• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಳಗಾವಿ ಪಾಲಿಕೆ ಚುನಾವಣೆ; ಮತದಾನ ಮಾಡಿದ ಗಣ್ಯರು

|
Google Oneindia Kannada News

ಬೆಳಗಾವಿ, ಸೆಪ್ಟೆಂಬರ್ 03; ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಮತದಾನ ನಡೆಯುತ್ತಿದೆ. ಸಂಸದೆ ಮಂಗಲಾ ಸುರೇಶ್ ಅಂಗಡಿ ಸೇರಿದಂತೆ ಹಲವು ಗಣ್ಯರು ಮತದಾನ ಮಾಡಿದರು. ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ.

ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್‌ಗಳಿಗೆ ಶುಕ್ರವಾರ ಮತದಾನ ನಡೆಯುತ್ತಿದೆ. ಒಟ್ಟು 4.31 ಲಕ್ಷ ಮತದಾರರು ವಾರ್ಡ್‌ಗಳಿಂದ ಪ್ರತಿನಿಧಿಗಳನ್ನು ಆಯ್ಕೆ ಮಾಡಲಿದ್ದಾರೆ. ಮತ ಎಣಿಕೆ ಕಾರ್ಯ ಸೆಪ್ಟೆಂಬರ್ 6ರಂದು ನಡೆಯಲಿದೆ.

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ; ಬಿಜೆಪಿ ಮಹತ್ವದ ಸಭೆ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ; ಬಿಜೆಪಿ ಮಹತ್ವದ ಸಭೆ

ಶುಕ್ರವಾರ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶ ನೀಡಲಾಗಿದೆ. 58 ವಾರ್ಡ್‌ಗಳಲ್ಲಿ ಒಟ್ಟು 385 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿಯ 55, ಕಾಂಗ್ರೆಸ್‌ನ 45, ಎಎಪಿಯ 27, 11 ಜೆಡಿಎಸ್, 238 ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಎಂಇಎಸ್ ಅಭ್ಯರ್ಥಿಗಳು ಪಕ್ಷೇತರರಾಗಿ ಕಣಕ್ಕಿಳಿದಿದ್ದಾರೆ.

ಹುಬ್ಬಳ್ಳಿ-ಧಾ. ಪಾಲಿಕೆ ಚುನಾವಣೆ; ಬಿಜೆಪಿಯ ಪ್ರಣಾಳಿಕೆ ಹುಬ್ಬಳ್ಳಿ-ಧಾ. ಪಾಲಿಕೆ ಚುನಾವಣೆ; ಬಿಜೆಪಿಯ ಪ್ರಣಾಳಿಕೆ

ಗಣ್ಯರ ಮತದಾನ; ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಸಂಸದೆ ಮಂಗಲಾ ಸುರೇಶ್ ಅಂಗಡಿ ಕುಟುಂಬ ಸಮೇತರಾಗಿ ಬೆಳಗಾವಿಯ ವಾರ್ಡ್ ನಂ.17 ಸದಾಶಿವ ನಗರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಗೆಯಲ್ಲಿ ಮತದಾನ ಮಾಡಿದರು.

ಜೆಡಿಎಸ್ ಹೀನ ಪರಿಸ್ಥಿತಿಗೆ ಕಾರಣ ಬಿಚ್ಚಿಟ್ಟ ಬಿಜೆಪಿ ಟ್ವೀಟ್!ಜೆಡಿಎಸ್ ಹೀನ ಪರಿಸ್ಥಿತಿಗೆ ಕಾರಣ ಬಿಚ್ಚಿಟ್ಟ ಬಿಜೆಪಿ ಟ್ವೀಟ್!

ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಮೊದಲ ಒಂದು ಗಂಟೆಯಲ್ಲಿ ಪ್ರತಿಬೂತ್‌ನಲ್ಲಿ 50 ಮತಗಳು ಚಲಾವಣೆಯಾಗಿದ್ದವು. ಬಳಿಕ ಮಂದಗತಿಯಲ್ಲಿ ಮತದಾನ ನಡೆಯುತ್ತಿದೆ. ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಒಂದು ಗಂಟೆ ಹೆಚ್ಚು ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಂಜೆ 6 ಗಂಟೆಯ ತನಕ ಮತದಾನ ಮಾಡಬಹುದು.

ಇದೇ ಮೊದಲ ಬಾರಿಗೆ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಭ್ಯರ್ಥಿಗಳು ಪಕ್ಷದ ಚಿನ್ಹೆಯಡಿ ಸ್ಪರ್ಧೆ ಮಾಡುತ್ತಿದ್ದಾರೆ. ಇದೇ ನಿಯಮ ಎಂಇಎಸ್‌ಗೆ ಬಿಸಿ ತುಪ್ಪವಾಗಿದೆ. ಎಂಇಎಸ್ ನೋಂದಣಿಯಾದ ರಾಜಕೀಯ ಪಕ್ಷವಲ್ಲದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಎಂಇಎಸ್ ಸದಸ್ಯರು ಕಣಕ್ಕಿಳಿದಿದ್ದಾರೆ.

