ವೈರಲ್ ಸುದ್ದಿ : ಗಣೇಶ್ ಹುಕ್ಕೇರಿ ಜನವರಿ 19ರಂದು ಬಿಜೆಪಿಗೆ ಸೇರ್ಪಡೆ!
ಬೆಳಗಾವಿ, ಜನವರಿ 13 : ಭಾನುವಾರ ರಾಜ್ಯ ರಾಜಕಾರಣದ ಸುದ್ದಿಯೊಂದು ವೈರಲ್ ಆಗಿದೆ. ಚಿಕ್ಕೋಡಿ-ಸದಲಗಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಗಣೇಶ್ ಹುಕ್ಕೇರಿ ಅವರು ಬಿಜೆಪಿ ಸೇರಲಿದ್ದಾರೆ ಎಂಬುದು ಸುದ್ದಿಯಾಗಿದೆ.
ಜನವರಿ 13ರ ಭಾನುವಾರ ಬೆಳಗ್ಗೆಯಿಂದ ಇಂಹತ ಸುದ್ದಿ ವೈರಲ್ ಆಗಿದೆ. ಇದಕ್ಕೆ ಮತ್ತಷ್ಟು ಪುಷ್ಠಿ ನೀಡುವಂತೆ ಗಣೇಶ್ ಹುಕ್ಕೇರಿ ಅವರು ಮಾತನಾಡಿರುವ ಆಡಿಯೋ ಸಹ ಎಲ್ಲಾ ಕಡೆ ಹರಿದಾಡುತ್ತಿದೆ. ಗಣೇಶ್ ಹುಕ್ಕೇರಿ ಮಾಜಿ ಸಚಿವ, ಹಾಲಿ ಚಿಕ್ಕೋಡಿ ಕ್ಷೇತ್ರದ ಸಂಸದ ಪ್ರಕಾಶ್ ಹುಕ್ಕೇರಿ ಅವರ ಪುತ್ರ.
'ನಾನು ಜನವರಿ 19ರಂದು ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೇರಲಿದ್ದಾನೆ. ಬೇರೆಯವರ ಹೆಸರು ಹೇಳಲ್ಲ. ನಾನಂತೂ ಬಿಜೆಪಿಗೆ ಹೋಗುತ್ತೇನೆ' ಎಂದು ಗಣೇಶ್ ಹುಕ್ಕೇರಿ ನಡೆಸಿರುವ ದೂರವಾಣಿ ಸಂಭಾಷಣೆ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.
ಕರ್ನಾಟಕ ಬಿಜೆಪಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ನಡೆಸುತ್ತಿದೆ ಎಂಬ ಸುದ್ದಿಗಳು ಹರಿದಾಡುತ್ತಿರುವಾಗ ಗಣೇಶ್ ಹುಕ್ಕೇರಿ ಅವರ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ. ಈ ಬಗ್ಗೆ ಯಾರು, ಏನು ಹೇಳಿದರು? ಚಿತ್ರಗಳಲ್ಲಿ ನೋಡಿ.....

ಗಣೇಶ್ ಹುಕ್ಕೇರಿ ಸ್ಪಷ್ಟನೆ
ವೈರಲ್ ಆಗಿರುವ ಆಡಿಯೋ ಬಗ್ಗೆ ಸ್ಪಷ್ಟನೆ ನೀಡಿರುವ ಶಾಸಕ ಗಣೇಶ್ ಹುಕ್ಕೇರಿ ಅವರು, 'ಪೋನ್‌ನಲ್ಲಿ ಹೇಳಿರುವುದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ. ತಮಾಷೆಗಾಗಿ ಹೇಳಿದ್ದೇನೆ. ಕಾಂಗ್ರೆಸ್ ಪಕ್ಷ ನಮಗೆ ಬಹಳಷ್ಟುನೀಡಿದೆ. ಉನ್ನತ ಹುದ್ದೆಯನ್ನು ನೀಡಿದೆ. ಪಕ್ಷ ಬಿಟ್ಟು ಹೋಗುವುದಿಲ್ಲ. ಲೋಕಸಭಾ ಚುನಾವಣೆ ಬರುತ್ತಿದೆ. ನಮ್ಮ ತಂದೆಯವರು ಚಿಕ್ಕೋಡಿಯಿಂದ ಸ್ಪರ್ಧಿಸಲಿದ್ದಾರೆ. ಅವರ ಗೆಲುವಿಗಾಗಿ ಕೆಲಸ ಮಾಡುತ್ತೇನೆ' ಎಂದು ಹೇಳಿದರು.

