ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚರಂಡಿಯಲ್ಲಿ ಕಲ್ಲಂಗಡಿ ಹಣ್ಣು ತೊಳೆದು ಮಾರುತ್ತಿದ್ದ ಇಬ್ಬರ ಬಂಧನ

|
Google Oneindia Kannada News

ಬೆಳಗಾವಿ, ಏಪ್ರಿಲ್ 19: ಕೊರೊನಾ ವೈರಸ್ ಭೀತಿಯಿರುವಾಗ ಚರಂಡಿಯಲ್ಲಿ ಕಲ್ಲಂಗಡಿ ಹಣ್ಣುಗಳನ್ನ ತೊಳೆದು ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬೆಳಗಾವಿ ಜಿಲ್ಲೆ ನಿಪ್ಪಾಣಿಯ ಬಸವೇಶ್ಚರ ಚೌಕ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನಿಪ್ಪಾಣಿ ಪಟ್ಟಣದ ಭೋಪಳೆ ಗಲ್ಲಿಯ ಶಾಬಾಜ್ ಮುನ್ನಾ ಸತಾರಿ (20) ಹಾಗೂ ರಿಯಾನ್ ಆಯಾಜ್ ಮಡ್ಡೆ (19) ಎಂಬ ಯುವಕರೇ ಬಂಧಿತರು. ಈ ಯುವಕರು ಕಲ್ಲಂಗಡಿ ಹಣ್ಣುಗಳನ್ನು ಚರಂಡಿಯಲ್ಲಿ ತೊಳೆದು ಮಾರಾಟ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಈ ವಿಡಿಯೋವನ್ನು ನೋಡಿದ್ದ ನಿಪ್ಪಾಣಿಯ ಸಾರ್ವಜನಿಕರು ಆರೋಪಿಗಳನ್ನು ಗುರುತಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ನಿಪ್ಪಾಣಿ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. ಆರೋಪಿಗಳು ಈ ಕೃತ್ಯವನ್ನು ಮಾರ್ಚ್ 28 ರಂದು ಎಸಗಿದ್ದು, ವಿಡಿಯೋ ವೈರಲ್ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

Watermelon Fruit Washed In Sewage At Nippani

ಈ ಪ್ರಕರಣ ಸಂಬಂಧ ಬಸವೇಶ್ವರ ಚೌಕ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿ ಹಿಂಡಲಗಾ ಜೈಲಿಗೆ ಕಳಿಸಿದ್ದಾರೆ.

English summary
Police have arrested two youths for washing and selling watermelons in the sewage at Basaveshwara Square Station in Nippani, Belagavi District.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X