ದಲಿತರ ವಿರುದ್ಧ ಅಸಂವಿಧಾನಿಕ ಪದ: ಉಮೇಶ್ ಕತ್ತಿಗೆ ಜಾಮೀನು

ಬೆಳಗಾವಿ, ಡಿಸೆಂಬರ್ 22: ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಅವರು ದಲಿತರ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ್ದಾರೆ ಎಂದು ನೀಡಲಾಗಿದ್ದ ದೂರಿಗೆ ಸಂಬಂಧಿಸಿದಂತೆ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಉಮೇಶ್ ಕತ್ತಿ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಡಿಸೆಂಬರ್ 8ರಂದು ಜಿಲ್ಲೆಯಲ್ಲಿ ನಡೆದಿದ್ದ ಸಾರ್ವಜನಿಕರ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಶಾಸಕ ಉಮೇಶ್ ಕತ್ತಿ ಅವರು ಭಾಷಣ ಮಾಡುತ್ತಾ ಮಾತಿನ ಭರದಲ್ಲಿ ದಲಿತರ ಕುರಿತು ಅಸಂವಿಧಾನಿಕ ಪದ ಬಳಸಿದ್ದರು.

Unparliamentary language against Dalith: Umesh Kathi gets Investigative bail

ಈ ಬಗ್ಗೆ ದಲಿತ ಪರ ಸಂಘಟನೆಗಳು ಬೃಹತ್ ಪ್ರತಿಭಟನೆ, ಅಣಕು ಶವ ಯಾತ್ರೆ, ಜಿಲ್ಲಾ ಬಂದ್ ಗಳನ್ನು ಮಾಡಿ ಉಮೇಶ್ ಕತ್ತಿ ಅವರು ಸಾರ್ವಜನಿಕವಾಗಿ ಕ್ಷಮೆ ಕೋರಲು ಒತ್ತಾಯಿಸಿದ್ದರು. ಪ್ರತಿಭಟನಾಕಾರರ ಮನವಿಯಂತೆ ಉಮೇಶ್ ಕತ್ತಿ ಅವರು ಬೇಷರತ್ ಕ್ಷಮೆ ಯಾಚಿಸಿದ್ದರು.

ಆದರೆ ಉಮೇಶ್ ಕತ್ತಿ ವಿರುದ್ಧ ಅಸಂವಿಧಾನಿಕ ಪದ ಬಳಕೆ ಬಗ್ಗೆ ಡಿಸೆಂಬರ್ 15ರಂದು ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಸುನೀಲ ಕಾತೇದಾರ ಎಂಬುವವರು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿಗೆ ಉಮೇಶ ಕತ್ತಿ ಹಾಕಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಳಗಾವಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಉಮೇಶ್ ಕತ್ತಿ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+