• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪ್ರವಾಹ ಸಂತ್ರಸ್ತರಿಗೆ ಸಿಕ್ಕಿಲ್ಲ ನೆರವು; ಮತದಾರರೇ ಉತ್ತರಿಸಬೇಕೆಂದ ಡಿಕೆಶಿ

|

ಬೆಳಗಾವಿ, ಅಕ್ಟೋಬರ್ 2: "ಬೆಳಗಾವಿ ಹಾಗೂ ಉತ್ತರ ಕರ್ನಾಟಕದಲ್ಲಿ ಅನೇಕ ಮಂತ್ರಿಗಳು, ಶಾಸಕರು, ಸಂಸದರು ಇದ್ದರೂ ಪ್ರವಾಹದಿಂದ ನೊಂದಿರುವ ಜನರಿಗೆ ನೆರವಾಗಲು ಸಾಧ್ಯವಾಗಲಿಲ್ಲ ಎಂದರೆ, ಇದಕ್ಕೆ ಮತದಾರನೇ ಉತ್ತರ ಕೊಡಬೇಕು" ಎಂದಿದ್ದಾರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಡಿ.ಕೆ ಶಿವಕುಮಾರ್, ಪ್ರವಾಹದಿಂದ ಈ ಭಾಗದ ಜನರ ಜೀವನ ಬೀದಿಗೆ ಬಿದ್ದಿದೆ. ತಮ್ಮದೇ ಸರ್ಕಾರ, ಇಷ್ಟು ಜನ ಸಂಸದರು, ಮಂತ್ರಿಗಳು, ಶಾಸಕರು ಇದ್ದರೂ ಇಲ್ಲಿನ ಜನರಿಗೆ ಪರಿಹಾರ ಹಾಗೂ ನ್ಯಾಯ ಕೊಡಿಸಲು ವಿಫಲರಾಗಿದ್ದಾರೆ ಎಂದರೆ, ಇದಕ್ಕೆ ಈ ಭಾಗದ ಮತದಾರರೇ ಉತ್ತರ ಕೊಡಬೇಕು ಎಂದರು.

'ಉತ್ತರ ಪ್ರದೇಶದ ಯೋಗಿ ಸರ್ಕಾರ ಇವತ್ತು ಭೋಗಿ ಸರ್ಕಾರವಾಗಿದೆ'

ಅಭ್ಯರ್ಥಿ ಕುರಿತು ಸಭೆ ನಡೆಸಿ ತೀರ್ಮಾನ: ಮುಂಬರುವ ಉಪಚುನಾವಣೆಗಳಿಗೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಚರ್ಚಿಸಲು ಇಂದು ಸಂಜೆ ನಮ್ಮ ಎಲ್ಲ ನಾಯಕರು, ಶಾಸಕರು, ಜಿಲ್ಲಾ ಅಧ್ಯಕ್ಷರು, ಚುನಾಚಣೆಯಲ್ಲಿ ಸ್ಪರ್ಧೆ ಮಾಡಿದವರ ಸಭೆ ಕರೆದಿದ್ದು, ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ನಂತರ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.

ಸುರೇಶ್ ಅಂಗಡಿ ಅವರಿಗೆ ಸರಿಯಾದ ಅಂತ್ಯ ಸಂಸ್ಕಾರ ನೀಡಲಿಲ್ಲ: ನಮ್ಮ ರೈಲ್ವೆ ಸಚಿವ ಸುರೇಶ್ ಅಂಗಡಿ ಅವರ ಪಾರ್ಥಿವ ಶರೀರವನ್ನು ದೆಹಲಿಯಿಂದ ಇಲ್ಲಿಗೆ ತಂದು ದರ್ಶನಕ್ಕೆ ಅವಕಾಶ ನೀಡಿ ಅವರಿಗೆ ಇಲ್ಲಿ ಅಂತ್ಯಕ್ರಿಯೆ ಮಾಡಬಹುದಿತ್ತು. ಅವರು ಯಾಕೆ ಈ ರೀತಿ ಮಾಡಲಿಲ್ಲ ಎಂಬುದು ಅರ್ಥವಾಗುತ್ತಿಲ್ಲ. ಅಲ್ಲಿ ಏನೇನು ರಾಜಕಾರಣ ನಡೆದಿದೆ ಅಂತ ಅವರ ಕುಟುಂಬದವರೇ ಹೇಳಿದ್ದಾರೆ. ಬಿಜೆಪಿಯವರ ಕೈಯಲ್ಲಿ ನೊಂದ ಕುಟುಂಬ ಸದಸ್ಯರಿಗೆ, ಕ್ಷೇತ್ರದ ಜನರಿಗೆ ನ್ಯಾಯ ಒದಗಿಸಿಕೊಡಲು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

English summary
"There are many ministers, legislators and MPs in Belgavi and North Karnataka. But nobody helped flood victims" said KPCC president DK Shivakumar in belagavi,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X