Get Updates
Get notified of breaking news, exclusive insights, and must-see stories!

Dudhsagar Falls: ವಿಶ್ವವಿಖ್ಯಾತ ದೂಧ್‌ ಸಾಗರದ ಜಲಪಾತದ ಅದ್ಭುತ ದೃಶ್ಯ ಡ್ರೋಣ್ ಕಣ್ಣಲ್ಲಿ ಸೆರೆ-ವೈರಲ್‌

Dudhsagar Falls: ಈಗಾಗಲೇ ಭಾರೀ ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಪ್ರಮುಖ ಜಲಮೂಲಗಳು ಅಪಾಯದ ಮಟ್ಟದಲ್ಲಿ ಉಕ್ಕಿ ಹರಿಯುತ್ತಿವೆ. ಇನ್ನು ಫಾಲ್ಸ್‌ಗಳು ಕೂಡ ಧುಮ್ಮಿಕ್ಕುತ್ತಿದ್ದು, ಈ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಹಾಗೆಯೇ ಇದೀಗ ವಿಶ್ವವಿಖ್ಯಾತ ದೂದ್ ಸಾಗರದ ಜಲಪಾತ ಧುಮ್ಮಿಕ್ಕುತ್ತಿದ್ದು, ಈ ಸುಂದರ ದೃಶ್ಯ ಡ್ರೋಣ್ ಕಣ್ಣಲ್ಲಿ ಸೆರೆಯಾಗಿದೆ.

100 ಅಡಿ ಅಗಲದ ದೂಧ್ ಸಾಗರ ಜಲಪಾತ ಬೆಳಗಾವಿ ವಾಸ್ಕೊ ಡ ಗಾಮಾ ರೈಲು ಮಾರ್ಗದ ಮಧ್ಯೆ ಇದ್ದು, ಬೆಳಗಾವಿಯಿಂದ 80 ಕಿಲೋ ಮೀಟರ್‌ ದೂರದಲ್ಲಿದೆ. ಇದೀಗ ಭಾರೀ ಮಳೆ ಹಿನ್ನೆಲೆ ಮಹದಾಯಿ ನದಿ ನೀರು ಅಪಾಯದ ಮಟ್ಟ ಮೀರಿ ಉಕ್ಕಿ ಹರಿಯುತ್ತಿದ್ದು, ಇದರ ನೀರೇ ಜಲಪಾತದ 1,017 ಅಡಿ ಮೇಲಿನಿಂದ ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದೆ.

World famous Dudhsagar Falls overflowing video viral

ಮಹದಾಯಿ ನದಿ ನೀರು ಸಾಗರದಂತೆ ಹರಿದುಬರುತ್ತಿರುವ ಹಿನ್ನೆಲೆ ದೂದ್ ಸಾಗರ ಜಲಪಾತದಲ್ಲಿ ಜಲವೈಭವ ಸೃಷ್ಟಿಯಾಗಿದ್ದು, ಇದು ಡ್ರೋನ್‌ ಕಣ್ಣಿಗೆ ಸೆರೆಯಾಗಿದೆ. ಇನ್ನು ಈ ಸ್ವರ್ಗದಂತಹ ಅದ್ಭುತ ದೃಶ್ಯ ಎಂಥವರನ್ನು ತನ್ನೆಡೆಗೆ ಸೆಳೆದೇ ಬಿಡುತ್ತದೆ. ಕ್ಯಾಸ್ಟಲ್ ರಾಕ್ ರೈಲ್ವೆ ನಿಲ್ದಾಣದಿಂದ ಸ್ವಲ್ಪ ದೂರ ಹೋದರೆ ಈ ಜಲಪಾತ ಸಿಗುತ್ತದೆ.

ಜಲಾಶಯದಿಂದ ನೀರು ಬಿಡುಗಡೆಗೆ ಕ್ರಮ: ಬೆಳಗಾವಿ ಜಿಲ್ಲೆಯಲ್ಲಿ ಸಂಭವನೀಯ ಪ್ರವಾಹದ ಹಿನ್ನೆಲೆ ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಗುರುತಿಸಲಾಗಿರುವ 427 ಕಾಳಜಿ ಕೇಂದ್ರಗಳಿಗೆ ಎಲ್ಲ ತಹಶೀಲ್ದಾರರು ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಬೇಕು. ತುರ್ತು ಸಂದರ್ಭದಲ್ಲಿ ಗ್ರಾಮಸ್ಥರನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಉಂಟಾಗಬಹುದಾದ ಅತಿವೃಷ್ಟಿ/ಪ್ರವಾಹ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ಜುಲೈ 24) ಜರುಗಿದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ‌ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಲ್ಲದೆ, ಬೋಟ್‌ಗಳನ್ನು ಸದಾ ಸನ್ನದ್ಧ ಸ್ಥಿತಿಯಲ್ಲಿಡಬೇಕು. ಅಗತ್ಯವಿದ್ದರೆ ಬಾಡಿಗೆ ಬೋಟ್‌ಗಳನ್ನು ಪಡೆಯಲು ಕ್ರಮ ವಹಿಸಬೇಕು ಎಂದು ತಿಳಿಸಿದರು.

ಐದು ಬೋಟ್‌ಗಳನ್ನು ಖರೀದಿಸಿ ಅವುಗಳ ಬಳಕೆಯ ಕುರಿತು ಅಗ್ನಿಶಾಮಕ ದಳದ ಸಿಬ್ಬಂದಿಗೆ ತರಬೇತಿ ನೀಡಲಾಗುವುದು. ತುರ್ತು ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆಗೆ ಅನುಕೂಲವಾಗುವಂತೆ ಸರ್ಚ್ ಲೈಟ್‌ಗಳನ್ನು ಕೂಡ‌ ಒದಗಿಸಲಾಗುವುದು ಎಂದು ಹೇಳಿದರು.

