ಉಮೇಶ್ ಕತ್ತಿ ಹೃದಯಾಘಾತದಿಂದ ನಿಧನ: ಸ್ವಗ್ರಾಮಕ್ಕೆ ಪಾರ್ಥೀವ ಶರೀರ ಏರ್‌ಲಿಫ್ಟ್
ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ (61) ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಮೇಶ್ ಕತ್ತಿ ಪಾರ್ಥೀವ ಶರೀರ ಏರ್‌ಲಿಫ್ಟ್ ಮೂಲಕ ಬೆಳಗಾವಿಗೆ ಒಯ್ಯಲು ಸಿದ್ಧತೆ ನಡೆಸಲಾಗುತ್ತಿದೆ.
ಸದ್ಯ ಕತ್ತಿ ಅವರ ಪಾರ್ಥೀವ ಶರೀರ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿದ್ದು, ಅಲ್ಲಿಂದ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಏರ್‌ಲಿಫ್ಟ್ ಮೂಲಕ ಕರೆದೊಯ್ಯಲಾಗುತ್ತಿದೆ. ಉಮೇಶ್ ಕತ್ತಿಯ ಅಂತ್ಯಕ್ರಿಯೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ.
Recommended Video

ಮಧ್ಯಾಹ್ನ 3.30ವರೆಗೂ ಹುಕ್ಕೇರಿಯ ಬೆಲ್ಲದ ಬಾಗೇವಾಡಿ ಹೊರಹೊಲದಲ್ಲಿ ವಿಶ್ವರಾಜ್ ಸಕ್ಕರಾಜ್ ಸಕ್ಕರೆ ಕಾರ್ಖಾನೆಯಲ್ಲಿ ಅಂತಿಮ ದರ್ಶನ ಪಡೆದುಕೊಳ್ಳಲು ತಯಾರಿ ನಡೆಸಲಾಗುತ್ತಿದೆ. ಸಾರ್ವಜನಿಕರು, ಆತ್ಮೀಯ ವಲಯ, ಅಭಿಮಾನಿಗಳು, ಹಿತೈಶಿಗಳು ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗುತ್ತಿದೆ. ಎಂ್‌ಎಸ್ ರಾಮಯ್ಯ ಆಸ್ಪತ್ರೆಗೆ ಬಂದ ಸಹೋದರ ರಮೇಶ್ ಕತ್ತಿ ಅಪ್ಪಿಕೊಂಡು ಕಣ್ಣೀರು ಹಾಕಿದ್ದಾರೆ.

ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿದ್ದ 61 ವರ್ಷದ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ 10.30ರ ಸುಮಾರಿಗೆ ಬಾತ್ ರೂಮ್ ಗೆ ತೆರಳಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಅವರ ಕುಟುಂಬದವರು ತಕ್ಷಣ ಅವರನ್ನು ಸರ್ಕಾರಿ ಕಾರಿನಲ್ಲಿಯೇ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಚಿವ ಉಮೇಶ್ ಕತ್ತಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ತಜ್ಞ ವೈದ್ಯರ ತಂಡದಿಂದ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಉಮೇಶ್ ಕತ್ತಿ ಅವರ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ ಬೆಳಗಾವಿಯ ಅವರ ಸ್ವಗ್ರಾಮಕ್ಕೆ ತೆಗೆದುಕೊಂಡು ಹೋಗಲು ತಯಾರಿ ನಡೆಸಲಾಗುತ್ತದೆ. ಸಂಜೆ 7 ರಿಂದ 8 ರ ನಡುವೆ ಅವರ ಅಂತ್ಯಕ್ರಿಯಯನ್ನು ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.












Click it and Unblock the Notifications