ಇದೇ ಮೊದಲ ಬಾರಿಗೆ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಭ್ಯರ್ಥಿಗಳು ಪಕ್ಷದ ಚಿನ್ಹೆಯಡಿ ಸ್ಪರ್ಧೆ ಮಾಡುತ್ತಿದ್ದಾರೆ. ಇದೇ ನಿಯಮ ಎಂಇಎಸ್‌ಗೆ ಬಿಸಿ ತುಪ್ಪವಾಗಿದೆ. ಎಂಇಎಸ್ ನೋಂದಣಿಯಾದ ರಾಜಕೀಯ ಪಕ್ಷವಲ್ಲದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಎಂಇಎಸ್ ಸದಸ್ಯರು ಕಣಕ್ಕಿಳಿದಿದ್ದಾರೆ.

ಮತದಾನಕ್ಕಾಗಿ ಒಟ್ಟು 415 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಜನರು ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಿಕೊಂಡು ಮತ ಚಲಾವಣೆ ಮಾಡುತ್ತಿದ್ದಾರೆ. 162 ಸೂಕ್ಷ್ಮ ಮತಗಟ್ಟೆಗಳಿದ್ದು, 42 ಅತಿ ಸೂಕ್ಷ್ಮ ಮತಗಟ್ಟೆಗಳಿವೆ. ಚುನಾವಣಾ ಕಾರ್ಯಕ್ಕೆ 1828 ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.

ಮತದಾನಕ್ಕಾಗಿ ಒಟ್ಟು 415 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಜನರು ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಿಕೊಂಡು ಮತ ಚಲಾವಣೆ ಮಾಡುತ್ತಿದ್ದಾರೆ. 162 ಸೂಕ್ಷ್ಮ ಮತಗಟ್ಟೆಗಳಿದ್ದು, 42 ಅತಿ ಸೂಕ್ಷ್ಮ ಮತಗಟ್ಟೆಗಳಿವೆ. ಚುನಾವಣಾ ಕಾರ್ಯಕ್ಕೆ 1828 ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.

ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳಿಗೆ ಬಂಡಾಯದ ಬಿಸಿ ತಟ್ಟಿತ್ತು. ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಬಂಡಾಯ ಎದ್ದ ಕಾರಣಕ್ಕೆ ಬಿಜೆಪಿ 9, ಕಾಂಗ್ರೆಸ್‌ ಇಬ್ಬರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದೆ.

ಕಳೆದ ಬಾರಿ ಪಾಲಿಕೆಯ ಚುನಾವಣೆಯಲ್ಲಿ ಗೆದ್ದು ಬಂದಿದ್ದ ಹಲವು ಸದಸ್ಯರು ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದಾರೆ. ಆದ್ದರಿಂದ ಪಕ್ಷೇತರರು ಚುನಾವಣೆಯಲ್ಲಿ ನಿರ್ಣಾಯಕ ಮಾತ್ರ ವಹಿಸುವ ಸಾಧ್ಯತೆ ಇದೆ.

ಬಿಜೆಪಿ, ಕಾಂಗ್ರೆಸ್ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಬಿರುಸಿನ ಪ್ರಚಾರ ನಡೆಸಿವೆ. ಎಂಇಎಸ್ ಅಭ್ಯರ್ಥಿಗಳು ಸಹ ಅಬ್ಬರದ ಪ್ರಚಾರವನ್ನು ನಡೆಸಿದ್ದಾರೆ. ಯಾರಿಗೆ ಗೆಲುವು ಸಿಗಲಿದೆ? ಎಂದು ಸೆಪ್ಟೆಂಬರ್ 6ರಂದು ತಿಳಿಯಲಿದೆ.

ಶುಕ್ರವಾರ ಬೆಳಗಾವಿ ಮಹಾನಗರ ಪಾಲಿಕೆ ಜೊತೆಗೆ ಹುಬ್ಬಳ್ಳಿ-ಧಾರವಾಡ (82 ವಾರ್ಡ್), ಕಲಬುರಗಿಯ (55 ವಾರ್ಡ್)ಗಳಿಗೆ ಸಹ ಚುನಾವಣೆ ನಡೆಯುತ್ತಿದೆ. ನಗರಸಭೆ, ಪಟ್ಟಣ ಪಂಚಾಯಿತಿ ಸೇರಿದಂತೆ ಹಲವು ವಾರ್ಡ್‌ಗಳಿಗೆ ಉಪ ಚುನಾವಣೆ ಸಹ ನಡೆಯುತ್ತಿದೆ.

English summary
Voting began for the Belagavi City Corporation (BCC) elections. 385 candidates in fray for 58 wards.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X