ವಿಡಿಯೋ: ಗೋಕಾಕ್‌ನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ!
ಬೆಳಗಾವಿ, ಜು.18: ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ಹೊರವಲಯದ ಮಹಂತೇಶ ನಗರದ ಸಮೀಪದ ಮಾಲತಿನಿ ಗ್ರಾಮದ ಮಂಜುನಾಥ್ ಶಂಕರ ಮುರುಕಿಬಾವಿ ಎಂಬ ವ್ಯಕ್ತಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
Recommended Video

ಮಾಲತಿನಿ ಗ್ರಾಮದ ಮಂಜುನಾಥ್ ಶಂಕರ ಮುರುಕಿಬಾವಿ ಅವರನ್ನು ಕೊಲೆ ಮಾಡಿದ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಈ ಘಟನೆ ನಡೆದಿರುವ ಸ್ಥಳಕ್ಕೆ ಗೋಕಾಕ್ ನಗರ ಸಿಪಿಐ ಗೋಪ್‌ಪಾಲ್ ರಾಥೋಡ್ ಸೇರಿ, ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.
ಈ ಹತ್ಯೆ ಯಾವ ಕಾರಣಕ್ಕಾಗಿ ನಡೆಸಲಾಗಿದೆ ಎಂಬುವುದು ಇನ್ನಷ್ಟೇ ತನಿಖೆಯ ಬಳಿಕ ತಿಳಿದು ಬರಬೇಕಾಗಿದೆ. ಹಾಗೆಯೇ ಯಾರು ನಡೆಸಿದ್ದಾರೆ ಎಂಬುವುದು ಕೂಡಾ ಇನ್ನಷ್ಟೇ ತಿಳಿದು ಬರಬೇಕಾಗಿದೆ.
ಇನ್ನು ಗೋಕಾಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಾಗೆಯೇ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ ಎಂದು ತಿಳಿದು ಬಂದಿದೆ.
(ಒನ್‌ಇಂಡಿಯಾ ಸುದ್ದಿ)












Click it and Unblock the Notifications