6 ತಿಂಗಳಲ್ಲಿ ಯಡಿಯೂರಪ್ಪ ಸಿಎಂ ಆಗೋದು ಗ್ಯಾರೆಂಟಿ: ಉಮೇಶ್ ಕತ್ತಿ

Recommended Video

      6 ತಿಂಗಳಲ್ಲಿ ಯಡಿಯೂರಪ್ಪ ಸಿಎಂ ಆಗೋದು ಗ್ಯಾರೆಂಟಿಯಂತೆ | Oneindia Kannada

      ಬೆಳಗಾವಿ, ಜುಲೈ 02: ಇನ್ನು ಆರು ತಿಂಗಳಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುವುದು ಗ್ಯಾರೆಂಟಿ, ಬಿಜೆಪಿ ಅಧಿಕಾರಿ ಹಿಡಿಯುವುದು ಗ್ಯಾರೆಂಟಿ ಎಂದು ಭವಿಷ್ಯ ನುಡಿದಿದ್ದಾರೆ ಬಿಜೆಪಿ ಶಾಸಕ ಉಮೇಶ್ ಕತ್ತಿ.

      ಸಂಕೇಶ್ವರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಜೆಪಿಯ ಯಾವ ಶಾಸಕರೂ ಕಾಂಗ್ರೆಸ್‌ನ ಸಂಪರ್ಕದಲ್ಲಿಲ್ಲ ಸಚಿವ ರಮೇಶ್ ಜಾರಕಿಹೊಳಿ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದ್ದಾರೆ ಅಷ್ಟೆ ಎಂದು ಅವರು ಹೇಳಿದರು.

      ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದರು. ಉಮೇಶ್ ಕತ್ತಿ ಅವರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂಬ ಗಾಳಿ ಸುದ್ದಿ ಹರಿದಾಡಿತ್ತು ಹಾಗಾಗಿ ಅವರು ಸ್ಪಷ್ಟೀಕರಣ ನೀಡಿದ್ದಾರೆ.

      Yeddyurappa will become CM in six months: Umesh Katti

      ಮುಂದುವರೆದು ಮಾತನಾಡಿದ ಉಮೇಶ್ ಕತ್ತಿ ಅವರು, 'ಕುಮಾರಸ್ವಾಮಿ ಅವರು ಬಜೆಟ್‌ನಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಬದಲು ಕೇವಲ ಬೆಳೆ ಸಾಲಮನ್ನಾ ಮಾಡಲಿದ್ದಾರೆ ಎಂಬ ಮಾಹಿತಿ ಹಾಗೇನಾದರೂ ಮಾಡಿದಲ್ಲಿ ಬಿಜೆಪಿ ಪ್ರತಿಭಟಿಸಲಿದೆ ಎಂದರು.

      ಈ ಹಿಂದೆ ಬಿಜೆಪಿಗೆ ಅಧಿಕಾರಿ ಬಿಟ್ಟುಕೊಡದೆ ವಚನಭ್ರಷ್ಟ ಎನಿಸಿಕೊಂಡಿರುವ ಕುಮಾರಸ್ವಾಮಿ ಈಗ ರೈತರ ಸಂಪೂರ್ಣ ಸಾಲಮನ್ನಾ ಮಾಡದೆ ವಚನ ಭ್ರಷ್ಟ ಅನಿಸಿಕೊಳ್ಳಲು ಹೊರಟಿದ್ದಾರೆ ಎಂದು ಅವರು ಹೇಳಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+