ಕಾರು ಪಲ್ಟಿ, ಇಬ್ಬರು ವಿದ್ಯಾರ್ಥಿಗಳ ಸಾವು
ಬೆಳಗಾವಿ, ನವೆಂಬರ್ 5 : ಬೆಳಗಾವಿ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಹಿರೇಬಾಗೆವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾನುವಾರ ಮುಂಜಾನೆ ಬೆಳಗಾವಿ ಹೊರವಲಯದಲ್ಲಿ ಕಾರು ಪಲ್ಟಿಯಾಗಿ ಈ ಅಪಘಾತ ನಡೆದಿದೆ. ಕಾರಿನಲ್ಲಿದ್ದ ನಿಶಾ (22), ಜಯಂತ್ ರಾವ್ (22) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅನಸುಮಾನ್ ಕಮಾರ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾನುವಾರ ಮುಂಜಾನೆ 2.45ರ ಸುಮಾರಿಗೆ ಒಕ್ಸ್ ವ್ಯಾಗನ್ ಕಾರು ಪಲ್ಟಿಯಾಗಿ ಈ ಅಪಘಾತ ನಡೆದಿದೆ. ಮೂವರು ವಿದ್ಯಾರ್ಥಿಗಳು ಕಾರಿನಲ್ಲಿ ಹೋಗುತ್ತಿದ್ದಾಗ ಕಾರು ಪಲ್ಟಿಯಾಗಿದೆ. ವಿದ್ಯಾರ್ಥಿಗಳು ಬೆಳಗಾವಿಯ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮೃತಪಟ್ಟ ಇಬ್ಬರು ಬಿಹಾರ ಮೂಲದವರಾಗಿದ್ದಾರೆ.

ಹಿರೇಬಾಗೆವಾಡಿ ಪೊಲೀಸ್ ಇನ್ಸ್‌ಪೆಕ್ಟರ್ ಸಿ.ಎಸ್ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರೇಬಾಗೆವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications