• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಗಳ ಜೊತೆಗೆ ಅನೈತಿಕ ಸಂಬಂಧ; ಹುಕ್ಕೇರಿಯಲ್ಲಿ ಯುವಕನ ಬರ್ಬರ ಕೊಲೆ

By ಬೆಳಗಾವಿ ಪ್ರತಿನಿಧಿ
|

ಬೆಳಗಾವಿ, ಏಪ್ರಿಲ್ 03: ತಮ್ಮ ಮನೆ ಮಗಳ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಎಂಬ ಆರೋಪದ ಮೇಲೆ ಯುವಕನೊಬ್ಬನನ್ನು ಕುಡುಗೋಲಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಳಗಾವಿಯ ಹುಕ್ಕೇರಿ ತಾಲೂಕಿನ ನರಸಿಂಗಪುರ ಗ್ರಾಮದಲ್ಲಿ ನಡೆದಿದೆ.

ನರಸಿಂಗಪುರ ಗ್ರಾಮದ ನಿವಾಸಿ ಬೀರಪ್ಪ ವಿಠಲ ಕಮತಿ (27) ಕೊಲೆಯಾದ ಯುವಕ. ಬೀರಪ್ಪ ದುಂಡಪ್ಪಾ ಬಡಾಯಿ ಮತ್ತು ಸತ್ತೆಪ್ಪಾ ಸಿದ್ದಪ್ಪಾ ಬಡಾಯಿ ಎಂಬುವರು ಯುವಕನನ್ನು ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ. ಪೊಲೀಸರು ಈ ಇಬ್ಬರನ್ನೂ ಬಂಧಿಸಿದ್ದಾರೆ.

ಶಿವಮೊಗ್ಗ; ಅನೈತಿಕ ಸಂಬಂಧ ಗೊತ್ತಾಗಿದ್ದಕ್ಕೆ ಮಗಳನ್ನೇ ಕೊಂದ ತಾಯಿ

ಆರೋಪಿಗಳು ಅದೇ ಗ್ರಾಮದವರಾಗಿದ್ದು, ಇವರ ಮನೆಯ ಮಗಳ ಜೊತೆ ಬೀರಪ್ಪ ಅನೈತಿಕ ಸಂಬಂಧ ಹೊಂದಿದ್ದ ವಿಷಯ ತಿಳಿದು ಕುಡುಗೋಲಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Two were arrested for murdering Youth for having illicit relationship with their daughter in hukkeri of belagavi district
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X