ಕೊಪ್ಪಳ ಜಿಲ್ಲೆಗೆ ಹೋಗಲು ವೈದ್ಯರಿಗೆ ಬಂಪರ್ ಆಫರ್!

ut khader
ಬೆಳಗಾವಿ, ಡಿ. 3 : ಕೊಪ್ಪಳ ಜಿಲ್ಲೆಯಲ್ಲಿ ವೈದ್ಯರ ಕೊರತೆಯಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಸದನದಲ್ಲಿ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ತಾಯಿ ಮತ್ತು ಶಿಶು ಮರಣ ಪ್ರಕರಣ ಹೆಚ್ಚಾಗಿದೆ, ಹೆಚ್ಚು ಸಂಬಳ ನೀಡಿ ಜಿಲ್ಲೆಗೆ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಸಿದ್ಧವಿದೆ ಎಂದು ಖಾದರ್‌ ಘೋಷಿಸಿದ್ದಾರೆ.

ಸೋಮವಾರ ವಿಧಾನಸಭೆ ಕಲಾಪದಲ್ಲಿ ಬಿಜೆಪಿಯ ಆಚಾರ್‌ ಹಾಲಪ್ಪ ಪ್ರಶ್ನೆಗೆ ಉತ್ತರಿಸಿದ ಯು.ಟಿ.ಖಾದರ್, ಕೊಪ್ಪಳ ಜಿಲ್ಲೆಗೆ ಒಟ್ಟು 14 ತಜ್ಞ ವೈದ್ಯರ ಅಗತ್ಯವಿದೆ. ಆದರೆ ಸದ್ಯ 7 ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು. ಜಿಲ್ಲೆಗೆ ಮಕ್ಕಳ ತಜ್ಞರ ಕೊರತೆ ಇದೆ. ಆದ್ದರಿಂದ ತಾಯಿ- ಶಿಶು ಮರಣ ಪ್ರಮಾಣ ಹೆಚ್ಚಾಗುತ್ತಿದೆ ಎಂದು ಹೇಳಿದರು. (ಅಧಿವೇಶನ : ಸೋಮವಾರ ಸದನದಲ್ಲಿ ಏನಾಯ್ತು?)

ಕೊಪ್ಪಳ ಜಿಲ್ಲೆಗೆ ತಿಂಗಳಿಗೆ ಹೆಚ್ಚು ಅಂದರೆ 1.25 ಲಕ್ಷ ರೂ. ಕೊಟ್ಟು ವೈದ್ಯರನ್ನು ನೇಮಕ ಮಾಡಿಕೊಳ್ಳುವುದಕ್ಕೆ ಸರ್ಕಾರ ಸಿದ್ಧವಿದೆ ಎಂದು ಖಾದರ್ ಘೋಷಿಸಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ ನೀಗಿಸಲು ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ದಿನದ ಆಧಾರದಲ್ಲಿ ಅಥವಾ ವಾರಕ್ಕೊಮ್ಮೆ ಖಾಸಗಿ ವೈದ್ಯರ ಸೇವೆ ಪಡೆದುಕೊಳ್ಳಲು ಸಿದ್ಧವಿದೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು.

ವೈದ್ಯರ ನೇಮಕಕ್ಕೆ ಸೂಚನೆ : ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯ ಪ್ರಮಾಣದಲ್ಲಿ ವೈದ್ಯರನ್ನು ನೇಮಕ ಮಾಡುವಂತೆ ಸ್ಪೀಕರ್‌ ಕಾಗೋಡು ತಿಮ್ಮಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಿದ್ದಾರೆ. ಜೆಡಿಎಸ್‌ ಸದಸ್ಯ ಬಿ.ಬಿ.ನಿಂಗಯ್ಯ ವೈದ್ಯರ ಕೊರತೆ ವಿಷಯ ಪ್ರಸ್ತಾಪಿಸಿದಾಗ ಸ್ಪೀಕರ್‌ ಈ ಸೂಚನೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+