Get Updates
Get notified of breaking news, exclusive insights, and must-see stories!

ಬಕ್ರಾ ಮಾಡಲು ಇಲ್ಲಿಗೆ ಬಂದಿದ್ದೀರಾ?, ಬೆಳಗಾವಿಗೆ ನಿಮ್ಮ ಕೊಡುಗೆ ಏನು?: ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆ

ಬೆಳಗಾವಿ, ಮಾರ್ಚ್ 28: ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರಿಂದ ಬೆಳಗಾವಿಗೆ ಕೊಡುಗೆ ಏನು? ಅವರು ಬೆಳಗಾವಿ ನನ್ನ ಕರ್ಮ ಭೂಮಿ ಎನ್ನುತ್ತಿದ್ದಾರೆ. ಹಾಗಾದರೆ ನಾವೇನು ಹುಚ್ಚರಾ? ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಖಾರವಾಗಿ ಪ್ರಶ್ನೆ ಮಾಡಿದ್ದಾರೆ.

ಗುರುವಾರ ಗೋಕಾಕ್‌ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಗೆ ಅಲೋಟ್ ಆಗಿದ್ದ ಆಕ್ಸಿಜನ್ ಘಟಕ ಅನ್ನು ಹುಬ್ಬಳ್ಳಿ- ಧಾರವಾಡಕ್ಕೆ ತೆಗೆದುಕೊಂಡು ಹೋಗಿದ್ದರು. ಬೆಳಗಾವಿ ಜನರಿಗೆ ಅನ್ಯಾಯ ಮಾಡಿರುವ ಅವರು, ಇಂದು ಇದು ನನ್ನ ಕರ್ಮ ಭೂಮಿ ಎನ್ನುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

What Give Contribution of Jagadish Shettar to Belagavi People Lakshmi Hebbalkar Outrage

ಬಕ್ರಾ ಮಾಡಲು ಬಂದಿದ್ದೀರಾ?

ಬೆಳಗಾವಿ ದೊಡ್ಡ ಜಿಲ್ಲೆ, ಇಲ್ಲಿ ಜನಸಂಖ್ಯೆ ಹೆಚ್ಚಿದೆ. ಬೆಳಗಾವಿ ಜಿಲ್ಲೆ ನಿಮ್ಮ ಕೊಡುಗೆ ಏನು? ಈಗ ಕರ್ಮ ಭೂಮಿ ಎಂದು ಜಿಲ್ಲೆಯ ಜನರನ್ನು ಬಕ್ರಾ ಮಾಡಲು ಇಲ್ಲಿಗೆ ಬಂದಿದ್ದೀರಾ? ಎಂದು ಪ್ರಶ್ನಿಸಿದರು.

ಆರು ಬಾರಿ ಹುಬ್ಬಳ್ಳಿ ಜನರು ಜಗದೀಶ್ ಶೆಟ್ಟರ್ ಅವರನ್ನು ಆಯ್ಕೆ ಮಾಡಿ ಕಳುಹಿಸಿದ್ದರು. ವಿರೋಧ ಪಕ್ಷದ ನಾಯಕರಾದರು, ಮಂತ್ರಿಯಾದರು, ಮುಖ್ಯಮಂತ್ರಿಯಾದರು, ಬಿಜೆಪಿ ಅಧ್ಯಕ್ಷರಾದರು. ಎಲ್ಲವನ್ನೂ ಅನುಭವಿಸಿದ್ದಂತವರನ್ನು ಹುಬ್ಬಳ್ಳಿ- ಧಾರವಾಡ ಜನರು ಈಗ ಹೊರಗೆ ಹಾಕಿದ್ದಾರೆ.

