ಬೆಂಗಳೂರಿಂದ ರಾಜಸ್ಥಾನಕ್ಕೆ ಹೊರಟಿದ್ದ ವೋಲ್ವೊ ಬಸ್ ಪಲ್ಟಿ: 20 ಮಂದಿಗೆ ಗಾಯ
ಬೆಳಗಾವಿ, ಡಿಸೆಂಬರ್ 22: ಬೆಂಗಳೂರಿನಿಂದ ರಾಜಸ್ಥಾನಕ್ಕೆ ಹೊರಟಿದ್ದ ವೋಲ್ವೊ ಬಸ್‌ವೊಂದು ಪಲ್ಟಿಯಾಗಿ 20ಕ್ಕೂ ಹೆಚ್ಚು ಮಂದಿಗೆ ಗಾಯಗೊಂಡಿರುವ ಘಟನೆ ದಾಸ್ತಿಕೊಪ್ಪ ಬಳಿ ಶನಿವಾರ ಬೆಳಗ್ಗೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ದಾಸ್ತಿಕೊಪ್ಪ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅವಘಡ ಸಂಭವಿಸಿದೆ. ಕಿತ್ತೂರು ತಾಲೂಕಿನ ದಾಸ್ತಿಕೊಪ್ಪ ಬಳಿ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಬಸ್ ಬೆಳಗಾವಿಯಿಂದ ರಾಜಸ್ಥಾನಕ್ಕೆ ಹೊರಟಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಸ್‌ನಲ್ಲಿ ಒಟ್ಟು 34 ಮಂದಿ ಪ್ರಯಾಣಿಸುತ್ತಿದ್ದರು, 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ, ತಕ್ಷಣ ಸ್ಥಳಕ್ಕೆ 5 ಆಂಬ್ಯುಲೆನ್ಸ್‌ಗಳು ಬಂದು ಆಸ್ಪತ್ರೆಗೆ ರವಾನಿಸಲಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.












Click it and Unblock the Notifications