ಬೆಳಗಾವಿಯಲ್ಲಿ ಮಹಿಳೆಯನ್ನು ಜೀವಂತವಾಗಿ ಸುಟ್ಟರು
ಬೆಳಗಾವಿ, ಫೆ. 25 : ನೂರಾರು ಜನರ ಸಮ್ಮುಖದಲ್ಲೇ ಮಹಿಳೆಯ ಮೇಲೆ ಸೀಮೆಎಣ್ಣೆ ಸುರಿದು ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನಿಪ್ಪಾಣಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ನಿಪ್ಪಾಣಿಯ ಎಪಿಎಂಸಿ ಆವರಣದ ಸಮೀಪ ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ ಮತ್ತು ಕೊಲೆಯಾದ ಮಹಿಳೆ ಯಾರು? ಎಂಬ ಮಾಹಿತಿಯನ್ನು ಲಭ್ಯವಾಗಿಲ್ಲ.

ಪ್ರಾಥಮಿಕ ಮಾಹಿತಿಗಳ ಅನ್ವಯ ಮಹಾರಾಷ್ಟ್ರದಿಂದ ಆಗಮಿಸಿದ್ದ ನಾಲ್ವರು ಈ ಕೃತ್ಯ ಎಸಗಿದ್ದಾರೆ. ಮೊದಲು ಮಹಿಳೆಯನ್ನು ಹಿಡಿದ ನಾಲ್ವರು ಆಕೆಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನೆ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ನಿಪ್ಪಾಣಿ ಪೊಲೀಸರು ತೆರಳುವ ವೇಳೆಗೆ ಮಹಿಳೆ ಮೃತಪಟ್ಟಿದ್ದರು. ಮೃತಪಟ್ಟ ಮಹಿಳೆ ಯಾರು? ಎಂದು ತಿಳಿದುಬಂದಿಲ್ಲ ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.












Click it and Unblock the Notifications