ಈಗ ಇಲ್ಲಿಗೆ ಬಂದು ಕರ್ಮ ಭೂಮಿ ಕರ್ಮ ಭೂಮಿ ಎನ್ನಲು ಏನಿದೆ ಬೆಳಗಾವಿಗೆ ನಿಮ್ಮ ಕೊಡುಗೆ? ಏನಾದರೂ ಕೊಡುಗೆ ಇದೆಯಾ ನಾಚಿಕೆಯಾಗಬೇಕು ನಿಮಗೆ ಎಂದು ಹೆಬ್ಬಾಳಕರ್ ಕಿಡಿ ಕಾರಿದರು.

What Give Contribution of Jagadish Shettar to Belagavi People Lakshmi Hebbalkar Outrage

ಬಿಜೆಪಿ ನಾಯಕರಿಂದಲೇ 'ಗೋಬ್ಯಾಕ್ ಅಭಿಯಾನ'

ಗೋ ಬ್ಯಾಕ್ ಶೆಟ್ಟರ್ ಎಂದು ಅವರ ಬಿಜೆಪಿ ಪಕ್ಷದ ಕಾರ್ಯಕರ್ತರೇ ಮಾಡುತ್ತಿರುವ ಅಭಿಯಾನ. ಅವರ ಪಕ್ಷದ ಕಾರ್ಯಕರ್ತರ ಸ್ವಾಭಿಮಾನಕ್ಕೂ ಧಕ್ಕೆಯಾಗಿದೆ. ಪ್ರಧಾನಿ ಮೋದಿಯವರು ಎಲ್ಲೋ ಹೋಗಿ ಚುನಾವಣೆಗೆ ನಿಂತಿದ್ದಾರೆ ಎಂದು ತಮ್ಮ ಬೆಳಗಾವಿ ಸ್ಪರ್ಧೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇವರೇನು ಮೋದಿಯಷ್ಟು ದೊಡ್ಡವರಾ? ನಾಚಿಕೆಯಾಗಬೇಕು ಇವರಿಗೆ ಎಂದು ಅವರು ಜರಿದರು.

ಭಿನ್ನಮತ ಶಮನಕ್ಕೆ ಶೆಟ್ಟರ್ ಪ್ರಯತ್ನ

ಬಹುಕಸರತ್ತಿನ ಬಳಿಕ ಬೆಳಗಾವಿ ಕ್ಷೇತ್ರದ ಟಿಕೆಟ್ ಪಡೆಯುವಲ್ಲಿ ಜಗದೀಶ್ ಶೆಟ್ಟರ್ ಯಶಸ್ವಿಯಾದರು. ಇದೀಗ ಪ್ರಚಾರ ಕಾರ್ಯದಲ್ಲಿರುವ ಅವರು, ಬೆಳಗಾವಿಯಲ್ಲಿ ಪಕ್ಷದೊಳಗಿನ ಅಸಮಾಧಾನ, ಭಿನ್ನಮತ ಶಮನ ಮಾಡುವಲ್ಲಿ ನಿರಂತರ ಪ್ರಯತ್ನ ನಡೆಸಿದ್ದಾರೆ. ಇದರೊಂದಿಗೆ ಪ್ರಚಾರ ಕಾರ್ಯದಲ್ಲಿರುವ ಅವರು, ಇದು ನನ್ನ ಕರ್ಮಭೂಮಿ ಎಂದಿದ್ದಾರೆ. ಇದಕ್ಕೆ ಕಾಂಗ್ರೆಸ್‌ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಕೌಂಟರ್ ಕೊಟ್ಟಿದ್ದಾರೆ. ಕೆಲವು ಪ್ರಶ್ನೆಗಳನ್ನು ಅವರ ಮುಂದಿಟ್ಟಿದ್ದಾರೆ.

ಪ್ರಚಾರದ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ನೀತಿನ ಸಂಹಿತೆ ಉಲ್ಲಂಘನೆ ಮಾಡಿದ್ದರಿಂದ ಅವರಿಗೆ ಚುನಾವಣೆ ಆಯೋಗ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದು ಬಂದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+