ಪ್ರಕಾಶ್ ಹುಕ್ಕೇರಿ ಹೇಳಿದ್ದೇನು?
ಗಣೇಶ್ ಹುಕ್ಕೇರಿ ಬಿಜೆಪಿ ಸೇರುವ ಕುರಿತು ಸಂಸದ ಪ್ರಕಾಶ್ ಹುಕ್ಕೇರಿ ಪ್ರತಿಕ್ರಿಯೆ ನೀಡಿದ್ದಾರೆ. 'ನಮ್ಮ ಕುಟುಂಬದವರು ಯಾರೂ ಬಿಜೆಪಿಗೆ ಹೋಗುವುದಿಲ್ಲ. ಗಣೇಶ್ ಹುಕ್ಕೇರಿ ಅವರೇ ಈ ಕುರಿತು ಹೇಳಿಕೆ ನೀಡಿದ್ದಾರೆ. ವದಂತಿಗಳಿಗೆ ಜನರು ಕಿವಿಗೊಡಬಾರದು' ಎಂದು ಹೇಳಿದರು.

'ಯಾರೂ ಎಲ್ಲೂ ಹೋಗಲ್ಲ'
ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಅವರು ಬೆಳಗಾವಿಯಲ್ಲಿ ಮಾತನಾಡಿದ್ದು, 'ಹಲವು ತಿಂಗಳುಗಳಿಂದ ಇಂತಹ ಸುದ್ದಿ ಕೇಳಿ ಬರುತ್ತಿದೆ. ಯಾರೂ ಎಲ್ಲೂ ಹೋಗಲ್ಲ. ಕೆಲವು ವೈಯಕ್ತಿಕ ಕೆಲಸಗಳಿಗಾಗಿ ಶಾಸಕರು ದೆಹಲಿಗೆ ತೆರಳಿದ್ದಾರೆ' ಎಂದು ಸ್ಪಷ್ಟನೆ ನೀಡಿದರು.

ಗಣೇಶ್ ಹುಕ್ಕೇರಿ ಹೇಳಿದ್ದೇನು?
ಮಾಧ್ಯಮವೊಂದರ ಪ್ರತಿನಿಧಿ ಜೊತೆ ಮಾತನಾಡಿದ ಗಣೇಶ್ ಹುಕ್ಕೇರಿ ಅವರು 'ನಾನು ಜನವರಿ 19ರಂದು ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೇರಲಿದ್ದಾನೆ. ಬೇರೆಯವರ ಹೆಸರು ಹೇಳಲ್ಲ. ನಾನಂತೂ ಬಿಜೆಪಿಗೆ ಹೋಗುತ್ತೇನೆ' ಎಂದು ಹೇಳಿರುವ ಆಡಿಯೋ ವೈರಲ್ ಆಗಿದೆ.

ಎರಡು ಬಾರಿ ಶಾಸಕರಾಗಿ ಆಯ್ಕೆ
ಗಣೇಶ್ ಹುಕ್ಕೇರಿ ಅವರು 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2014ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಗಣೇಶ್ ಹುಕ್ಕೇರಿ ಅವರು 94,636 ಮತಗಳನ್ನು ಪಡೆದು ಜಯಗಳಿಸಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು.
2018ರ ವಿಧಾನಸಭೆ ಚುನಾವಣೆಯಲ್ಲಿ 91,467 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಕಾಂಗ್ರೆಸ್ ಅವರನ್ನು ಮುಖ್ಯ ಸಚೇತಕರಾಗಿ ಆಯ್ಕೆ ಮಾಡಿದೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್












Click it and Unblock the Notifications