'ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ರಚನೆ ಶತಸಿದ್ಧ!'
ಬೆಳಗಾವಿ, ಸೆಪ್ಟೆಂಬರ್, 27 : ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ರಚನೆಯಾಗುವುದು ಶತಸಿದ್ಧ ಮತ್ತು ನಿಶ್ಚಿತ ಎಂದು ಮಾಜಿ ಸಚಿವ, ಹುಕ್ಕೇರಿ ಬಿಜೆಪಿ ಶಾಸಕ ಉಮೇಶ್ ಕತ್ತಿ ಪುನರುಚ್ಚರಿಸಿ ಪ್ರತ್ಯೇಕತೆಯ ತುತ್ತೂರಿ ಊದಿದ್ದಾರೆ.
ಈ ಕುರಿತು ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಉಮೇಶ್ ಕತ್ತಿ, ರಾಷ್ಟ್ರದಲ್ಲಿ ಹೊಸದಾಗಿ 20 ರಾಜ್ಯಗಳನ್ನು ರಚನೆ ಮಾಡಲಾಗುತ್ತಿದ್ದು, ಅದರಲ್ಲಿ ಉತ್ತರ ಕರ್ನಾಟಕ ರಾಜ್ಯವೂ ಸೇರಿದೆ ಎಂದು ಹೇಳಿದರು.

ರಾಜ್ಯ ವಿಭಜನೆಯ ಬಗ್ಗೆ ಹಲವಾರು ಬಾರಿ ಒತ್ತಾಯಿಸಲಾಗಿದೆ, ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕ ರಾಜ್ಯ ನಿರ್ಮಾಣ ಇಂದಿನ ಅಗತ್ಯವಾಗಿದೆ. ಮತ್ತು ಈ ಭಾಗಕ್ಕೆ ಅನಿವಾರ್ಯವೂ ಕೂಡ ಆಗಿದೆ ಎಂದು ಅವರು ಹೇಳಿದರು.
ಈ ಹಿಂದೆ ಅನೇಕ ಬಾರಿ ಉತ್ತರ ಕರ್ನಾಟಕ ರಾಜ್ಯ ರಚನೆ ಮಾಡುವ ಬಗ್ಗೆ ಹೇಳಿಕೆ ನೀಡಿದ್ದ ಉಮೇಶ್ ಕತ್ತಿಯವರದು ವೈಯಕ್ತಿಕ ಅಭಿಪ್ರಾಯ ಎಂದು ರಾಜ್ಯ ಬಿಜೆಪಿ ನಾಯಕರು ಸ್ಪಷ್ಟಪಡಿಸಿದ್ದರು. ಅಲ್ಲದೇ ಕತ್ತಿಯವರ ಹೇಳಿಕೆಗೂ ಮತ್ತು ಪಕ್ಷಕ್ಕೂ ಸಂಬಂಧವಿಲ್ಲ ಎಂದು ಬಿಜೆಪಿ ಹೇಳಿತ್ತು.












Click it and Unblock the Notifications