ರಾಜ್ಯದ ಒಂದು ಮಗುವಿಗೂ ಕೂಡ ಕಳಪೆ ಆಹಾರ ಹೋಗಬಾರದು: ಅಧಿಕಾರಿಗಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಖಡಕ್ ಸೂಚನೆ
ಬೆಳಗಾವಿ, ಡಿಸೆಂಬರ್ 12: ನಮ್ಮ ಗುರಿ ಸಧೃಡ ಭಾರತ, ಸದೃಢ ಕರ್ನಾಟಕ ನಿರ್ಮಾಣ. ನಾವು ಮಕ್ಕಳ ಜೀವ ಮತ್ತು ಜೀವನದ ಜೊತೆ ಕೆಲಸ ಮಾಡುತ್ತಿದ್ದೇವೆ. ಹಾಗಾಗಿ ಎಲ್ಲರೂ ಸೂಕ್ತ ರೀತಿಯಿಂದ. ಇಲಾಖೆಗೆ ಕೆಟ್ಟ ಹೆಸರು ಬರದಂತೆ ಕೆಲಸ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಬೆಳಗಾವಿಯಲ್ಲಿ ಮಂಗಳವಾರ ಎಲ್ಲಾ ಜಿಲ್ಲೆಗಳ ಉಪನಿರ್ದೇಶಕರ ಸಭೆ ನಡೆಸಿ ಮಾತನಾಡಿದ ಅವರು, ಪ್ರತಿಯೊಬ್ಬರೂ ಆಯಾ ಜಿಲ್ಲೆಯ, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಇಲಾಖೆಯ ಕಾರ್ಯವೈಖರಿಯ ಕುರಿತು ಸ್ಪಷ್ಟವಾದ ಮಾಹಿತಿ ನೀಡಬೇಕು. ಜನಪ್ರತಿನಿಧಿಗಳಿಗೆ ಗೌರವ ಕೊಟ್ಟು ಕೆಲಸ ನಿರ್ವಹಿಸಬೇಕು. ಆಹಾರದ ಗುಣಮಟ್ಟದ ಬಗ್ಗೆ ಗಮನಕೊಡಬೇಕು. ಯಾವುದೇ ಒಂದು ಮಗುವಿಗೂ ಕೂಡ ಕಳಪೆ ಆಹಾರ ಹೋಗಕೂಡದು. ಎಲ್ಲೂ ಸಮಸ್ಯೆಯಾಗಬಾರದು ಎಂದು ಅಧಿಕಾರಿಗಳಿಗೆ ಸ್ಪಷ್ಟವಾಗಿ ಸೂಚಿಸಿದರು.

ನಾವು ಮಂತ್ರಿಗಳು ಇಂದು ಇರಬಹುದು, 5 ವರ್ಷದ ಬಳಿಕ ಬದಲಾಗಬಹುದು. ಆದರೆ ಅಧಿಕಾರಿಗಳು ನಿರಂತರವಾಗಿ ಇರುವವರು. ಯಾವುದೇ ಗೊಂದಲ ಸೃಷ್ಟಿಯಾಗದಂತೆ ಕೆಲಸ ನಿರ್ವಹಿಸಬೇಕು. ಏನೇ ಸಮಸ್ಯೆಗಳಿದ್ದರೂ ತಕ್ಷಣ ನನ್ನ ಗಮನಕ್ಕೆ ತರಬೇಕು ಹಾಗೂ ಸರಿಪಡಿಸಿಕೊಳ್ಳಬೇಕು. ಆಹಾರದ ಗುಣಮಟ್ಟ ತೃಪ್ತಿಕರವಾಗಿಲ್ಲ ಎಂದರೆ ಅಂತಹ ಪೂರೈಕೆದಾರರನ್ನು ರದ್ದುಪಡಿಸೋಣ ಎಂದು ಹೇಳಿದರು.
ಇನ್ನು ಆಹಾರದ ಪ್ರಮಾಣ ಮತ್ತು ಗುಣಮಟ್ಟ ಎರಡೂ ಸರಿಯಾಗಿರಬೇಕು. ಗ್ಯಾಸ್, ತರಕಾರಿಯ ಹಣ ಮತ್ತು ಸಂಬಳ ಎಲ್ಲವೂ ಸರಿಯಾಗಿ ಹೋಗಬೇಕು. ನಿರಂತರವಾಗಿ ಅಂಗನವಾಡಿ ಕಾರ್ಯಕರ್ತರ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಬೇಕು. ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್ ಎಲ್ಲರಿಗೂ ಕಡ್ಡಾಯವಾಗಿ ತಲುಪಬೇಕು. ವಾಹನಗಳ ಬಾಕಿ ಬಾಡಿಗೆ ಹಣವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಒಟ್ಟಾರೆ ಇಲಾಖೆಗೆ ಒಳ್ಳೆಯ ರೀತಿಯ ಹೆಸರು ಬರುವಂತೆ ಎಲ್ಲರೂ ಸೇರಿ ಕೆಲಸ ಮಾಡಿ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಬೆಳಗಾವಿಯ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ ಪ್ರಕಾಶ್, ನಿರ್ದೇಶಕಿ ಅರ್ಚನ, ವಿಶೇಷ ಕರ್ಯವ್ಯವಾಧಿಕಾರಿ ನಿಶ್ಚಲ ಬಿ.ಹೆಚ್ ಉಪಸ್ಥಿತರಿದ್ದರು.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications