ಕರ್ನಾಟಕದಲ್ಲಿ ಎನ್‌ಇಪಿ ಜಾರಿಗೆ ತರುವುದಿಲ್ಲ, ಶೀಘ್ರದಲ್ಲೇ ನಿರ್ಧಾರ ಪ್ರಕಟ: ಸತೀಶ್ ಜಾರಕಿಹೊಳಿ

ಬೆಳಗಾವಿ, ಮೇ. 31: ಕರ್ನಾಟಕವು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ಜಾರಿಗೆ ತರುವುದಿಲ್ಲ. ಅಧಿಕಾರಿಗಳು ಮತ್ತು ಸಚಿವರ ಸಭೆಯ ನಂತರ ಈ ಕುರಿತು ಶೀಘ್ರದಲ್ಲೇ ನಿರ್ಧಾರ ಪ್ರಕಟಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಂಗಳವಾರ ಬೆಳಗಾವಿಯಲ್ಲಿ ತಿಳಿಸಿದ್ದಾರೆ.

"ನಾವು ಯಾವಾಗಲೂ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸುತ್ತೇವೆ. ಇದು ಸಾಮಾನ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಹಾನಿಕಾರಕವಾಗಿದೆ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ. ನಾವು ಅದನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ. ಈ ನೀತಿಯು ಕೇಸರಿಕರಣದ ಅಂಶಗಳನ್ನು ಹೊಂದಿದೆ" ಎಂದು ಸಚಿವ ಸತೀಶ್ ಜಾರಕಿಹೊಳಿ ಕಿಡಿಕಾರಿದ್ದಾರೆ.

We will not implement NEP says Minister Satish Jarkiholi

" ಈ ನೀತಿಯು ವಂಚಿತ ವರ್ಗಗಳಿಗೆ ಶಿಕ್ಷಣದ ಅವಕಾಶಗಳನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ಹೆಚ್ಚಿನ ಶಿಕ್ಷಣ ತಜ್ಞರು ಇದನ್ನು ವಿರೋಧಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎನ್‌ಇಪಿಯ ದುಷ್ಪರಿಣಾಮಗಳ ಕುರಿತು ಅಧ್ಯಯನ ನಡೆಸಿ ಕ್ರಮಕ್ಕೆ ಶಿಫಾರಸು ಮಾಡುವ ತಜ್ಞರ ಸಮಿತಿಯನ್ನು ರಚಿಸಲಿದ್ದಾರೆ" ಎಂದು ಮಾಹಿತಿ ನೀಡಿದ್ದಾರೆ.

ಇನ್ನು, ಬೆಳಗಾವಿ ಜಿಲ್ಲೆಯನ್ನು ಸಣ್ಣ ಜಿಲ್ಲೆಗಳನ್ನಾಗಿ ವಿಭಜಿಸುವ ಬಗ್ಗೆ ಚರ್ಚೆಯಿದೆ. ಈ ಜಿಲ್ಲೆ ದೊಡ್ಡದಾಗಿದೆ ಮತ್ತು ಆಡಳಿತಾತ್ಮಕವಾಗಿ ಕಾರ್ಯಸಾಧ್ಯವಲ್ಲ. ಎರಡು, ಮೂರು ಅಥವಾ ಹೆಚ್ಚು ಹೊಸ ಜಿಲ್ಲೆಗಳಾಗಿ ವಿಭಜನೆಗೆ ಬೇಡಿಕೆಗಳಿರಬಹುದು. ಆದರೆ ವೈಜ್ಞಾನಿಕ ಮಾನದಂಡಗಳ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಅದು ಅಂತಿಮವಾಗಲಿದೆ. ಈಗ ಹೊಸ ಗೋಕಾಕ ಮತ್ತು ಚಿಕ್ಕೋಡಿ ಜಿಲ್ಲೆಗಳ ಬೇಡಿಕೆಗಳು ಕೇಳಿ ಬರುತ್ತಿವೆ. ಅವುಗಳನ್ನು ಪರಿಗಣಿಸಲಾಗುವುದು" ಎಂದು ತಿಳಿಸಿದ್ದಾರೆ.

We will not implement NEP says Minister Satish Jarkiholi

ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಮಾತನಾಡಿ, ಬೈಲಹೊಂಗಲ ಜಿಲ್ಲೆಗೆ ಬೇಡಿಕೆ ಇದೆ. ರಾಜ್ಯ ಮಟ್ಟದ ಕಚೇರಿಗಳನ್ನು ಸುವರ್ಣಸೌಧಕ್ಕೆ ಸ್ಥಳಾಂತರಿಸುವ ಯೋಜನೆಗೆ ಪರವಾಗಿಲ್ಲ. ಅದು ಅವೈಜ್ಞಾನಿಕ ಮತ್ತು ಸಾರ್ವಜನಿಕರಿಗೆ ತೊಂದರೆಯಾಗಲಿದೆ. ನಾನು ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದೆ. ಈಗ ಅದನ್ನೂ ವಿರೋಧಿಸುತ್ತೇನೆ ಎಂದಿದ್ದಾರೆ.

ಆದರೆ, ಕಟ್ಟಡವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಸರ್ಕಾರ ಕೆಲವು ಪರಿಹಾರಗಳನ್ನು ನೀಡುತ್ತದೆ . ಬೆಳಗಾವಿಯಲ್ಲಿ ಒಂದು ತಿಂಗಳಲ್ಲಿ ಎರಡು ಸಚಿವ ಸಂಪುಟ ಸಭೆ ನಡೆಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ತನಿಖೆ ನಡೆಸುವಂತೆ ಸಿಐಡಿ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.

ಇದೆ ವೇಳೆ ಗೃಹ ಲಕ್ಷ್ಮಿ ಯೋಜನೆಯಡಿ ಬಡ ಮಹಿಳೆಯರಿಗೆ ಹಣ ವಿತರಿಸುವ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. " ಅತ್ತೆಯರು ಕುಟುಂಬದ ಮುಖ್ಯಸ್ಥರಾಗುವ ಸಾಧ್ಯತೆಯಿದೆ. ಅವರಿಗೆ ಮಾಸಿಕ 2,000 ರೂಪಾಯಿ ಹಣ ಸಿಗಲಿದೆ. ಸೊಸೆ ಪಡೆಯಬೇಕು ಎಂದು ಅತ್ತೆ ಒತ್ತಾಯಿಸಿದರೆ ಆ ಮೊತ್ತವನ್ನು ಸೊಸೆಗೆ ನೀಡಲಾಗುವುದು" ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+