16 ಕಾಲೇಜುಗಳಿಗೆ ಸ್ವಾಯತ್ತತೆ ನೀಡಿದ ವಿಟಿಯು

ಬೆಳಗಾವಿ, ಆ.19 : ಬೆಳಗಾವಿಯಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ತನ್ನ ವ್ಯಾಪ್ತಿಯ 16 ಇಂಜಿನಿಯರಿಂಗ್ ಕಾಲೇಜುಗಳಿಗೆ ಸ್ವಾಯತ್ತತೆ ನೀಡಿದೆ. ಯುಜಿಸಿ, ಕರ್ನಾಟಕ ಸರ್ಕಾರದ ನಿರ್ದೇಶದಂತೆ ಅಟಾನಮಸ್ ಕಾಲೇಜುಗಳೆಂದು ಘೋಷಣೆ ಮಾಡಲಾಗಿದೆ.

ಸ್ವಾಯತ್ತತೆ ಪಡೆದಿರುವ ಈ ಕಾಲೇಜುಗಳು ಪರೀಕ್ಷೆ ನಡೆಸಲು, ಫಲಿತಾಂಶ ಪ್ರಕಟಿಸಲು ಮತ್ತು ವಿದ್ಯಾರ್ಥಿಗಳಿಗೆ ತಾತ್ಕಾಲಿಕ ಪದವಿ ಪ್ರಮಾಣ ಪತ್ರಗಳನ್ನು ನೀಡಲು ಅವಕಾಶವಿದೆ. ಆದರೆ, ಈ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಅಂತಿಮ ಪ್ರಮಾಣ ಪತ್ರವನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವದ ಸಂದರ್ಭಲ್ಲಿ ನೀಡಲಾಗುತ್ತದೆ.

VTU

ಸ್ವಾಯತ್ತತೆ ಪಡೆದಿರುವ 16 ಕಾಲೇಜುಗಳು
* ಮಲ್ನಾಡ್ ಇಂಜಿನಿಯರಿಂಗ್ ಕಾಲೇಜು, ಹಾಸನ
* ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜು, ಮೈಸೂರು
* ಪಿಇಎಸ್ ಇನ್ಸ್‌ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ಬೆಂಗಳೂರು
* ನಿಟ್ಟೆ ಮೀನಾಕ್ಷಿ ಇನ್ಸ್‌ಟಿಟ್ಯೂಟ್‌ ಆಫ್‌ ಟೆಕ್ನಾಲಜಿ , ಬೆಂಗಳೂರು
* ಬಿವಿಬಿ ಕಾಲೇಜ್ ಆಫ್‌ ಇಂಜಿನಿಯರಿಂಗ್, ಟೆಕ್ನಾಲಜಿ, ಹುಬ್ಬಳ್ಳಿ
* ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು, ಬಾಗಲಕೋಟೆ
* ಎಸ್‌ಡಿಎಂ ಕಾಲೇಜ್ ಆಫ್ ಇಂಜಿನಿಯರಿಂಗ್, ಟೆಕ್ನಾಲಜಿ, ಧಾರವಾಡ
* ನ್ಯಾಷನಲ್ ಇನ್ಸ್‌ಟಿಟ್ಯೂಟ್ ಆಫ್ ಇಂಜಿನಿಯರಿಂಗ್, ಮೈಸೂರು
* ಪಿಡಿಎ ಕಾಲೇಜ್‌ ಆಫ್ ಇಂಜಿನಿಯರಿಂಗ್, ಗುಲ್ಬರ್ಗ
* ಸಿದ್ದಗಂಗಾ ಇನ್ಸ್‌ಟಿಟ್ಯೂಟ್ ಆಫ್‌ ಟೆಕ್ನಾಲಜಿ, ತುಮಕೂರು
* ಎನ್‌ಎಂಎಎಂ ಇನ್ಸ್‌ಟಿಟ್ಯೂಟ್ ಆಫ್‌ ಟೆಕ್ನಾಲಜಿ, ನಿಟ್ಟೆ
* ಆರ್‌ವಿ ಇಂಜಿನಿಯರಿಂಗ್ ಕಾಲೇಜು, ಬೆಂಗಳೂರು
* ಎಂಎಸ್‌ರಾಮಯ್ಯ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು
* ಬಿಎಂಎಸ್ ಕಾಲೇಜ್ ಆಫ್ ಇಂಜಿನಿಯರಿಂಗ್, ಬೆಂಗಳೂರು
* ಪಿಇಎಸ್ ಕಾಲೇಜ್ ಆಫ್ ಇಂಜಿನಿಯರಿಂಗ್, ಮಂಡ್ಯ
* ಡಾ.ಅಂಬೇಡ್ಕರ್ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+