ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸದನದಲ್ಲಿ ಮಹಿಳೆಯರ ಸಂಖ್ಯೆ ಕ್ಷೀಣ,ನಮಗೆ ಅವಕಾಶ ಕೊಡಿ: ಸೌಮ್ಯಾ ರೆಡ್ಡಿ

|
Google Oneindia Kannada News

ಬೆಳಗಾವಿ, ಡಿಸೆಂಬರ್ 19: ಸದನದಲ್ಲಿ ಮಹಿಳೆಯರ ಸಂಖ್ಯೆ ಅತ್ಯಂತ ಕಡಿಮೆ ಇದೆ. ಅಸೆಂಬ್ಲಿಯಲ್ಲಿ ಮಹಿಳೆಯರನ್ನು ಹುಡುಕುವ ಪರಿಸ್ಥಿತಿ ಇದೆ ಎಂದು ಜಯನಗರ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ಬೇಸರ ವ್ಯಕ್ತಪಡಿಸಿದರು.

ಅಧಿವೇಶನ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೂ ಅರ್ಹತೆ ಇದೆ, ಪ್ರತಿಭಾನ್ವಿತರು ನಮ್ಮಲ್ಲೂ ಇದ್ದಾರೆ ನಮಗೂ ಅವಕಾಶ ಕೊಡಿ ಎಂದು ಮನವಿ ಮಾಡಿದರು.

ಚುನಾವಣಾ ಟಿಕೆಟ್ ಹಂಚಿಕೆ ವಿಷಯದಲ್ಲಿ ಮಹಿಳೆಯರಿಗೆ 33% ಮೀಸಲಾತಿ ಕೊಡಬೇಕು ಎಂದು ನಮ್ಮ ಪಕ್ಷದ ನಾಯಕರಿಗೆ ಕೇಳಿದ್ದೇವೆ ಆದರೆ ಅದು ಇನ್ನೂ ಜಾರಿಗೆ ಬಂದಿಲ್ಲ. ಉಳಿದ ಪಕ್ಷಗಳು ಕಾಂಗ್ರೆಸ್‌ಗಿಂತಲೂ ಕಡಿಮೆ ಮಂದಿ ಮಹಿಳೆಯರಿಗೆ ಟಿಕೆಟ್ ನೀಡಿವೆ ಎಂದು ಅವರು ಹೇಳಿದರು.

Very less women in Assembly: MLA Sowmya Reddy

ತಮ್ಮ ತಂದೆ ರಾಮಲಿಂಗಾ ರೆಡ್ಡಿ ಅವರು ಶಾಸಕಾಂಗ ಪಕ್ಷದ ಸಭೆಗೆ ಗೈರಾದ ಬಗ್ಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ತಮ್ಮ ಕ್ಷೇತ್ರದಲ್ಲಿ ಕೆಲಸ ಇದ್ದ ಕಾರಣ ಶಾಸಕಾಂಗ ಸಭೆಗೆ ಅವರು ಹೋಗಲಿಲ್ಲ ಎಂದರು.

ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ ಅವರು, ತಂದೆಯವರು ಐದು ಬಾರಿ ಸಚಿವರಾಗಿದ್ದಾರೆ, ಅವರಿಗೆ ಈ ಬಾರಿಯೂ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದರು. ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಒಡಕಿಲ್ಲ, ಎಲ್ಲರೂ ಒಂದಾಗಿದ್ದೇವೆ ಎಂದು ಅವರು ಹೇಳಿದರು.

English summary
Very less women in assembly, women have talent and they are has power to do politics please give chance to them said congress MLA Sowmya Reddy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X