ನದಿತೀರದ ಗ್ರಾಮಗಳ ಕುರಿತು ತಹಶೀಲ್ದಾರರಿಂದ ಮಾಹಿತಿಯನ್ನು ಪಡೆದುಕೊಂಡ ಜಿಲ್ಲಾಧಿಕಾರಿಗಳು, ಪ್ರವಾಹ ಬಾಧಿತಗೊಳ್ಳಲಿರುವ ಕೃಷ್ಣಾ, ಮಲಪ್ರಭಾ ಹಾಗೂ ಘಟಪ್ರಭಾ ನದಿತೀರದ ಗ್ರಾಮಗಳಲ್ಲಿ ತಹಶೀಲ್ದಾರರು, ನೋಡಲ್ ಅಧಿಕಾರಿಗಳು, ಅಗ್ನಿಶಾಮಕ ಮತ್ತು ಪೊಲೀಸ್ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು ಎಂದು ತಿಳಿಸಿದರು.

ಮಂಗಾವತಿ, ಜುಗೂಳ, ಶಿರಗುಪ್ಪಿ, ಕುಸನಾಳ, ಬಳಜಿವಾಡ, ಮುಳವಾಡ, ಉಗಾರ್, ಯಡೂರ, ಮಾಂಜರಿ, ತಂಗಡಗಿ, ಶಿನಾಳ, ಝಂಜರವಾಡ, ಸತ್ತಿ, ಸವದಿ, ನಾಗನೂರ ಪಿ.ಕೆ., ಬಳವಾಡ, ಭಿಂವಶಿ, ಕೋಡಣಿ, ಭೋಜ್, ಹೊನ್ನುರಗಿ ಹಾಗೂ ತೋಟದ ವಸತಿ ಸೇರಿದಂತೆ ಕಳೆದ ಬಾರಿ ಪ್ರವಾಹದಿಂದ ಬಾಧಿತಗೊಂಡಿದ್ದ ಗ್ರಾಮಗಳ ಪರಿಸ್ಥಿತಿ ಮೇಲೆ ನಿರಂತರ ನಿಗಾ ವಹಿಸಬೇಕು ಎಂದರು.

ಘಟಪ್ರಭಾ ನದಿ ಪ್ರವಾಹದಿಂದ ಬಾಧಿತಗೊಳ್ಳಲಿರುವ ಬಸನಾಳ, ಕೋಟನಾಳ, ಇದಲ್ಲದೇ ಸಂಕೇಶ್ವರದ ನದಿಗಲ್ಲಿ, ಕುಂಬಾರ ಓಣಿ ಮತ್ತಿತರ ಪ್ರದೇಶಗಳಲ್ಲಿಯೂ ನಿಗಾ ವಹಿಸಬೇಕು ಎಂದರು. ಇನ್ನು ಮಳೆಯಿಂದ ಹಾನಿಗೊಳಗಾಗಿರುವ ರಸ್ತೆಗಳನ್ನು ದುರಸ್ತಿಗೊಳಿಸುವಂತೆ ತಹಶೀಲ್ದಾರರಿಗೆ ಸೂಚನೆ ನೀಡಿದರು.

ನೀರು ಬಿಡುಗಡೆಗೆ ಕ್ರಮ: ನಮ್ಮ ಜಿಲ್ಲೆಯ ನದಿಗಳಿಂದ ಆಲಮಟ್ಟಿ ಜಲಾಶಯಕ್ಕೆ 1.80 ಲಕ್ಷ ಕ್ಯೂಸೆಕ್ ನೀರಿನ ಒಳಹರಿವು ಇದ್ದು, ಆಲಮಟ್ಟಿಯಿಂದ ಇಂದಿನಿಂದ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆಗೊಳಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ಘಟಪ್ರಭಾ ಜಲಾಶಯದಲ್ಲಿ ಸದ್ಯದ ಶೇಕಡ 80ರಷ್ಟು ಸಂಗ್ರಹಮಟ್ಟವನ್ನು ಆಧರಿಸಿ ಇಂದಿನಿಂದ 10,000 ಕ್ಯೂಸೆಕ್ ನೀರು ಬಿಡುಗಡೆಯ ಕುರಿತು ನಿರ್ಧರಿಸಲಾಗುವುದು. ನೀರು ಬಿಡುಗಡೆಯ ಕುರಿತು ಎಲ್ಲಾ ತಹಶೀಲ್ದಾರರು ಹಾಗೂ ಸಾರ್ವಜನಿಕರಿಗೆ ಮಾಹಿತಿಯನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಯಾದ್ಯಂತ ಅನೇಕ ತಳಮಟ್ಠದ ಸೇತುವೆಗಳು ಮುಳುಗಡೆಯಾಗಿದ್ದು, ಸುರಕ್ಷತಾ ದೃಷ್ಟಿಯಿಂದ‌ ಬ್ಯಾರಿಕೇಡ್ ಅಳವಡಿಸಲಾಗಿರುತ್ತದೆ. ಬಹುತೇಕ ಕಡೆಗಳಲ್ಲಿ ಪರ್ಯಾಯ ರಸ್ತೆಗಳಿವೆ. ಆದಾಗ್ಯೂ ಪ್ರತಿಯೊಂದು ಸೇತುವೆಗಳ ಕಡೆ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+