Lok Sabha Election 2024: ಚುನಾವಣಾ ಪ್ರಚಾರ ಸಾಮಗ್ರಿಗಳ ದರ ನಿಗದಿ ಬೆಳಗಾವಿ ಜಿಲ್ಲಾಧಿಕಾರಿ ಹೇಳಿದ್ದೇನು?
ಬೆಳಗಾವಿ, ಡಿಸೆಂಬರ್, 21: ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆ ಚುನಾವಣಾ ಪ್ರಚಾರಕ್ಕೆ ತಗಲುವ ಖರ್ಚು-ವೆಚ್ಚಗಳನ್ನು ಲೆಕ್ಕಾಚಾರ ಮಾಡಲು ಅನುಕೂಲವಾಗುವಂತೆ ವಿವಿಧ ಸೇವೆಗಳಿಗೆ ನಿಗದಿಪಡಿಸಲಾದ ಮಾರುಕಟ್ಟೆ ದರಗಳನ್ನು ಆಧರಿಸಿಯೇ ವೆಚ್ಚವನ್ನು ಲೆಕ್ಕ ಮಾಡಲಾಗುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಎಸ್.ಆರ್. ದರ ನಿಗದಿಪಡಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ(ಡಿಸೆಂಬರ್ 21) ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಸ್.ಆರ್.ದರಗಳನ್ನು ಆರು ತಿಂಗಳ ಹಿಂದೆಯೇ ನಡೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಿಗದಿಪಡಿಸಲಾಗಿರುತ್ತದೆ. ಆದಾಗ್ಯೂ ಪ್ರಸ್ತುತ ಮಾರುಕಟ್ಟೆ ದರಗಳು ಮತ್ತು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಲಹೆಗಳನ್ನು ಆಧರಿಸಿ ದರಗಳಲ್ಲಿ ಅಗತ್ಯ ಪರಿಷ್ಕರಣೆ ಮಾಡಲಾಗುವುದು ಎಂದು ಹೇಳಿದರು.
ಚುನಾವಣಾ ಪ್ರಚಾರ ಸಂದರ್ಭದಲ್ಲಿ ಬಳಕೆ ಮಾಡುವ ಹೂವುಗಳ ದರವನ್ನು ಕಡಿಮೆಗೊಳಿಸಬೇಕು ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಪ್ರತಿನಿಧಿಗಳು ಸಲಹೆ ನೀಡಿದರು. ನಗರದಲ್ಲಿರುವ ಪುಷ್ಪ ಹರಾಜು ಕೇಂದ್ರದಿಂದ ಸಗಟು ಮಾರುಕಟ್ಟೆ ದರಗಳನ್ನು ಪಡೆದುಕೊಂಡು ದರಗಳನ್ನು ಪರಿಷ್ಕರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದರು.
ಇನ್ನೂ ಸಾಕಷ್ಟು ಕಾಲವಕಾಶ ಇರುವುದರಿಂದ ದರ ಪರಿಷ್ಕರಣೆ ಹಾಗೂ ಹೊಸ ಸಾಮಗ್ರಿ ಅಥವಾ ಸೇವೆಗಳ ಸೇರ್ಪಡೆಯನ್ನು ಮಾಡಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳು ತಮ್ಮ ಸಲಹೆ-ಅಭಿಪ್ರಾಯಗಳನ್ನು ತಿಳಿಸಬೇಕು ಎಂದು ಹೇಳಿದರು.
ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ
2024ರ ಜನವರಿ 1ರಂದು ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು. ಅಲ್ಲಿಯವರೆಗೂ ಚುನಾವಣಾ ಆಯೋಗದ ಮಾರ್ಗಸೂಚಿ ಮತ್ತು ನಿರ್ದೇಶನದ ಪ್ರಕಾರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಅಕ್ಟೋಬರ್ 27ನಿಂದ ಡಿಸೆಂಬರ್ 9 ರವರೆಗಿನ ಅವಧಿಯಲ್ಲಿ ಕೈಗೊಳ್ಳಲಾಗಿರುವ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮಾಹಿತಿಯನ್ನು ಒದಗಿಸಲಾಯಿತು. ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರುಗಳ ಸೇರ್ಪಡೆ, ತೆಗೆದುಹಾಕುವಿಕೆ, ತಿದ್ದುಪಡಿ ಮತ್ತಿತರ ಪರಿಷ್ಕರಣೆ ಒಳಗೊಂಡ ಮತದಾರರ ಪಟ್ಟಿಯನ್ನು ನೀಡಲಾಯಿತು.
ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಜಿಲ್ಲಾ ಪಂಚಾಯತಿ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ್ ದುಡಗುಂಟಿ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀಶೈಲ್ ಕಂಕಣವಾಡಿ, ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ರೇಷ್ಮಾ ತಾಳಿಕೋಟೆ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಶಾಸಕ ಮಹೇಶ್ ಟೆಂಗಿನಕಾಯಿ ಆಕ್ರೋಶ
ಹಿಂದಿನ ಬಿಜೆಪಿ ಸರ್ಕಾರವು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಸ್ತೆ ಸೇರಿ ಮೂಲ ಸೌಲಭ್ಯ ಕಲ್ಪಿಸುವ ಕಾಮಗಾರಿಗಾಗಿ 43 ಕೋಟಿ ರೂಪಾಯಿ ಮಂಜೂರು ಮಾಡಿತ್ತು. ಆದರೆ, ಪ್ರಸ್ತುತ ರಾಜ್ಯ ಸರ್ಕಾರ ಈ ಪೈಕಿ ಸುಮಾರು 30 ಕೋಟಿ ರೂಪಾಯಿ ಕೆಲಸಗಳಿಗೆ ತಡೆ ನೀಡಿದೆ ಎಂದು ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಆರೋಪಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಪ್ರಮುಖ ರಸ್ತೆಗಳ ಕಾಂಕ್ರೀಟಿಕರಣ, ಒಳಚರಂಡಿ ಮುಂತಾದ ಕಾಮಗಾರಿಗಳು ಈ ಅನುದಾನದಲ್ಲಿ ನಡೆಯಬೇಕಾಗಿತ್ತು. ಬಹಳಷ್ಟು ಕಾಮಗಾರಿಗಳು ಟೆಂಡರ್ ಹಂತದಲ್ಲಿ ಇದ್ದಾಗ ಸರ್ಕಾರ ಇವುಗಳನ್ನು ನಿಲ್ಲಿಸಲು ಸೂಚನೆ ನೀಡಿದೆ. ಇದರಿಂದಾಗಿ ಜನರಿಗೆ ನೀಡಿದ ಭರವಸೆಗಳು ಈಡೇರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ರಾಜ್ಯದ ಯಾವುದೇ ನಗರದಲ್ಲಿ ಇಂತಹ ಪ್ರಸಂಗಗಳು ನಡೆದಿಲ್ಲ. ಇಲ್ಲಿ ಮಾತ್ರ ಸ್ಥಳಿಯ ನಾಯಕರೊಬ್ಬರ ಒತ್ತಡದಿಂದಾಗಿ ಅಧಿಕಾರಿಗಳು ಅಭಿವೃದ್ಧಿ ಕಾರ್ಯಗಳಿಗೆ ಕೊಕ್ಕೆ ಹಾಕಿದ್ದಾರೆ. ಯಾರೇ ಆಗಲಿ ಅಭಿವೃದ್ಧಿ ಕೆಲಸಗಳನ್ನು ನಿಲ್ಲಿಸುವುದು ಸರಿಯಲ್ಲ. ಈ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಇನ್ನಷ್ಟು ವಿವರ ಪಡೆದುಕೊಂಡು ಮುಂದೇನು ಮಾಡಬೇಕೆಂದು ನಿರ್ಧರಿಸುವೆ ಎಂದು ಹೇಳಿದರು.
ಬೆಳಗಾವಿಯಲ್ಲಿ ನಡೆದ ವಿಧಾನಸಭೆ ಅಧಿವೇಶನದಲ್ಲಿ ಉತ್ತಮ ಚರ್ಚೆಯಾಗಿವೆ. ನಾನು ಕೂಡ 31 ಇಲಾಖೆಗಳಿಗೆ ಸಂಬಂಧಿಸಿ 25 ಪ್ರಶ್ನೆಗಳನ್ನು ಕೇಳಿರುವೆ. ಅದರಲ್ಲಿ ವಿಶೇಷವಾಗಿ ಗಂಗೂಬಾಯಿ ಹಾನಗಲ್ಲ ಗುರುಕುಲಕ್ಕೆ ಅನುದಾನ ಬಿಡುಗಡೆ ಸೇರಿ ವಿವಿಧ ವಿಷಯಗಳು ಚರ್ಚೆಯಾಗಿವೆ. ಹಾಗೆಯೇ ಹುಬ್ಬಳ್ಳಿಗೆ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರ ಮಂಜೂರಾಗಲಿದೆ ಎಂದರು.
ಧಾರವಾಡದಲ್ಲಿ ಎಫ್ಎಂಸಿಜಿ ಕ್ಲಸ್ಟರ್ ನಿರ್ಮಾಣದ ಕನಸು ನನಸು ಮಾಡಲು ಈಗಿನ ಸರ್ಕಾರ ಮುತುವರ್ಜಿ ವಹಿಸಬೇಕು. ಬಿಜೆಪಿ ಸರ್ಕಾರ ಎಕರೆಗೆ 98 ಲಕ್ಷ ರೂಪಾಯಿ ನಿಗದಿ ಮಾಡಿತ್ತು. ಆದರೆ, ಈಗಿನ ಸರ್ಕಾರ 1.38 ಕೋಟಿ ರೂಪಾಯಿ ವಿಧಿಸುತ್ತಿದೆ. ಇದರಿಂದ ಉದ್ಯಮಿಗಳು ಹಿಂದೆ ಸರಿಯುವ ಸಾಧ್ಯತೆ ಇದೆ. ಈ ಬಗ್ಗೆ ಕೈಗಾರಿಕೆ ಸಚಿವರಿಗೆ ಮನವರಿಕೆ ಮಾಡಿರುವೆ. ಸರ್ಕಾರ ಧನಾತ್ಮಕವಾಗಿ ಆಲೋಚಿಸಿದರೆ ಹೆಚ್ಚಿನ ಕಂಪನಿಗಳು ಕ್ಲಸ್ಟರ್‌ನಲ್ಲಿ ಬರಲಿವೆ ಎಂದರು.
ಬಿಯಾಂಡ್ ಬೆಂಗಳೂರು ಪರಿಕಲ್ಪನೆ ಜಾರಿಯಾಗುತ್ತಿಲ್ಲ. ಐಟಿ ಕಂಪನಿಗಳು ಈ ಭಾಗಕ್ಕೆ ಬರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಶಾಸಕ ಟೆಂಗಿನಕಾಯಿ ಅವರು, ಹುಬ್ಬಳ್ಳಿ ಧಾರವಾಡವನ್ನು ಟೂರಿಸಂ ಹಬ್ ಆಗಿ ಪರಿವತಿರ್ಸುವ ಕುರಿತು ಸಂಬಂಧಪಟ್ಟ ಸಚಿವರೊಂದಿಗೆ ಚಚಿರ್ಸಿರುವೆ. ನೃಪತುಂಗ ಬೆಟ್ಟದಲ್ಲಿ ಜಿಪ್ಲೈನ್ ಆಗಬೇಕು. ಇಲ್ಲಿನ ಪ್ರವಾಸಿ ತಾಣಗಳ ವೀಕ್ಷಣೆಗೆ ಸೌಲಭ್ಯಗಳನ್ನು ನೀಡಬೇಕು ಎಂದು ಕೋರಿದ್ದೇನೆ ಎಂದರು.
ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಫ್ಲೈಓವರ್ ಕಾಮಗಾರಿಯು ನಿಧಾನವಾಗಿದೆ. ನಿಗದಿತ ಅವಧಿಯಲ್ಲಿ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಇದೀಗ ಬರೀ ಶೇಕಡಾ 40ರಷ್ಟು ಕೆಲಸ ಮುಗಿದಿದೆ. ಹಾಗಾಗಿ ಮುಂದಿನ ವಾರ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಹಾಗೂ ತಾವು ಸೇರಿ ಅಧಿಕಾರಿಗಳೊಂದಿಗೆ ಸಭೆ ಮಾಡಲಿದ್ದೇವೆ. ಅಡೆತಡೆಗಳ ಬಗ್ಗೆ ಚರ್ಚೆ ಮಾಡಿ ಕಾಮಗಾರಿಗೆ ವೇಗ ನೀಡಲು ಪ್ರಯತ್ನಿಸಲಾಗುವುದು ಎಂದರು.
ಒಟ್ಟಾರೆ, ಅಧಿವೇಶನದಲ್ಲಿ ಕ್ಷೇತ್ರದ ಜನರ ಧ್ವನಿಯಾಗಿ ಮಾತನಾಡಿದ್ದೇನೆ. ಕ್ಷೇತ್ರದ ಅಭಿವೃದ್ಧಿಯೇ ನನ್ನ ಗುರಿಯಾಗಿದೆ. ಇದಕ್ಕೆ ಯಾರೇ ಆಗಲಿ ಅಡ್ಡಿಪಡಿಸುವ ಕೆಲಸ ಮಾಡಬಾರದು ಎಂದು ಮನವಿ ಮಾಡಿದರು.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications